1 Coríntios 3

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.
1 Eu, porém, irmãos, não vos pude falar como a espirituais, e sim como a carnais, como a crianças em Cristo.
2 ನಾನು ನಿಮಗೆ ಮಾಡಿದ ಉಪದೇಶವು ಗಟ್ಟಿಯಾದ ಆಹಾರದಂತಿರದೆ ಹಾಲಿನಂತಿತ್ತು; ಏಕೆಂದರೆ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವಿನ್ನೂ ಸಿದ್ಧರಾಗಿರಲಿಲ್ಲ. ಈಗಲೂ ಸಹ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವು ಸಿದ್ಧರಾಗಿಲ್ಲ.
2 Leite vos dei a beber, não vos dei alimento sólido; porque ainda não podíeis suportá-lo. Nem ainda agora podeis, porque ainda sois carnais.
3 ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.
3 Porquanto, havendo entre vós ciúmes e contendas, não é assim que sois carnais e andais segundo o homem?
4 ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ಮತ್ತೊಬ್ಬನು “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ನೀವು ಹೀಗೆ ವಾಗ್ವಾದ ಮಾಡುವಾಗ ಲೋಕದ ಜನರಂತೆಯೇ ವರ್ತಿಸುವವರಾಗಿದ್ದೀರಿ.
4 Quando, pois, alguém diz: Eu sou de Paulo, e outro: Eu, de Apolo, não é evidente que andais segundo os homens?
5 ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.
5 Quem é Apolo? E quem é Paulo? Servos por meio de quem crestes, e isto conforme o Senhor concedeu a cada um.
6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.
6 Eu plantei, Apolo regou; mas o crescimento veio de Deus.
7 ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ.
7 De modo que nem o que planta é alguma coisa, nem o que rega, mas Deus, que dá o crescimento.
8 ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.
8 Ora, o que planta e o que rega são um; e cada um receberá o seu galardão, segundo o seu próprio trabalho.
9 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ.
9 Porque de Deus somos cooperadores; lavoura de Deus, edifício de Deus sois vós.
10 ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.
10 Segundo a graça de Deus que me foi dada, lancei o fundamento como prudente construtor; e outro edifica sobre ele. Porém cada um veja como edifica.
11 ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು.
11 Porque ninguém pode lançar outro fundamento, além do que foi posto, o qual é Jesus Cristo.
12 ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.
12 Contudo, se o que alguém edifica sobre o fundamento é ouro, prata, pedras preciosas, madeira, feno, palha,
13 ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.
13 manifesta se tornará a obra de cada um; pois o Dia a demonstrará, porque está sendo revelada pelo fogo; e qual seja a obra de cada um o próprio fogo o provará.
14 ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು.
14 Se permanecer a obra de alguém que sobre o fundamento edificou, esse receberá galardão;
15 ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು.
15 se a obra de alguém se queimar, sofrerá ele dano; mas esse mesmo será salvo, todavia, como que através do fogo.
16 ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ.
16 Não sabeis que sois santuário de Deus e que o Espírito de Deus habita em vós?
17 ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.
17 Se alguém destruir o santuário de Deus, Deus o destruirá; porque o santuário de Deus, que sois vós, é sagrado.
18 ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.
18 Ninguém se engane a si mesmo: se alguém dentre vós se tem por sábio neste século, faça-se estulto para se tornar sábio.
19 ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.
19 Porque a sabedoria deste mundo é loucura diante de Deus; porquanto está escrito: Ele apanha os sábios na própria astúcia deles.
20 “ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
20 E outra vez: O Senhor conhece os pensamentos dos sábios, que são pensamentos vãos.
21 ಆದ್ದರಿಂದ ನೀವು ಜನರ ಬಗ್ಗೆ ಹೆಚ್ಚಳಪಡಬಾರದು. ಸಮಸ್ತವೂ ನಿಮ್ಮದೇ.
21 Portanto, ninguém se glorie nos homens; porque tudo é vosso:
22 ಪೌಲ, ಅಪೊಲ್ಲೋಸ್ ಮತ್ತು ಕೇಫ ನಿಮ್ಮವರಾಗಿದ್ದಾರೆ. ಜಗತ್ತು, ಜೀವ, ಮರಣ ಮತ್ತು ವರ್ತಮಾನ ಹಾಗೂ ಭವಿಷ್ಯತ್ ಕಾಲಗಳ ಸಂಗತಿಗಳು ನಿಮ್ಮವೇ.
22 seja Paulo, seja Apolo, seja Cefas, seja o mundo, seja a vida, seja a morte, sejam as coisas presentes, sejam as futuras, tudo é vosso,
23 ನೀವು ಕ್ರಿಸ್ತನಿಗೆ ಸೇರಿದವರಾಗಿದ್ದೀರಿ. ಕ್ರಿಸ್ತನು ದೇವರಿಗೆ ಸೇರಿದವನಾಗಿದ್ದಾನೆ.
23 e vós, de Cristo, e Cristo, de Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Coríntios 3, comparar traduções ou montar um estudo — tudo direto pelo WhatsApp.