1 Crônicas 13

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ

Sair da comparação
1 ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.
1 E Davi consultou os capitães de milhares e centúrias, e cada líder.
2 ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು, “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.
2 Davi disse a toda a congregação de Israel: Se vos parecer bom, e que isto é do SENHOR nosso Deus, enviemos, aos nossos irmãos em todos os lugares, que restaram em toda a terra de Israel, e com eles também aos sacerdotes e levitas os quais estão nas suas cidades e arredores, para que eles possam se juntar a nós;
3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”
3 E tornemos a trazer para nós a arca do nosso Deus; porque não a buscamos nos dias de Saul.
4 ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು.
4 E toda a congregação disse que faria assim; porque a coisa era correta aos olhos de todo o povo.
5 ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.
5 Assim, Davi reuniu todo o Israel, desde Sior do Egito até a entrada de Hamate, para trazer a arca de Deus, de Quiriate-Jearim.
6 ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಆ ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.
6 E Davi e todo o Israel, subiu para Baalá, isto é, para Quiriate-Jearim, a qual pertencia a Judá, para de lá trazer a arca de Deus, o SENHOR que habita entre os querubins, sobre a qual é invocado o seu nome.
7 ಅಬೀನಾದ್ವಾನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.
7 E eles carregaram a arca de Deus em uma carruagem nova, da casa de Abinadabe; e Uzá e Aiô conduziram a carruagem.
8 ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.
8 E Davi e todo o Israel se alegravam diante de Deus com toda a sua força, e com cânticos, e com harpas, e com saltérios, e com adufes, e com címbalos, e com trombetas.
9 ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗರಿಸಿದವು. ಆಗ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು.
9 E, quando eles chegaram à eira de Quidom, Uzá estendeu a sua mão para segurar a arca; porque os bois tropeçavam.
10 ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.
10 E a ira do SENHOR foi acesa contra Uzá, e ele o feriu, porque pôs a sua mão na arca; e ali morreu diante de Deus.
11 ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.
11 E Davi ficou aborrecido, porque o SENHOR havia feito uma fenda sobre Uzá; porquanto aquele lugar é chamado de Perez-Uzá até este dia.
12 ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು.
12 E Davi ficou com temor de Deus naquele dia, dizendo: Como trarei para mim a arca de Deus?
13 ದಾವೀದನು ದೇವರಿಗೆ ಭಯಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಓಬೇದೆದೋಮನ ಮನಯಲ್ಲಿಯೇ ಬಿಟ್ಟನು. ಓಬೇದೆದೋಮನು ಗತ್ ಊರಿನವನು.
13 Assim, Davi não trouxe a arca até ele, na cidade de Davi; mas carregou-a para dentro da casa de Obede-Edom, o geteu.
14 ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.
14 E a arca de Deus permaneceu na casa da família de Obede-Edom, três meses. E o SENHOR abençoou a casa de Obede-Edom, e tudo o que ele tinha.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Crônicas 13, comparar traduções ou montar um estudo — tudo direto pelo WhatsApp.