1 Crônicas 18

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.
1 Depois disto, feriu Davi os filisteus e os humilhou; tomou a Gate e suas aldeias das mãos dos filisteus.
2 ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.
2 Também derrotou os moabitas, e assim ficaram por servos de Davi e lhe pagavam tributo.
3 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.
3 Também Hadadezer, rei de Zoba, foi derrotado por Davi, até Hamate, quando aquele foi restabelecer o seu domínio sobre o rio Eufrates.
4 ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.
4 Tomou-lhe Davi mil carros, sete mil cavaleiros e vinte mil homens de pé; Davi jarretou a todos os cavalos dos carros, menos para cem deles.
5 ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.
5 Vieram os siros de Damasco a socorrer a Hadadezer, rei de Zoba; porém Davi matou dos siros vinte e dois mil homens.
6 ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
6 Davi pôs guarnições na Síria de Damasco, e os siros ficaram por servos de Davi e lhe pagavam tributo; e o Senhor dava vitórias a Davi, por onde quer que ia.
7 ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.
7 Tomou Davi os escudos de ouro que havia com os oficiais de Hadadezer e os trouxe a Jerusalém.
8 ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.
8 Também de Tibate e de Cum, cidades de Hadadezer, tomou Davi mui grande quantidade de bronze, de que Salomão fez o mar de bronze, as colunas e os utensílios de bronze.
9 ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು
9 Ouvindo Toú, rei de Hamate, que Davi derrotara a todo o exército de Hadadezer, rei de Zoba,
10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
10 mandou seu filho Hadorão ao rei Davi, para o saudar e congratular-se com ele por haver pelejado contra Hadadezer e por havê-lo ferido (porque Hadadezer fazia guerra a Toú). Hadorão trouxe consigo objetos de ouro, de prata e de bronze,
11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.
11 os quais também o rei Davi consagrou ao Senhor , juntamente com a prata e ouro que trouxera de todas as mais nações: de Edom, de Moabe, dos filhos de Amom, dos filisteus e de Amaleque.
12 ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.
12 Também Abisai, filho de Zeruia, feriu a dezoito mil edomitas no vale do Sal.
13 ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
13 E pôs guarnições em Edom, e todos os edomitas ficaram por servos de Davi; e o Senhor dava vitórias a Davi, por onde quer que ia.
14 ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.
14 Reinou, pois, Davi sobre todo o Israel; julgava e fazia justiça a todo o seu povo.
15 ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.
15 Joabe, filho de Zeruia, era comandante do exército; Josafá, filho de Ailude, era cronista.
16 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.
16 Zadoque, filho de Aitube, e Abimeleque, filho de Abiatar, eram sacerdotes; e Sausa, escrivão.
17 ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.
17 Benaia, filho de Joiada, era o comandante da guarda real. Os filhos de Davi, porém, eram os primeiros ao lado do rei.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Crônicas 18, comparar traduções ou montar um estudo — tudo direto pelo WhatsApp.