1 João 1
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.
1 O que era desde o princípio, o que temos ouvido, o que temos visto com os nossos olhos, o que temos contemplado e as nossas mãos têm apalpado no tocante ao Verbo da vida -
2 ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.
2 porque a vida se manifestou, e nós a temos visto; damos testemunho e vos anunciamos a vida eterna, que estava no Pai e que se nos manifestou -,
3 ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.
3 o que vimos e ouvimos nós vos anunciamos, para que também vós tenhais comunhão conosco. Ora, a nossa comunhão é com o Pai e com o seu Filho Jesus Cristo.
4 ನಮ್ಮ ಸಂತೋಷವು ಪರಿಪೂರ್ಣವಾಗಲೆಂದು ನಾವು ನಿಮಗೆ ಈ ಸಂಗತಿಗಳನ್ನು ಬರೆಯುತ್ತಿದ್ದೇವೆ.
4 Escrevemo-vos estas coisas para que a vossa alegria seja completa.
5 ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.
5 A nova que dele temos ouvido e vos anunciamos é esta: Deus é luz e nele não há treva alguma.
6 ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ.
6 Se dizemos ter comunhão com ele, mas andamos nas trevas, mentimos e não seguimos a verdade.
7 ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.
7 Se, porém, andamos na luz como ele mesmo está na luz, temos comunhão recíproca uns com os outros, e o sangue de Jesus Cristo, seu Filho, nos purifica de todo pecado.
8 ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.
8 Se dizemos que não temos pecado, enganamo-nos a nós mesmos, e a verdade não está em nós.
9 ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.
9 Se reconhecemos os nossos pecados, {Deus aí está} fiel e justo para nos perdoar os pecados e para nos purificar de toda iniqüidade.
10 ನಾವು ಪಾಪಮಾಡಿಲ್ಲವೆಂದು ಹೇಳಿದರೆ ದೇವರನ್ನೇ ಸುಳ್ಳುಗಾರನನ್ನಾಗಿ ಮಾಡುವವರಾಗಿದ್ದೇವೆ ಮತ್ತು ದೇವರ ವಾಕ್ಯವನ್ನು ಒಪ್ಪಿಕೊಳ್ಳದವರಾಗಿದ್ದೇವೆ.
10 Se pensamos não ter pecado, nós o declaramos mentiroso e a sua palavra não está em nós.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 João 1, comparar traduções ou montar um estudo — tudo direto pelo WhatsApp.