1 Reis 15

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ನೆಬಾಟನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿದ್ದನು. ಯಾರೊಬ್ಬಾಮನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಹೊಸ ರಾಜನಾದನು.
1 E, no décimo oitavo ano do rei Jeroboão, filho de Nebate, Abias começou a reinar sobre Judá.
2 ಅಬೀಯಾಮನು ಮೂರು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾಲೋಮನ ಮಗಳು.
2 E três anos reinou em Jerusalém; e era o nome de sua mãe Maaca, filha de Absalão.
3 ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.
3 E andou em todos os pecados que seu pai tinha cometido antes dele; e seu coração não foi perfeito para com o Senhor , seu Deus, como o coração de Davi, seu pai.
4 ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.
4 Mas, por amor de Davi, o Senhor lhe deu uma lâmpada em Jerusalém, levantando seu filho depois dele e confirmando Jerusalém.
5 ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.
5 Porquanto Davi tinha feito o que era reto aos olhos do Senhor e não se tinha desviado de tudo o que lhe ordenara em todos os dias da sua vida, senão só no caso de Urias, o heteu.
6 ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯುದ್ಧವು ನಡೆಯುತ್ತಲೇ ಇರುತ್ತಿತ್ತು.
6 E houve guerra entre Roboão e Jeroboão todos os dias da sua vida.
7 ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆಯಲ್ಲಿ” ಬರೆದಿದೆ.
7 Quanto ao mais dos atos de Abias, e a tudo quanto fez, porventura, não está tudo escrito no Livro das Crônicas dos Reis de Judá? Também houve guerra entre Abias e Jeroboão.
8 ಅಬೀಯಾಮನು ಸತ್ತಾಗ, ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯಾಮನ ನಂತರ ಅವನ ಮಗನಾದ ಆಸನು ಹೊಸ ರಾಜನಾದನು.
8 E Abias dormiu com seus pais, e o sepultaram na Cidade de Davi; e Asa, seu filho, reinou em seu lugar.
9 ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ರಾಜನಾದನು.
9 E, no vigésimo ano de Jeroboão, rei de Israel, começou Asa a reinar em Judá
10 ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.
10 e quarenta e um anos reinou em Jerusalém; e era o nome de sua mãe Maaca, filha de Absalão.
11 ಆಸನು ತನ್ನ ಪೂರ್ವಿಕನಾದ ದಾವೀದನು ಮಾಡಿದಂತೆ, ಯೆಹೋವನು ಇಚ್ಛಿಸಿದ ಕಾರ್ಯಗಳನ್ನೇ ಮಾಡಿದನು.
11 E Asa fez o que era reto aos olhos do Senhor , como Davi, seu pai,
12 ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.
12 porque tirou da terra os rapazes escandalosos, e tirou todos os ídolos que seus pais fizeram,
13 ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.
13 e até a Maaca, sua mãe, removeu para que não fosse rainha, porquanto tinha feito um horrível ídolo a Aserá; também Asa desfez o seu ídolo horrível e o queimou junto ao ribeiro de Cedrom.
14 ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.
14 Os altos, porém, se não tiraram; todavia, foi o coração de Asa reto para com o Senhor todos os seus dias.
15 ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು.
15 E à Casa do Senhor trouxe as coisas consagradas de seu pai e as coisas que ele mesmo consagrara: prata, e ouro, e utensílios.
16 ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧವು ನಡೆಯುತ್ತಿತ್ತು.
16 E houve guerra entre Asa e Baasa, rei de Israel, todos os seus dias.
17 ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಿದನು.
17 Porque Baasa, rei de Israel, subiu contra Judá e edificou a Ramá, para que a ninguém fosse permitido sair, nem entrar junto a Asa, rei de Judá.
18 ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.
18 Então, Asa tomou toda a prata e ouro que ficara nos tesouros da Casa do Senhor e os tesouros da casa do rei, e os entregou nas mãos de seus servos, e os enviou a Ben-Hadade, filho de Tabrimom, filho de Heziom, rei da Síria, que habitava em Damasco, dizendo:
19 ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”
19 Aliança há entre mim e ti, entre meu pai e teu pai; vês aqui que te mando um presente, prata e ouro; vai e anula a tua aliança com Baasa, rei de Israel, para que se retire de sobre mim.
20 ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
20 E Ben-Hadade deu ouvidos ao rei Asa, e enviou os capitães dos exércitos que tinha contra as cidades de Israel, e feriu a Ijom, e a Dã, e a Abel-Bete-Maaca, e a toda a Quinerete, com toda a terra de Naftali.
21 ಈ ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಆ ಪಟ್ಟಣದಿಂದ ತಿರ್ಚಕ್ಕೆ ಹಿಂದಿರುಗಿದನು.
21 E sucedeu que, ouvindo-o Baasa, deixou de edificar a Ramá e ficou em Tirza.
22 ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.
22 Então, o rei Asa fez apregoar por toda a Judá que todos, sem exceção, trouxessem as pedras de Ramá e a sua madeira com que Baasa edificara; e com elas edificou o rei Asa a Geba de Benjamim e a Mispa.
23 ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು.
23 Quanto ao mais de todos os atos de Asa, e a todo o seu poder, e a tudo quanto fez, e às cidades que edificou, porventura, não está tudo escrito no Livro das Crônicas dos Reis de Judá? Porém, no tempo da sua velhice, padeceu dos pés.
24 ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.
24 E Asa dormiu com seus pais e foi sepultado com seus pais na Cidade de Davi, seu pai; e Josafá, seu filho, reinou em seu lugar.
25 ಆಸನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ, ಯಾರೊಬ್ಬಾಮನ ಮಗನಾದ ನಾದ್ವಾನು ಇಸ್ರೇಲಿನ ರಾಜನಾದನು. ನಾದ್ವಾನು ಇಸ್ರೇಲನ್ನು ಎರಡು ವರ್ಷ ಆಳಿದನು.
25 E Nadabe, filho de Jeroboão, começou a reinar sobre Israel no ano segundo de Asa, rei de Judá; e reinou sobre Israel dois anos.
26 ನಾದ್ವಾನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
26 E fez o que era mau aos olhos do Senhor e andou nos caminhos de seu pai e no seu pecado com que tinha feito pecar a Israel.
27 ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದ್ವಾನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದ್ವಾನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದ್ವಾನನ್ನು ಕೊಂದುಹಾಕಿದನು.
27 E conspirou contra ele Baasa, filho de Aías, da casa de Issacar, e feriu-o Baasa em Gibetom, que era dos filisteus, quando Nadabe e todo o Israel cercavam a Gibetom.
28 ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.
28 E matou-o Baasa no ano terceiro de Asa, rei de Judá, e reinou em seu lugar.
29 ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.
29 E sucedeu, pois, que, reinando ele, feriu a toda a casa de Jeroboão; nada de Jeroboão deixou que tivesse fôlego, até o destruir, conforme a palavra do Senhor que dissera pelo ministério de seu servo Aías, o silonita,
30 ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.
30 por causa dos pecados de Jeroboão, o qual pecou e fez pecar a Israel, e por causa da provocação com que provocara ao Senhor , Deus de Israel.
31 ನಾದ್ವಾನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
31 Quanto ao mais dos atos de Nadabe e a tudo quanto fez, porventura, não está tudo escrito no Livro das Crônicas dos Reis de Israel?
32 ಬಾಷನು ಇಸ್ರೇಲನ್ನು ಆಳುತ್ತಿದ್ದ ಕಾಲದಲ್ಲೆಲ್ಲಾ, ಯೆಹೂದದ ರಾಜನಾದ ಆಸನ ವಿರುದ್ಧವಾಗಿ ಯುದ್ಧ ಮಾಡುತ್ತಲೇ ಇದ್ದನು.
32 E houve guerra entre Asa e Baasa, rei de Israel, todos os seus dias.
33 ಆಸನು ಯೆಹೂದದ ರಾಜನಾದ ಮೂರನೆಯ ವರ್ಷದಲ್ಲಿ, ಅಹೀಯನ ಮಗನಾದ ಬಾಷನು ಇಡೀ ಇಸ್ರೇಲಿಗೆ ರಾಜನಾದನು. ಅವನ ರಾಜಧಾನಿಯಾದ ತಿರ್ಚದಲ್ಲಿ, ಅವನು ಇಪ್ಪತ್ತನಾಲ್ಕು ವರ್ಷ ಆಳಿದನು.
33 No ano terceiro de Asa, rei de Judá, Baasa, filho de Aías, começou a reinar sobre todo o Israel em Tirza, e reinou vinte e quatro anos.
34 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
34 E fez o que era mau aos olhos do Senhor e andou no caminho de Jeroboão e no seu pecado com que tinha feito pecar a Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Reis 15, comparar traduções ou montar um estudo — tudo direto pelo WhatsApp.