1 Reis 16
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:
1 A palavra do Senhor foi dirigida a Jeú, filho de Hanani, contra Baasa, nestes termos:
2 “ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.
2 Levantei-te do pó e estabeleci-te príncipe do meu povo de Israel; tu, porém, andaste pelo caminho de Jeroboão, e levaste meu povo de Israel a cometer pecados que excitam a minha cólera.
3 ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
3 Por isso vou varrer Baasa e sua casa, e farei da sua casa o que fiz da casa de Jeroboão, filho de Nabat.
4 ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”
4 Todo membro da família de Baasa que morrer na cidade, será comido pelos cães; o que morrer no campo, comê-lo-ão as aves do céu.
5 ಬಾಷನು ಮಾಡಿದ ಎಲ್ಲ ಕಾರ್ಯಗಳ ಬಗ್ಗೆ ಮತ್ತು ಅವನ ಮಹಾಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
5 O resto da história de Baasa, suas ações e seus grandes feitos, tudo isso se acha consignado no livro das Crônicas dos reis de Israel.
6 ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸ ರಾಜನಾದನು.
6 Baasa adormeceu com seus pais e foi enterrado em Tersa. Seu filho Ela sucedeu-lhe no trono.
7 ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.
7 O oráculo do Senhor, transmitido pelo profeta Jeú, filho de Hanani, fora pronunciado contra Baasa e sua casa, não só por causa de todo o mal que ele tinha feito aos olhos do Senhor, irritando-o com o seu proceder e imitando a casa de Jeroboão, mas também porque Baasa tinha destruído essa casa.
8 ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.
8 No vigésimo sexto ano de Asa, rei de Judá, Ela, filho de Baasa, tornou-se rei de Israel. Residia em Tersa e reinou dois anos.
9 ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.
9 Seu servo Zambri, que comandava a metade de sua cavalaria, conspirou contra ele. Numa ocasião em que ele bebia e se embriagava em Tersa, na casa de Arsa, intendente de seu palácio nessa cidade,
10 ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.
10 entrou Zambri e o assassinou, sucedendo-lhe no trono, no vigésimo sétimo ano de Asa, rei de Judá.
11 ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.
11 Logo que ficou rei e sentou-se no trono, mandou exterminar toda a casa de Baasa, não deixando vivo nenhum filho varão, nenhum parente, nenhum amigo.
12 ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.
12 Desse modo, exterminou toda a casa de Baasa, assim como o Senhor o predissera contra Baasa pela boca do profeta Jeú.
13 ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.
13 Tal foi o castigo de todos os pecados que Baasa e seu filho Ela tinham cometido e levado Israel a cometer, provocando com o culto dos ídolos a cólera do Senhor, Deus de Israel.
14 ಏಲನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
14 resto da história de Ela e suas ações, tudo está consignado no livro das Crônicas dos reis de Israel.
15 ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.
15 No vigésimo sétimo ano de Asa, rei de Judá, Zambri reinou em Tersa durante sete dias. O exército sitiava Gebeton dos filisteus.
16 ರಾಜನ ವಿರುದ್ಧ ಜಿಮ್ರಿಯು ರಹಸ್ಯಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು.
16 Quando o exército, que estava acampado ali, ouviu dizer que Zambri tinha conspirado contra o rei e o assassinara, todo o Israel constituiu imediatamente como seu rei o general Amri.
17 ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.
17 Este partiu de Gebeton com todo o Israel e veio sitiar Tersa.
18 ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.
18 Zambri, vendo a cidade tomada, retirou-se para o fortim do palácio real e incendiou o palácio. Morreu assim
19 ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
19 pelos pecados que tinha cometido, fazendo o mal aos olhos do Senhor, imitando o proceder de Jeroboão e entregando-se ao pecado ao qual Jeroboão arrastara Israel.
20 ಜಿಮ್ರಿಯ ರಹಸ್ಯಯೋಜನೆಗಳ ಕುರಿತಾಗಿಯೂ ಅವನು ಮಾಡಿದ ಇತರ ಕಾರ್ಯಗಳ ಕುರಿತಾಗಿಯೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ, ಜಿಮ್ರಿಯು ರಾಜನಾದ ಏಲಾಗೆ ವಿರುದ್ಧವಾಗಿ ತಿರುಗಿಬಿದ್ದಾಗ ಸಂಭವಿಸಿದ ಘಟನೆಗಳನ್ನೂ ಆ ಪುಸ್ತಕದಲ್ಲಿ ಬರೆಯಲಾಗಿದೆ.
20 O resto da história de Zambri e sua conjuração, tudo está consignado no livro das Crônicas dos reis de Israel.
21 ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.
21 Então se dividiu o povo de Israel em duas facções: metade era por Tebni, filho de Ginet, e queria fazê-lo rei, e metade por Amri.
22 ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.
22 O partido de Amri prevaleceu contra o de Tebni, filho de Ginet. Tebni morreu, e reinou Amri.
23 ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು.
23 No trigésimo primeiro ano de Asa, rei de Judá, Amri tornou-se rei de Israel e reinou durante doze anos. Depois de ter reinado seis anos em Tersa,
24 ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.
24 comprou o monte de Samaria a Somer por duzentos talentos de prata. Construiu uma cidade nesse monte e chamou-a Samaria, do nome de Somer, a quem pertencera o monte.
25 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.
25 Amri fez o mal aos olhos do Senhor, mais ainda que todos os seus predecessores.
26 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.
26 Andou por todo o caminho de Jeroboão, filho de Nabat, e nos pecados com que este fizera pecar Israel, provocando com seus ídolos a cólera do Senhor, Deus de Israel.
27 ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
27 O resto da história de Amri, suas ações e seus grandes feitos, tudo isso se acha consignado no livro das Crônicas dos reis de Israel.
28 ಒಮ್ರಿಯು ಸತ್ತುಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.
28 Amri adormeceu com seus pais e foi sepultado em Samaria. Seu filho Acab sucedeu-lhe no trono.
29 ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.
29 No trigésimo oitavo ano de Asa, rei de Judá, Acab, filho de Amri, tornou-se rei de Israel e reinou vinte e dois anos sobre Israel em Samaria.
30 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.
30 Acab, filho de Amri, fez o mal aos olhos do Senhor, e mais ainda que todos os seus predecessores.
31 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.
31 Como se lhe não bastasse o andar nos pecados de Jeroboão, filho de Nabat, desposou ainda Jezabel, filha de Etbaal, rei dos sidônios, e chegou até a render culto a Baal, prostrando-se diante dele.
32 ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.
32 Erigiu um altar a Baal no templo que lhe edificou em Samaria.
33 ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
33 Acab fez também a asserá, irritando assim o Senhor, Deus de Israel, mais ainda que todos os seus predecessores no trono de Israel.
34 ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.
34 No tempo de Acab, Hiel de Betel reconstruiu Jericó. Lançou-lhe os alicerces ao preço de Abirão, seu primogênito, e pôs-lhe as portas ao preço de Segub, seu último filho, assim como o Senhor o predissera pela boca de Josué, filho de Num.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 16, comparar traduções ou montar um estudo — tudo direto pelo WhatsApp.