1 Reis 3

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.
1 E Salomão se aparentou com Faraó, rei do Egito, e tomou a filha de Faraó, e a trouxe à Cidade de Davi, até que acabasse de edificar a sua casa, e a Casa do Senhor , e a muralha de Jerusalém em roda.
2 ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.
2 Somente que o povo sacrificava sobre os altos, porque até àqueles dias ainda se não tinha edificado casa ao nome do Senhor .
3 ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.
3 E Salomão amava ao Senhor , andando nos estatutos de Davi, seu pai; somente que nos altos sacrificava e queimava incenso.
4 ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.
4 E foi o rei a Gibeão para lá sacrificar, porque aquele era o alto grande; mil holocaustos sacrificou Salomão naquele altar.
5 ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
5 E em Gibeão apareceu o Senhor a Salomão de noite em sonhos e disse-lhe Deus: Pede o que quiseres que te dê.
6 ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.
6 E disse Salomão: De grande beneficência usaste tu com teu servo Davi, meu pai, como também ele andou contigo em verdade, e em justiça, e em retidão de coração, perante a tua face; e guardaste-lhe esta grande beneficência e lhe deste um filho que se assentasse no seu trono, como se vê neste dia.
7 ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.
7 Agora, pois, ó Senhor , meu Deus, tu fizeste reinar teu servo em lugar de Davi, meu pai; e sou ainda menino pequeno, nem sei como sair, nem como entrar.
8 ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.
8 E teu servo está no meio do teu povo que elegeste, povo grande, que nem se pode contar, nem numerar, pela sua multidão.
9 ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.
9 A teu servo, pois, dá um coração entendido para julgar a teu povo, para que prudentemente discirna entre o bem e o mal; porque quem poderia julgar a este teu tão grande povo?
10 ಸೊಲೊಮೋನನ ಈ ಕೋರಿಕೆಯನ್ನು ಕೇಳಿ ಯೆಹೋವನಿಗೆ ಸಂತೋಷವಾಯಿತು.
10 E esta palavra pareceu boa aos olhos do Senhor, que Salomão pedisse esta coisa.
11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.
11 E disse-lhe Deus: Porquanto pediste esta coisa e não pediste para ti riquezas, nem pediste a vida de teus inimigos, mas pediste para ti entendimento, para ouvir causas de juízo;
12 ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.
12 eis que fiz segundo as tuas palavras, eis que te dei um coração tão sábio e entendido, que antes de ti teu igual não houve, e depois de ti teu igual se não levantará.
13 ನೀನು ಕೇಳದೆಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ.
13 E também até o que não pediste te dei, assim riquezas como glória; que não haja teu igual entre os reis, por todos os teus dias.
14 ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.
14 E, se andares nos meus caminhos guardando os meus estatutos e os meus mandamentos, como andou Davi, teu pai, também prolongarei os teus dias.
15 ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.
15 E acordou Salomão, e eis que era sonho. E veio a Jerusalém, e pôs-se perante a arca do concerto do Senhor , e sacrificou holocaustos, e preparou sacrifícios pacíficos, e fez um banquete a todos os seus servos.
16 ಒಂದು ದಿನ ಇಬ್ಬರು ವೇಶ್ಯೆಯರು ಸೊಲೊಮೋನನ ಹತ್ತಿರಕ್ಕೆ ಬಂದರು. ಅವರು ರಾಜನ ಎದುರಿನಲ್ಲಿ ನಿಂತರು.
16 Então, vieram duas mulheres prostitutas ao rei e se puseram perante ele.
17 ಒಬ್ಬ ಸ್ತ್ರೀಯು, “ಸ್ವಾಮಿ, ನಾನು ಮತ್ತು ಈ ಸ್ತ್ರೀಯು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಾವಿಬ್ಬರೂ ಗರ್ಭಿಣಿಯರಾಗಿದ್ದೆವು ಮತ್ತು ನಮ್ಮ ಮಕ್ಕಳಿಗೆ ಜನ್ಮಕೊಡಲು ಸಿದ್ಧರಾಗಿದ್ದೆವು. ಅವಳು ನನ್ನ ಹತ್ತಿರ ಇದ್ದಾಗ ನಾನು ನನ್ನ ಮಗುವಿಗೆ ಜನ್ಮನೀಡಿದೆ.
17 E disse-lhe uma das mulheres: Ah! Senhor meu, eu e esta mulher moramos numa casa; e tive um filho, morando com ela naquela casa.
18 ಮೂರು ದಿನಗಳ ತರುವಾಯ, ಈ ಸ್ತ್ರೀಯೂ ತನ್ನ ಮಗುವಿಗೆ ಜನ್ಮನೀಡಿದಳು. ಮನೆಯಲ್ಲಿ ನಮ್ಮೊಡನೆ ಬೇರೆ ಯಾರೂ ಇರಲಿಲ್ಲ. ಅಲ್ಲಿ ನಾವಿಬ್ಬರೇ ಇದ್ದೆವು.
18 E sucedeu que, ao terceiro dia depois do meu parto, também esta mulher teve um filho; estávamos juntas, estranho nenhum estava conosco na casa, senão nós ambas naquela casa.
19 ಒಂದು ರಾತ್ರಿ, ಈ ಸ್ತ್ರೀಯು ಗಾಢನಿದ್ರೆಯಲ್ಲಿ ತನ್ನ ಮಗುವಿನ ಮೇಲೆ ಹೊರಳಿದ್ದರಿಂದ ಆ ಮಗು ಸತ್ತುಹೋಯಿತು.
19 E de noite morreu o filho desta mulher, porquanto se deitara sobre ele.
20 ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.
20 E levantou-se à meia-noite, e me tirou a meu filho do meu lado, dormindo a tua serva, e o deitou no seu seio, e a seu filho morto deitou no meu seio.
21 ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.
21 E, levantando-me eu pela manhã, para dar de mamar a meu filho, eis que estava morto; mas, atentando pela manhã para ele, eis que não era o filho que eu havia tido.
22 ಆದರೆ ಇನ್ನೊಬ್ಬ ಸ್ತ್ರೀಯು, “ಇಲ್ಲ! ಜೀವಂತವಾಗಿರುವ ಮಗು ನನ್ನದು. ಸತ್ತಿರುವ ಮಗು ನಿನ್ನದು!” ಎಂದು ಹೇಳಿದಳು.
22 Então, disse a outra mulher: Não, mas o vivo é meu filho, e teu filho, o morto. Porém esta disse: Não, por certo, o morto é teu filho, e meu filho, o vivo. Assim falaram perante o rei.
23 ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ,
23 Então, disse o rei: Esta diz: Este que vive é meu filho, e teu filho, o morto; e esta outra diz: Não, por certo; o morto é teu filho, e meu filho, o vivo.
24 ತನ್ನ ಸೇವಕರಿಗೆ, “ಒಂದು ಕತ್ತಿಯನ್ನು ತೆಗೆದುಕೊಂಡು ಬಂದು
24 Disse mais o rei: Trazei-me uma espada. E trouxeram uma espada diante do rei.
25 ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು.
25 E disse o rei: Dividi em duas partes o menino vivo: e dai metade a uma e metade a outra.
26 ಆಗ ಎರಡನೆಯ ಸ್ತ್ರೀಯು, “ಈಗ ಸರಿಹೋಯಿತು. ಮಗುವನ್ನು ಎರಡು ಹೋಳುಮಾಡಿ. ಆಗ ನಮ್ಮಿಬ್ಬರಿಗೂ ಅವನಿರುವುದಿಲ್ಲ” ಎಂದಳು. ಆದರೆ ಮೊದಲನೆಯ ಸ್ತ್ರೀಯು, ಅಂದರೆ, ತನ್ನ ಮಗುವಿನ ಮೇಲೆ ತುಂಬಾ ಪ್ರೀತಿಯನ್ನಿಟ್ಟಿದ ನಿಜವಾದ ತಾಯಿಯು ರಾಜನಿಗೆ, “ದಯವಿಟ್ಟು ಆ ಮಗುವನ್ನು ಕೊಲ್ಲಬೇಡಿ ಸ್ವಾಮಿ! ಅವಳಿಗೇ ಕೊಟ್ಟುಬಿಡಿ” ಎಂದು ಹೇಳಿದಳು.
26 Mas a mulher cujo filho era o vivo falou ao rei (porque o seu coração se lhe enterneceu por seu filho) e disse: Ah! Senhor meu, dai-lhe o menino vivo e por modo nenhum o mateis. Porém a outra dizia: Nem teu nem meu seja; dividi-o antes.
27 ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.
27 Então, respondeu o rei e disse: Dai a esta o menino vivo e de maneira nenhuma o mateis, porque esta é sua mãe.
28 ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.
28 E todo o Israel ouviu a sentença que dera o rei e temeu ao rei, porque viram que havia nele a sabedoria de Deus, para fazer justiça.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Reis 3, comparar traduções ou montar um estudo — tudo direto pelo WhatsApp.