1 Reis 4
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು.
1 O rei Salomão reinou sobre todo o Israel.
2 ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ:
2 E estes eram os seus altos oficiais: Azarias, filho de Zadoque, era o sacerdote;
3 ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು.
3 Eliorefe e Aías, filhos de Sisa, eram secretários; Josafá, filho de Ailude, era o cronista;
4 ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು.
4 Benaia, filho de Joiada, era comandante do exército; Zadoque e Abiatar eram sacerdotes;
5 ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು.
5 Azarias, filho de Natã, era governador-chefe; Zabude, filho de Natã, era ministro e amigo do rei;
6 ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು.
6 Aisar era o responsável pelo palácio; Adonirão, filho de Abda, era superintendente dos que realizavam trabalhos forçados.
7 ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.
7 Salomão tinha doze governadores sobre todo o Israel, que forneciam mantimento ao rei e ao seu palácio; cada um tinha de fornecer durante um mês do ano.
8 ಹನ್ನೆರಡು ರಾಜ್ಯಪಾಲರುಗಳ ಹೆಸರುಗಳು ಹೀಗಿವೆ:
8 São estes os seus nomes: Ben-Hur, nas montanhas de Efraim;
9 ಮಾಕಚ್, ಶಾಲೀಮ್, ಬೇತ್‌ಷ್‌ಮೆಷ್, ಏಲೋನ್, ಬೇತ್‌ಹಾನಾನ್‌ಗಳಿಗೆ ಬೆನ್‌ದೆಕರನು ರಾಜ್ಯಪಾಲನಾಗಿದ್ದನು.
9 Ben-Dequer, em Macaz, Saalabim, Bete-Semes, Elom e Bete-Hanã;
10 ಅರುಬ್ಬೋತ್, ಸೋಕೋ, ಹೇಫರ್‌ಗಳಿಗೆ ಬೆನ್‌ಹೆಸೆದನು ರಾಜ್ಯಪಾಲನಾಗಿದ್ದನು.
10 Ben-Hesede, em Arubote, Socó e toda a terra de Héfer;
11 ನಾಫೋತ್ ದೋರ್‌ಗೆ ಬೆನ್‌ಅಬೀನಾದ್ವಾನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.
11 Ben-Abinadabe, que era casado com Tafate, filha de Salomão, em toda a cordilheira de Dor;
12 ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
12 Baaná, filho de Ailude, em Taanaque, Megido, e toda a Bete-Seã, que fica perto de Zaretã, abaixo de Jezreel, desde Bete-Seã até Abel-Meolá, até além de Jocmeão;
13 ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.
13 Ben-Geber, em Ramote-Gileade, nas aldeias de Jair, filho de Manassés, que estão em Gileade e também na região de Argobe, em Basã, sessenta grandes cidades com muralhas e ferrolhos de bronze;
14 ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದ್ವಾನು ರಾಜ್ಯಪಾಲನಾಗಿದ್ದನು.
14 Ainadabe, filho de Ido, em Maanaim;
15 ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.
15 Aimaás, que era casado com Basemate, outra filha de Salomão, em Naftali;
16 ಆಶೇರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು.
16 Baaná, filho de Husai, em Aser e Bealote;
17 ಇಸ್ಸಾಕಾರಿಗೆ ಫಾರೂಹನ ಮಗನಾದ ಯೆಹೋಷಾಫಾಟನು ರಾಜ್ಯಪಾಲನಾಗಿದ್ದನು.
17 Josafá, filho de Parua, em Issacar;
18 ಬೆನ್ಯಾಮೀನಿಗೆ ಏಲನ ಮಗನಾದ ಶಿಮ್ಮಿಯು ರಾಜ್ಯಪಾಲನಾಗಿದ್ದನು.
18 Simei, filho de Elá, em Benjamim;
19 ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.
19 Geber, filho de Uri, na terra de Gileade, a terra de Seom, rei dos amorreus, e de Ogue, rei de Basã; e havia só um governador nesta região.
20 ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.
20 O povo de Judá e Israel era tão numeroso como a areia que está na praia do mar; eles comiam, bebiam e se alegravam.
21 ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
21 Salomão dominava sobre todos os reinos desde o Eufrates até a terra dos filisteus e até a fronteira do Egito. Esses reinos pagavam tributo e serviram Salomão durante todos os dias da sua vida.
22 — ausente —
22 As provisões diárias de Salomão eram três mil quilos da melhor farinha e seis mil quilos de farinha;
23 — ausente —
23 dez bois gordos, vinte bois de pasto e cem carneiros, além dos veados, as gazelas, os corços e aves bem-tratadas.
24 ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
24 Porque Salomão dominava sobre toda a região e sobre todos os reis do lado de cá do Eufrates, desde Tifsa até Gaza, e tinha paz em toda a região ao redor.
25 ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.
25 Judá e Israel habitavam seguros, cada um debaixo da sua videira e debaixo da sua figueira, desde Dã até Berseba, durante todos os dias de Salomão.
26 ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.
26 Salomão tinha também quatro mil cavalos em estrebarias, para os seus carros de guerra, e doze mil cavaleiros.
27 ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.
27 Os governadores forneciam provisões, cada um no seu mês, ao rei Salomão e a todos os que chegavam à sua mesa; coisa nenhuma deixavam faltar.
28 ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು.
28 Também levavam a cevada e a palha para os cavalos e os ginetes, para o lugar onde estivesse o rei, segundo lhes havia sido prescrito.
29 ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.
29 Deus deu a Salomão sabedoria, entendimento fora do comum e uma inteligência tão vasta como a areia que está na praia do mar.
30 ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.
30 A sabedoria de Salomão era maior do que a de todos os homens do Oriente e do que toda a sabedoria dos egípcios.
31 ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.
31 Era mais sábio do que todos os homens: mais sábio do que Etã, ezraíta, e do que Hemã, Calcol e Darda, filhos de Maol. E a sua fama se espalhou por todas as nações ao redor.
32 ರಾಜನಾದ ಸೊಲೊಮೋನನು ತನ್ನ ಜೀವಿತದ ಅವದಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.
32 Compôs três mil provérbios, e os seus cânticos foram mil e cinco.
33 ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.
33 Falou sobre todas as plantas, desde o cedro que está no Líbano até o hissopo que brota dos muros; também falou sobre os animais e as aves, os animais que rastejam e os peixes.
34 ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.
34 De todos os povos vinha gente para ouvir a sabedoria de Salomão, e também mensageiros de todos os reis da terra que tinham ouvido falar da sua sabedoria.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 4, comparar traduções ou montar um estudo — tudo direto pelo WhatsApp.