1 Reis 7

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB

Sair da comparação
ARIB Almeida Revisada Imprensa Bíblica
1 ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು.
1 Salomão edificou também a sua casa, levando treze anos para acabá-la.
2 ಅವನು “ಲೆಬನೋನಿನ ಅರಣ್ಯದ ಮನೆ” ಎಂಬ ಕಟ್ಟಡವನ್ನೂ ಕಟ್ಟಿಸಿದನು. ಅದರ ಉದ್ದ ನೂರೈವತ್ತು ಅಡಿಗಳು; ಅಗಲ ಎಪ್ಪತ್ತೈದು ಅಡಿಗಳು; ಎತ್ತರ ನಲವತ್ತೈದು ಅಡಿಗಳು. ಅದರಲ್ಲಿ ನಾಲ್ಕು ಸಾಲಿನ ದೇವದಾರು ಮರದ ಕಂಬಗಳಿದ್ದವು ಆ ಕಂಬಗಳ ಮೇಲೆ ದೇವದಾರು ಮರದ ಬೋದಿಗೆಗಳಿದ್ದವು.
2 Edificou ainda a casa do bosque de Líbano, de cem côvados de comprimento, cinqüenta de largura e trinta de altura, sobre quatro ordens de colunas de cedros, e vigas de cedro sobre as colunas.
3 ಈ ಸಾಲು ಕಂಬಗಳ ಮೇಲೆ ದೇವದಾರು ಮರದ ತೊಲೆಗಳನ್ನು ಜೋಡಿಸಿದ್ದರು. ಈ ತೊಲೆಗಳ ಮೇಲ್ಭಾಗದ ಮಾಳಿಗೆಗೆ ದೇವದಾರು ಮರದ ಹಲಗೆಗಳನ್ನು ಹಾಸಿದ್ದರು. ಈ ಕಂಬಗಳ ಪ್ರತಿಯೊಂದು ಸಾಲಿನಲ್ಲೂ ಹದಿನೈದು ತೊಲೆಗಳಿದ್ದವು. ಅಲ್ಲಿ ಒಟ್ಟು ನಲವತ್ತೈದು ತೊಲೆಗಳಿದ್ದವು.
3 E por cima estava coberta de cedro sobre as câmaras, que estavam sobre quarenta e cinco colunas, quinze em cada ordem.
4 ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಈ ಕಿಟಕಿಗಳು ಎದುರು ಬದುರಾಗಿದ್ದವು.
4 E havia três ordens de janelas, e uma janela estava defronte da outra janela, em três fileiras.
5 ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.
5 Todas as portas e esquadrias eram quadradas; e uma janela estava defronte da outra, em três fileiras.
6 ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತೈದು ಅಡಿ ಮತ್ತು ಅಗಲ ನಲವತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು.
6 Depois fez um pórtico de colunas, de cinqüenta côvados de comprimento e trinta de largura; e defronte dele outro pórtico, com suas respectivas colunas e degraus.
7 ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.
7 Também fez o pórtico para o trono onde julgava, isto é, o pórtico do juízo, o qual era coberto de cedro desde o soalho até o teto.
8 ಸೊಲೊಮೋನನು ವಾಸಿಸುತ್ತಿದ್ದ ಮನೆಯು “ನ್ಯಾಯಮಂದಿರ”ದ ಒಳಗಿನ ಪ್ರಾಕಾರದಲ್ಲಿತ್ತು. ಈ ಮನೆಯನ್ನು “ನ್ಯಾಯಮಂದಿರ”ದಂತೆಯೇ ಕಟ್ಟಿಸಿದನು. ಇದಲ್ಲದೆ ಅವನು ಈಜಿಪ್ಟಿನ ಫರೋಹನ ಮಗಳಾದ ತನ್ನ ಹೆಂಡತಿಗೂ ಇದೇ ರೀತಿಯ ಮನೆಯನ್ನು ಕಟ್ಟಿಸಿದನು.
8 E em sua casa, em que morava, havia outro átrio por dentro do pórtico, de obra semelhante à deste; também para a filha de Faraó, que ele tomara por mulher, fez uma casa semelhante àquele pórtico.
9 ಈ ಎಲ್ಲಾ ಕಟ್ಟಡಗಳನ್ನು ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಈ ಕಲ್ಲುಗಳನ್ನು ಸರಿಯಾದ ಅಳತೆಗೆ ಗರಗಸದಿಂದ ಕತ್ತರಿಸಿದನು. ಅವುಗಳನ್ನು ಮುಂದುಗಡೆ ಮತ್ತು ಹಿಂದುಗಡೆ ಸಮನಾಗಿ ಕತ್ತರಿಸಿದ್ದನು. ಶ್ರೇಷ್ಠವಾದ ಈ ಕಲ್ಲುಗಳು ಅಡಿಪಾಯದಿಂದ ಗೋಡೆಯ ತುದಿಯವರೆಗೆ ಇದ್ದವು. ಅಂಗಳದ ಸುತ್ತಲೂ ಇದ್ದ ಗೋಡೆಯನ್ನು ಸಹ ಶ್ರೇಷ್ಠವಾದ ಕತ್ತರಿಸಿದ ಕಲ್ಲುಗಳಿಂದ ಕಟ್ಟಲಾಗಿತ್ತು.
9 Todas estas casas eram de pedras de grande preço, cortadas sob medida, tendo as suas faces por dentro e por fora serradas à serra; e isto desde o fundamento até as beiras do teto, e por fora até o grande átrio.
10 ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು.
10 Os fundamentos eram de pedras de grande preço, pedras grandes, de dez e de oito côvados,
11 ಈ ಕಲ್ಲುಗಳ ಮೇಲಿನ ತುದಿಯಲ್ಲಿ ಇತರ ಶ್ರೇಷ್ಠವಾದ ಕಲ್ಲುಗಳು ಮತ್ತು ದೇವದಾರು ಮರದ ತೊಲೆಗಳಿದ್ದವು.
11 e por cima delas havia pedras de grande preço, lavradas sob medida, e madeira de cedro.
12 ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.
12 O átrio grande tinha em redor três ordens de pedras lavradas, com uma ordem de vigas de cedro; assim era também o átrio interior da casa do Senhor e o pórtico da casa.
13 ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು.
13 O rei Salomão mandou trazer de Tiro a Hirão.
14 ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.
14 Era ele filho de uma viúva, da tribo de Naftali, e fora seu pai um homem de Tiro, que trabalhava em bronze; ele era cheio de sabedoria, de entendimento e de ciência para fazer toda sorte de obras de bronze. Este veio ter com o rei Salomão, e executou todas as suas obras.
15 ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.
15 Formou as duas colunas de bronze; a altura de cada coluna era de dezoito côvados; e um fio de doze côvados era a medida da circunferência de cada uma das colunas;
16 ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.
16 também fez dois capitéis de bronze fundido para pôr sobre o alto das colunas; de cinco côvados era a altura dum capitel, e de cinco côvados também a altura do outro.
17 ನಂತರ ಅವನು ಕಂಬಗಳ ಮೇಲಿನ ಈ ಬೋದಿಗೆಗಳಿಗೆ ಸರಪಣಿಯ ಎರಡು ಜಾಲರಿಗಳನ್ನು ಮಾಡಿದನು.
17 Havia redes de malha, e grinaldas entrelaçadas, para os capitéis que estavam sobre o alto das colunas: sete para um capitel e sete para o outro.
18 ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ಈ ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
18 Assim fez as colunas; e havia duas fileiras de romãs em redor sobre uma rede, para cobrir os capitéis que estavam sobre o alto das colunas; assim fez com um e outro capitel.
19 ಕಂಬಗಳ ಮೇಲಿದ್ದ ಏಳುವರೆ ಅಡಿ ಎತ್ತರದ ಈ ಬೋದಿಗೆಗಳು ಹೂಗಳಂತೆ ಕಾಣುತ್ತಿದ್ದವು.
19 Os capitéis que estavam sobre o alto das colunas, no pórtico, figuravam lírios, e eram de quatro côvados.
20 ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.
20 Os capitéis, pois, sobre as duas colunas estavam também justamente em cima do bojo que estava junto à rede; e havia duzentas romãs, em fileiras em redor, sobre um e outro capitel.
21 ಹೀರಾಮನು ಈ ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.
21 Depois levantou as colunas no pórtico do templo; levantando a coluna direita, pôs-lhe o nome de Jaquim; e levantando a coluna esquerda, pôs-lhe o nome de Boaz.
22 ಅವರು ಹೂ ಆಕಾರದ ಬೋದಿಗೆಗಳನ್ನು ಸ್ತಂಭಗಳ ಮೇಲಿನ ತುದಿಯಲ್ಲಿಟ್ಟರು. ಆ ಎರಡು ಸ್ತಂಭಗಳ ಕೆಲಸವು ಮುಗಿಯಿತು.
22 Sobre o alto das colunas estava a obra de lírios. E assim se acabou a obra das colunas.
23 ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.
23 Fez também o mar de fundição; era redondo e media dez côvados duma borda à outra, cinco côvados de altura e trinta de circunferência.
24 ಆ ತೊಟ್ಟಿಯ ಹೊರಅಂಚಿನ ಸುತ್ತಲೂ ಒಂದು ಕಂಠವಿತ್ತು. ಈ ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಈ ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕಹೊಯ್ದಿದ್ದನು.
24 Por baixo da sua borda em redor havia betões que o cingiam, dez em cada côvado, cercando aquele mar em redor; duas eram as fileiras destes botões, fundidas juntamente com o mar.
25 ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.
25 E firmava-se sobre doze bois, três dos quais olhavam para o norte, três para o ocidente, três para o sul e três para o oriente; e o mar descansava sobre eles, e as partes posteriores deles estavam para a banda de dentro.
26 ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.
26 A sua grossura era de três polegadas, e a borda era como a de um copo, como flor de lírio; ele levava dois mil batos.
27 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.
27 Fez também as dez bases de bronze; cada uma tinha quatro côvados de comprimento, quatro de largura e três de altura.
28 ಈ ಬಂಡಿಗಳನ್ನು ಚೌಕಾಕಾರದ ಚೌಕಟ್ಟಿನ ಅಂಕಣದಿಂದ ಮಾಡಿದ್ದನು.
28 E a estrutura das bases era esta: tinham elas almofadas, as quais estavam entre as junturas;
29 ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.
29 e sobre as almofadas que estavam entre as junturas havia leões, bois, e querubins, bem como os havia sobre as junturas em cima; e debaixo dos leões e dos bois havia grinaldas pendentes.
30 ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ಆ ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರ ಕಂಬಗಳಿದ್ದವು. ಈ ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು.
30 Cada base tinha quatro rodas de bronze, e eixos de bronze; e os seus quatro cantos tinham suportes; debaixo da pia estavam estes suportes de fundição, tendo eles grinaldas de cada lado.
31 ಈ ಪಾತ್ರೆಯ ಮೇಲೆ ಒಂದು ಚೌಕಟ್ಟಿತ್ತು. ಅದು ಪಾತ್ರೆಯ ಮೇಲೆ ಹದಿನೆಂಟು ಇಂಚು ಎತ್ತರವಾಗಿತ್ತು. ಆ ಪಾತ್ರೆಯ ಬಾಯಿಯು ಇಪ್ಪತ್ತೇಳು ಇಂಚು ವ್ಯಾಸದೊಂದಿಗೆ ವೃತ್ತಾಕಾರವಾಗಿತ್ತು. ಆ ಚೌಕಟ್ಟಿನ ಹಿತ್ತಾಳೆಯ ಮೇಲೆ ಚಿತ್ರ ವಿನ್ಯಾಸಗಳನ್ನು ಬಿಡಿಸಲಾಗಿತ್ತು. ಈ ಚೌಕಟ್ಟು ವೃತ್ತಾಕಾರವಾಗಿರದೆ ಚೌಕಾಕಾರವಾಗಿತ್ತು.
31 A sua boca, dentro da coroa, e em cima, era de um côvado; e era redonda segundo a obra dum pedestal, de côvado e meio; e também sobre a sua boca havia entalhes, e as suas almofadas eram quadradas, não redondas.
32 ಈ ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಈ ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಈ ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೇ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು.
32 As quatro rodas estavam debaixo das almofadas, e os seus eixos estavam na base; e era a altura de cada roda de côvado e meio.
33 ಈ ಚಕ್ರಗಳು ರಥದ ಮೇಲಿನ ಚಕ್ರಗಳಂತಿದ್ದುವು. ಈ ಚಕ್ರಗಳ ಮೇಲಿನ ಅಚ್ಚುಗಳನ್ನು, ಕಂಠಗಳನ್ನು, ಅರೆಯಕಾಲುಗಳನ್ನು ಮತ್ತು ಕಂಬಗಳನ್ನು ಹಿತ್ತಾಳೆಯಿಂದ ಮಾಡಿದ್ದರು.
33 O feitio das rodas era como o de uma roda de carro; seus eixos, suas cambas, seus raios e seus cubos, todos eram fundidos.
34 ಪ್ರತಿ ಬಂಡಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಆಧಾರ ಕಂಬಗಳಿದ್ದವು. ಅವುಗಳನ್ನು ಬಂಡಿಯೊಂದಿಗೆ ಅಖಂಡವಾಗಿ ನಿರ್ಮಿಸಿದ್ದರು.
34 Havia quatro suportes aos quatro cantos de cada base, os quais faziam parte da própria base.
35 ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.
35 No alto de cada base havia um cinto redondo, de meio côvado de altura; também sobre o topo de cada base havia esteios e almofadas que faziam parte dela.
36 ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.
36 E nas placas dos seus esteios e nas suas almofadas lavrou querubins, leões e palmas, segundo o espaço que havia em cada uma, com grinaldas em redor.
37 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕ ಹೊಯ್ದಿದ್ದನು. ಆದ್ದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು.
37 Deste modo fez as dez bases: todas com a mesma fundição, a mesma medida e o mesmo entalhe.
38 ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.
38 Também fez dez pias de bronze; em cada uma cabiam quarenta batos, e cada pia era de quatro côvados; e cada uma delas estava sobre uma das dez bases.
39 ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ಆ ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.
39 E pôs cinco bases à direita da casa, e cinco à esquerda; porém o mar pôs ao lado direito da casa para a banda do oriente, na direção do sul.
40 ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ:
40 Hirão fez também as caldeiras, as pás e as bacias; assim acabou de fazer toda a obra que executou para o rei Salomão, para a casa do Senhor,
41 ಎರಡು ಸ್ತಂಭಗಳು;
41 a saber: as duas colunas, os globos dos capitéis que estavam sobre o alto das colunas, e as duas redes para cobrir os dois globos dos capitéis que estavam sobre o alto das colunas,
42 ಎರಡು ಜಾಲರಿಗಳನ್ನೂ
42 e as quatrocentas romãs para as duas redes, a saber, duas carreiras de romãs para cada rede, para cobrirem os dois globos dos capitéis que estavam em cima das colunas;
43 ಒಂದೊಂದು ಗಂಗಾಳವನ್ನು ಒಳಗೊಂಡ ಹತ್ತು ಬಂಡಿಗಳು;
43 as dez bases, e as dez pias sobre as bases;
44 ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ.
44 o mar, e os doze bois debaixo do mesmo;
45 ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು.
45 as caldeiras, as pás e as bacias; todos estes objetos que Hirão fez para o rei Salomão, para a casa do Senhor, eram de bronze polido.
46 — ausente —
46 O rei os fez fundir na planície do Jordão, num terreno argiloso que havia entre Sucote e Zaretã.
47 — ausente —
47 E Salomão deixou de pesar esses objetos devido ao seu excessivo número; não se averiguou o peso do bronze.
48 — ausente —
48 Também fez Salomão todos os utensílios para a casa do Senhor: o altar de ouro, e a mesa de ouro, sobre a qual estavam os pães da proposição;
49 — ausente —
49 os castiçais, cinco à direita e cinco esquerda, diante do oráculo, de ouro puro; as flores, as lâmpadas e as tenazes, também de ouro;
50 — ausente —
50 e as taças, as espevitadeiras, as bacias, as colheres e os braseiros, de ouro puro; e os gonzos para as portas da casa interior, para o lugar santíssimo, e os das portas da casa, isto é, do templo, também de ouro.
51 ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.
51 Assim se acabou toda a obra que o rei Salomão fez para a casa do Senhor. Então trouxe Salomão as coisas que seu pai Davi tinha consagrado, a saber, a prata, o ouro e os vasos; e os depositou nos tesouros da casa do senhor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Reis 7, comparar traduções ou montar um estudo — tudo direto pelo WhatsApp.