1 Samuel 11

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.
1 Então, subiu Naás, amonita, e sitiou a Jabes-Gileade; e disseram todos os homens de Jabes a Naás: Faze aliança conosco, e te serviremos.
2 ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.
2 Porém Naás, amonita, lhes respondeu: Farei aliança convosco sob a condição de vos serem vazados os olhos direitos, trazendo assim eu vergonha sobre todo o Israel.
3 ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.
3 Então, os anciãos de Jabes lhe disseram: Concede-nos sete dias, para que enviemos mensageiros por todos os limites de Israel e, não havendo ninguém que nos livre, então, nos entregaremos a ti.
4 ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.
4 Chegando os mensageiros a Gibeá de Saul, relataram este caso ao povo. Então, todo o povo chorou em voz alta.
5 ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ?” ಎಂದು ಕೇಳಿದನು.
5 Eis que Saul voltava do campo, atrás dos bois, e perguntou: Que tem o povo, que chora? Então, lhe referiram as palavras dos homens de Jabes.
6 ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.
6 E o Espírito de Deus se apossou de Saul, quando ouviu estas palavras, e acendeu-se sobremodo a sua ira.
7 ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು.
7 Tomou uma junta de bois, cortou-os em pedaços e os enviou a todos os territórios de Israel por intermédio de mensageiros que dissessem: Assim se fará aos bois de todo aquele que não seguir a Saul e a Samuel. Então, caiu o temor do Senhor sobre o povo, e saíram como um só homem.
8 ಸೌಲನು ಬೆಜೆಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.
8 Contou-os em Bezeque; dos filhos de Israel, havia trezentos mil; dos homens de Judá, trinta mil.
9 ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು.
9 Então, disseram aos mensageiros que tinham vindo: Assim direis aos homens de Jabes-Gileade: Amanhã, quando aquentar o sol, sereis socorridos. Vindo, pois, os mensageiros, e, anunciando-o aos homens de Jabes, estes se alegraram
10 ನಂತರ ಯಾಬೇಷಿನ ಜನರು ಅಮ್ಮೋನಿಯದ ನಾಹಾಷನಿಗೆ, “ನಾವು ನಾಳೆ ನಿನ್ನ ಬಳಿಗೆ ಬರುತ್ತೇವೆ. ಆಗ ನಿನಗೆ ತೋಚಿದ್ದನ್ನು ನಮಗೆ ಮಾಡು” ಎಂದು ಹೇಳಿದರು.
10 e disseram aos amonitas: Amanhã, nos entregaremos a vós outros; então, nos fareis segundo o que melhor vos parecer.
11 ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.
11 Sucedeu que, ao outro dia, Saul dividiu o povo em três companhias, que, pela vigília da manhã, vieram para o meio do arraial e feriram a Amom, até que se fez sentir o calor do dia. Os sobreviventes se espalharam, e não ficaram dois deles juntos.
12 ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು.
12 Então, disse o povo a Samuel: Quem são aqueles que diziam: Reinará Saul sobre nós? Trazei-os para aqui, para que os matemos.
13 ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.
13 Porém Saul disse: Hoje, ninguém será morto, porque, no dia de hoje, o Senhor salvou a Israel.
14 ಬಳಿಕ ಸಮುವೇಲನು, “ನಾವೆಲ್ಲ ಗಿಲ್ಗಾಲಿಗೆ ಹೋಗಿ ಸೌಲನನ್ನು ಮತ್ತೆ ರಾಜನನ್ನಾಗಿ ಮಾಡೋಣ” ಎಂದು ಜನರಿಗೆ ಹೇಳಿದನು.
14 Disse Samuel ao povo: Vinde, vamos a Gilgal e renovemos ali o reino.
15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.
15 E todo o povo partiu para Gilgal, onde proclamaram Saul seu rei, perante o Senhor , a cuja presença trouxeram ofertas pacíficas; e Saul muito se alegrou ali com todos os homens de Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 11, comparar traduções ou montar um estudo — tudo direto pelo WhatsApp.