1 Samuel 17

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.
1 Os filisteus reuniram seu exército para a batalha e acamparam em Efes-Damim, entre Socó, em Judá, e Azeca.
2 ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು.
2 Em resposta, Saul reuniu as tropas israelitas perto do vale de Elá.
3 ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು.
3 Assim, os filisteus e os israelitas ficaram frente a frente, em colinas opostas, com o vale entre eles.
4 ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.
4 Então Golias, um guerreiro filisteu de Gate, saiu das fileiras do exército filisteu. Ele tinha 2,90 metros de altura,
5 ಅವನು ತಾಮ್ರದ ಶಿರಸ್ತ್ರಾಣವನ್ನು ಧರಿಸಿದ್ದನು. ಮೀನಿನ ಮೇಲಿರುವ ಚಿಪ್ಪುಗಳಂತಿದ್ದ ತಾಮ್ರದ ಕವಚವನ್ನು ಅವನು ತೊಟ್ಟಿದ್ದನು. ಅದು ನೂರಿಪ್ಪತ್ತೈದು ಪೌಂಡ್‌ಗಳಷ್ಟು ಭಾರವಾಗಿತ್ತು.
5 usava um capacete de bronze e vestia uma couraça de escamas de bronze que pesava sessenta quilos.
6 ಗೊಲ್ಯಾತನು ಕಾಲುಗಳಿಗೂ ತಾಮ್ರದ ಕವಚವನ್ನು ತೊಟ್ಟಿದ್ದನು. ಅವನು ಹೆಗಲಿನಲ್ಲಿ ತಾಮ್ರದ ಈಟಿಯನ್ನು ಕಟ್ಟಿಕೊಂಡಿದ್ದನು.
6 Também usava caneleiras de bronze e carregava no ombro um dardo de bronze.
7 ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಗುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.
7 A haste de sua lança era pesada e grossa, como o eixo de um tear, e a ponta de ferro da lança pesava cerca de sete quilos. Seu escudeiro caminhava à frente dele.
8 ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ.
8 Golias parou e gritou para as tropas israelitas: “Por que saíram todos para lutar? Eu sou filisteu, e vocês são servos de Saul. Escolham um homem para vir aqui e lutar comigo!
9 ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.
9 Se ele me matar, seremos seus escravos. Mas, se eu o matar, vocês serão nossos escravos!
10 ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.
10 Desafio hoje os exércitos de Israel. Mandem um homem para lutar comigo!”.
11 ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು.
11 Quando Saul e os israelitas ouviram isso, ficaram aterrorizados e muito abalados.
12 ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.
12 Davi era filho de Jessé, efrateu de Belém, na terra de Judá. Na época do rei Saul, Jessé já era idoso e tinha oito filhos.
13 ಇಷಯನ ಮೂವರು ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದರು. ಎಲೀಯಾಬನು ಮೊದಲನೆಯ ಮಗ. ಅಬೀನಾದ್ವಾನು ಎರಡನೆಯ ಮಗ. ಶಮ್ಮನು ಮೂರನೆಯ ಮಗ.
13 Os três filhos mais velhos de Jessé — Eliabe, Abinadabe e Simeia — haviam se alistado no exército de Saul para lutar contra os filisteus.
14 ದಾವೀದನು ಎಲ್ಲರಿಗಿಂತ ಕಿರಿಯ ಮಗ. ಅವನಿಗಿಂತ ಹಿರಿಯರಾದ ಮೂವರು ಮಕ್ಕಳು ಸೌಲನ ಸೈನ್ಯದಲ್ಲಿದ್ದರು.
14 Davi era o mais novo. Seus três irmãos mais velhos seguiam o exército de Saul,
15 ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.
15 enquanto Davi ia e voltava para ajudar seu pai a cuidar das ovelhas em Belém.
16 ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು.
16 Durante quarenta dias, pela manhã e à tarde, o guerreiro filisteu se apresentava diante do exército israelita e o desafiava.
17 ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು.
17 Um dia, Jessé disse a Davi: “Leve depressa para seus irmãos que estão no acampamento este cesto com grãos tostados e estes dez pães.
18 ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.
18 Leve também estes dez queijos para o capitão deles. Veja como estão seus irmãos e traga notícias deles”.
19 ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.
19 Os irmãos de Davi estavam com Saul e o exército israelita no vale de Elá, lutando contra os filisteus.
20 ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.
20 Davi deixou as ovelhas com outro pastor e, na manhã seguinte, partiu bem cedo com os presentes, como Jessé havia ordenado. Chegou ao acampamento quando o exército israelita saía para o campo de batalha com gritos de guerra.
21 ಇಸ್ರೇಲರು ಮತ್ತು ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾಗಲು ಸಾಲುಸಾಲಾಗಿ ನಿಲ್ಲುತ್ತಿದ್ದರು.
21 Logo, filisteus e israelitas estavam frente a frente, exército contra exército.
22 ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.
22 Davi deixou suas coisas com o responsável pelos suprimentos e correu até a frente de batalha para saudar seus irmãos.
23 ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು.
23 Enquanto falava com eles, Golias, o guerreiro filisteu de Gate, saiu das fileiras do exército filisteu. Davi o ouviu gritar seu desafio habitual.
24 ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
24 Quando os israelitas viram Golias, começaram a fugir, apavorados.
25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
25 “Vocês viram aquele homem?”, perguntavam uns aos outros. “Ele sai todos os dias para desafiar Israel. O rei ofereceu uma grande recompensa para quem o matar. Dará uma de suas filhas como esposa e isentará toda a família dele de pagar impostos!”
26 ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
26 Então Davi perguntou aos soldados que estavam por perto: “O que receberá o homem que matar esse filisteu e acabar com suas provocações contra Israel? Afinal de contas, quem é esse filisteu incircunciso para desafiar os exércitos do Deus vivo?”.
27 ಗೊಲ್ಯಾತನನ್ನು ಕೊಲ್ಲುವದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು.
27 Os soldados repetiram o que tinham dito e confirmaram: “Sim, essa será a recompensa para quem o matar”.
28 ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
28 Quando Eliabe, irmão mais velho de Davi, o ouviu falando com os soldados, ficou furioso e perguntou: “O que você está fazendo aqui? Não devia estar tomando conta daquelas poucas ovelhas? Conheço sua arrogância e suas más intenções. Você quer apenas ver a batalha!”.
29 ಅದಕ್ಕೆ ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು.
29 “O que eu fiz agora?”, disse Davi. “Só fiz uma pergunta!”
30 ದಾವೀದನು ಬೇರೆ ಜನರ ಕಡೆಗೆ ತಿರುಗಿ, ಅವರಿಗೂ ಅದೇ ಪ್ರಶ್ನೆಗಳನ್ನು ಕೇಳಿದನು. ಅವರು ಸಹ ಅದೇ ಉತ್ತರಗಳನ್ನು ದಾವೀದನಿಗೆ ಕೊಟ್ಟರು.
30 Então foi até outros soldados, fez a mesma pergunta e recebeu a mesma resposta.
31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.
31 Alguém contou ao rei Saul o que Davi tinha dito, e o rei mandou chamá-lo.
32 ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.
32 Davi disse a Saul: “Ninguém se preocupe por causa desse filisteu. Seu servo vai lutar contra ele”.
33 ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.
33 Saul respondeu: “Você não conseguirá lutar contra esse filisteu e vencer! É apenas um rapaz, e ele é guerreiro desde a juventude”.
34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನಮ್ಮ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ,
34 Davi, porém insistiu: “Tomo conta das ovelhas de meu pai e, quando um leão ou um urso aparece para levar um cordeiro do rebanho,
35 ಆದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣ ಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು.
35 vou atrás dele com meu cajado e tiro o cordeiro de sua boca. Se o animal me ataca, eu o seguro pela mandíbula e dou golpes nele com o cajado até ele morrer.
36 ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.
36 Fiz isso com o leão e o urso, e farei o mesmo com esse filisteu incircunciso, pois ele desafiou os exércitos do Deus vivo!”.
37 ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು.
37 E disse ainda: “O S enhor que me livrou das garras do leão e do urso também me livrará desse filisteu!”. Por fim, Saul consentiu. “Está bem, então vá”, disse. “E que o S
38 ಸೌಲನು ತನ್ನ ಯುದ್ಧವಸ್ತ್ರಗಳನ್ನು ದಾವೀದನಿಗೆ ತೊಡಿಸಿದನು. ಸೌಲನು ತಾಮ್ರದ ಶಿರಸ್ತ್ರಾಣವನ್ನು ದಾವೀದನ ತಲೆಯ ಮೇಲಿಟ್ಟನು ಮತ್ತು ಲೋಹದ ಕವಚವನ್ನು ದಾವೀದನ ಮೈಗೆ ತೊಡಿಸಿದನು.
38 Então Saul deu a Davi sua própria armadura, incluindo uma couraça e um capacete de bronze.
39 ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ.
39 Davi prendeu a espada sobre a armadura e tentou dar alguns passos, pois nunca tinha usado essas coisas. “Não consigo andar com tudo isso, pois não estou acostumado”, disse a Saul, e tirou a armadura.
40 ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.
40 Pegou cinco pedras lisas de um riacho e as colocou em sua bolsa de pastor. Armado apenas com seu cajado e sua funda, foi enfrentar o filisteu.
41 ಫಿಲಿಷ್ಟಿಯನು (ಗೊಲ್ಯಾತನು) ದಾವೀದನ ಬಳಿಗೆ ನಿಧಾನವಾಗಿ ನಡೆಯುತ್ತಾ ಬಂದನು. ಗೊಲ್ಯಾತನ ಮುಂದೆ ಅವನ ಸಹಾಯಕನು ಗುರಾಣಿಯನ್ನು ಹೊತ್ತುಕೊಂಡು ನಡೆಯುತ್ತಾ ಹೋದನು.
41 Golias, com seu escudeiro à frente, caminhava em direção a Davi,
42 ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.
42 rindo com desprezo do belo jovem ruivo.
43 ಗೊಲ್ಯಾತನು ದಾವೀದನಿಗೆ, “ಈ ದೊಣ್ಣೆ ಏತಕ್ಕಾಗಿ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರುಗಳ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು.
43 Gritou para Davi: “Por acaso sou um cão para que você venha a mim com um pedaço de pau?”. E amaldiçoou Davi em nome de seus deuses.
44 ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.
44 “Venha cá, e darei sua carne às aves e aos animais selvagens!”, berrou Golias.
45 ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.
45 Davi respondeu ao filisteu: “Você vem a mim com uma espada, uma lança e um dardo, mas eu vou enfrentá-lo em nome do S enhor dos Exércitos, o Deus dos exércitos de Israel, que você desafiou.
46 ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!
46 Hoje o S enhor entregará você em minhas mãos, e eu o matarei e cortarei sua cabeça. Então darei os cadáveres de seus homens às aves e aos animais selvagens, e o mundo todo saberá que há Deus em Israel!
47 ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.
47 E todos que estão aqui reunidos saberão que o S enhor salva seu povo, mas não com espada nem com lança. A batalha é do S enhor , e ele entregará vocês em nossas mãos!”.
48 ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.
48 Quando o filisteu se aproximou para atacar, Davi foi correndo enfrentá-lo.
49 ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.
49 Enfiou a mão na bolsa, pegou uma pedra e atirou-a com sua funda. A pedra acertou o filisteu na testa e ficou encravada ali. E Golias caiu com o rosto em terra.
50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.
50 Assim, Davi venceu o filisteu e o matou com apenas uma funda e uma pedra, pois não tinha espada.
51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು.
51 Em seguida, correu até o filisteu, puxou da bainha a espada dele e a usou para matá-lo e cortar-lhe a cabeça. Quando os filisteus viram que seu melhor guerreiro estava morto, deram meia-volta e fugiram.
52 ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.
52 Os soldados de Israel e de Judá soltaram um forte grito de vitória e perseguiram os filisteus até Gate e até os portões de Ecrom. E os corpos dos filisteus mortos e feridos ficaram espalhados pelo caminho de Saarim até Gate e Ecrom.
53 ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.
53 Então o exército israelita voltou e saqueou o acampamento abandonado dos filisteus.
54 ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.
54 (Davi levou a cabeça do filisteu para Jerusalém, mas guardou as armas dele em sua própria tenda.)
55 ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು.
55 Quando Saul viu Davi sair para lutar contra os filisteus, perguntou a Abner, o comandante de seu exército: “Abner, quem é o pai desse rapaz?”. “Não faço ideia, ó rei!”, disse Abner.
56 ಅದಕ್ಕೆ ಅರಸನು, “ಆ ಯುವಕನ ತಂದೆ ಯಾರೆಂಬುದನ್ನು ಪತ್ತೆಹಚ್ಚು” ಎಂದು ಹೇಳಿದನು.
56 “Então descubra quem é o pai dele!”, ordenou.
57 ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.
57 Assim que Davi voltou, depois de matar Golias, Abner o levou a Saul. Ele ainda carregava a cabeça do filisteu em suas mãos.
58 ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು.
58 Saul perguntou: “Quem é seu pai, meu rapaz?”. E Davi respondeu: “Sou filho de Jessé, que vive em Belém”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 17, comparar traduções ou montar um estudo — tudo direto pelo WhatsApp.