1 Samuel 19

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.
1 Saul falou a seu filho Jônatas e a todos os seus conselheiros sobre a sua intenção de matar Davi. Jônatas, porém, gostava muito de Davi
2 ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ.
2 e o alertou: "Meu pai, está procurando uma oportunidade para matá-lo. Tenha cuidado amanhã cedo. Vá para um esconderijo e fique por lá.
3 ನಾನು ನನ್ನ ತಂದೆಯೊಡನೆ ಹೊಲಕ್ಕೆ ಬರುತ್ತೇನೆ. ನೀನು ಅಡಗಿರುವ ಸ್ಥಳದ ಹತ್ತಿರ ನಾವು ನಿಲ್ಲುತ್ತೇವೆ. ನಾನು ನನ್ನ ತಂದೆಯೊಡನೆ ನಿನ್ನ ಬಗ್ಗೆ ಮಾತನಾಡುತ್ತೇನೆ. ನಂತರ ನಾನು ತಿಳಿದುಕೊಂಡದ್ದನ್ನು ನಿನಗೆ ಹೇಳುತ್ತೇನೆ” ಎಂದನು.
3 Sairei e ficarei com meu pai no campo onde você estiver. Falarei a ele sobre você e, depois, contarei a você o que eu descobrir".
4 ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.
4 Jônatas falou bem de Davi a Saul, seu pai, e lhe disse: "Que o rei não faça mal a seu servo Davi; ele não lhe fez mal nenhum. Ao contrário, o que ele fez trouxe grandes benefícios ao rei.
5 ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.
5 Ele arriscou a vida quando matou o filisteu. O Senhor trouxe grande vitória para todo o Israel; tu mesmo viste tudo e ficaste contente. Por que, então, farias mal a um inocente como Davi, matando-o sem motivo? "
6 ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.
6 Saul atendeu a Jônatas e fez este juramento: "Juro pelo nome do Senhor que Davi não será morto".
7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.
7 Então Jônatas chamou a Davi e lhe contou a conversa toda. Levou-o até Saul, e Davi voltou a servir a Saul como anteriormente.
8 ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.
8 E houve guerra outra vez, e Davi foi lutar com os filisteus. Ele lhes impôs uma grande derrota e eles fugiram dele.
9 ಆದರೆ ಯೆಹೋವನಿಂದ ಬಂದ ದುರಾತ್ಮವು ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ ಇದ್ದಿತು.
9 Mas um espírito maligno mandado pelo Senhor apoderou-se de Saul quando ele estava sentado em sua casa, com sua lança na mão. Enquanto Davi estava tocando harpa,
10 ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
10 Saul tentou encravá-lo na parede com sua lança, mas Davi desviou-se e a lança encravou na parede. E Davi conseguiu escapar. Naquela mesma noite,
11 ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.
11 Saul enviou alguns homens à casa de Davi para vigiá-lo e matá-lo de manhã; mas Mical, a mulher de Davi, o alertou: "Se você não fugir esta noite para salvar sua vida, amanhã estará morto".
12 ನಂತರ ಮೀಕಲಳು ಕಿಟಿಕಿಯಿಂದ ದಾವೀದನನ್ನು ಹೊರಗೆ ಇಳಿಸಿದಳು. ದಾವೀದನು ತಪ್ಪಿಸಿಕೊಂಡು ಓಡಿಹೋದನು.
12 Então Mical fez Davi descer por uma janela, e ele fugiu.
13 ಮೀಕಲಳು ಮನೆಯಲ್ಲಿದ್ದ ವಿಗ್ರಹವನ್ನು ಹಾಸಿಗೆಯ ಮೇಲೆ ಇಟ್ಟು ಅದಕ್ಕೆ ಬಟ್ಟೆಗಳನ್ನು ತೊಡಿಸಿ ಅದರ ತಲೆಗೆ ಹೋತದ ಕೂದಲನ್ನೂ ಅಂಟಿಸಿದಳು.
13 Depois Mical pegou um ídolo do clã e o deitou na cama, pôs uma almofada de pêlos de cabra na cabeceira e o cobriu com um manto.
14 ಸೌಲನು ದಾವೀದನನ್ನು ಬಂಧಿಸಿ ಕರೆತರಲು ಸಂದೇಶಕರನ್ನು ಕಳುಹಿಸಿದನು. ಆದರೆ ಮೀಕಲಳು, “ದಾವೀದನಿಗೆ ಹುಷಾರಿಲ್ಲ” ಎಂದು ಹೇಳಿದಳು.
14 Quando chegaram os homens que Saul tinha enviado para prenderem Davi, Mical disse: "Ele está doente".
15 ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.
15 Então Saul enviou os homens de volta para verem Davi dizendo: "Tragam-no até aqui em sua cama para que eu o mate".
16 ಸಂದೇಶಕರು ದಾವೀದನ ಮನೆಗೆ ಹೋದರು. ಅವರು ದಾವೀದನನ್ನು ಕರೆದೊಯ್ಯಲು ಒಳಗಡೆ ಹೋದಾಗ ಹಾಸಿಗೆಯ ಮೇಲಿರುವುದು ಕೇವಲ ವಿಗ್ರಹವೆಂಬುದೂ ಅದರ ಕೂದಲು ಕೇವಲ ಹೋತದ ಕೂದಲೆಂಬುದೂ ಅವರಿಗೆ ಗೊತ್ತಾಯಿತು.
16 Quando, porém, os homens entraram, o ídolo do clã estava na cama, e na cabeceira havia uma almofada de pêlos de cabra.
17 ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು
17 Saul disse a Mical: "Por que você me enganou desse modo e deixou que o meu inimigo escapasse? " Ela lhe respondeu: "Ele me disse que o deixasse, se não me mataria? "
18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.
18 Depois que fugiu, Davi foi falar com Samuel em Ramá, e contou-lhe tudo o que Saul lhe havia feito. Então ele e Samuel foram a Naiote e ficaram lá.
19 ದಾವೀದನು ರಾಮದ ಪಾಳೆಯದಲ್ಲಿರುವ ಸಂಗತಿಯು ಸೌಲನಿಗೆ ತಿಳಿದುಬಂದಿತು.
19 E Saul foi informado: "Davi está em Naiote, em Ramá".
20 ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.
20 Então Saul enviou alguns homens para capturá-lo. Todavia, quando viram um grupo de profetas profetizando, dirigidos por Samuel, o Espírito de Deus apoderou-se dos mensageiros de Saul e eles também entraram em transe profético.
21 ಸೌಲನು ಈ ಸುದ್ದಿಯನ್ನು ಕೇಳಿ ಇತರ ಸಂದೇಶಕರನ್ನು ಕಳುಹಿಸಿದನು. ಆದರೆ ಅವರೂ ಪ್ರವಾದಿಸಲಾರಂಭಿಸಿದರು. ಆದ್ದರಿಂದ ಸೌಲನು ಮೂರನೆಯ ಬಾರಿ ಸಂದೇಶಕರನ್ನು ಕಳುಹಿಸಿದನು, ಅವರೂ ಪ್ರವಾದಿಸಲಾರಂಭಿಸಿದರು.
21 Contaram isto a Saul, e ele enviou mais mensageiros, e estes também entraram em transe profético. Depois mandou um terceiro grupo e eles também entraram em transe profético.
22 ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು.
22 Finalmente ele mesmo foi para Ramá. Chegando à grande cisterna do lugar chamado Seco, perguntou onde estavam Samuel e Davi. E lhe responderam: "Em Naiote de Ramá".
23 ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು.
23 Então Saul foi para lá. Entretanto, o Espírito de Deus apoderou-se dele; e ele foi pelo caminho em transe profético, até chegar a Naiote.
24 ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು.
24 E despindo-se de suas roupas, também profetizou em transe na presença de Samuel. Ele ficou deitado nu todo aquele dia e toda aquela noite. Por isso, o povo diz: "Está Saul também entre os profetas? "

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 19, comparar traduções ou montar um estudo — tudo direto pelo WhatsApp.