1 Samuel 22

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ದಾವೀದನು ಗತ್ತನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.
1 Então, Davi se retirou dali e se escapou para a caverna de Adulão; e ouviram-no seus irmãos e toda a casa de seu pai e desceram ali para ele.
2 ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.
2 E ajuntou-se a ele todo homem que se achava em aperto, e todo homem endividado, e todo homem de espírito desgostoso, e ele se fez chefe deles; e eram com ele uns quatrocentos homens.
3 ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.
3 E foi-se Davi dali a Mispa dos moabitas e disse ao rei dos moabitas: Deixa estar meu pai e minha mãe convosco, até que saiba o que Deus há de fazer de mim.
4 ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.
4 E trouxe-os perante o rei dos moabitas, e ficaram com ele todos os dias que Davi esteve no lugar forte.
5 ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.
5 Porém o profeta Gade disse a Davi: Não fiques naquele lugar forte; vai e entra na terra de Judá. Então, Davi foi e veio para o bosque de Herete.
6 ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.
6 E ouviu Saul que já se sabia de Davi e dos homens que estavam com ele: e estava Saul em Gibeá, debaixo de um arvoredo, em Ramá, e tinha na mão a sua lança, e todos os seus criados estavam com ele.
7 ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?
7 Então, disse Saul a todos os seus criados que estavam com ele: Ouvi, peço-vos, filhos de Benjamim, dar-vos-á também o filho de Jessé, a todos vós, terras e vinhas, e far-vos-á a todos chefes de milhares e chefes de centenas,
8 ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.
8 para que todos vós tenhais conspirado contra mim? E ninguém há que me dê aviso de que meu filho tem feito aliança com o filho de Jessé; e nenhum dentre vós há que se doa de mim e mo participe, pois meu filho tem contra mim sublevado a meu servo, para me armar ciladas, como se vê neste dia.
9 ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು.
9 Então, respondeu Doegue, o edomita, que também estava com os criados de Saul, e disse: Ao filho de Jessé vi vir a Nobe, a Aimeleque, filho de Aitube,
10 ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.
10 o qual consultou por ele o Senhor , e lhe deu mantimento, e lhe deu também a espada de Golias, o filisteu.
11 ಆಗ ರಾಜನಾದ ಸೌಲನು ಯಾಜಕನನ್ನು ತನ್ನ ಹತ್ತಿರಕ್ಕೆ ಕರೆತರಲು ಕೆಲವು ಜನರಿಗೆ ಅಪ್ಪಣೆಕೊಟ್ಟನು. ಸೌಲನು, ಅಹೀಟೂಬನ ಮಗನಾದ ಅಹೀಮೆಲೆಕನನ್ನೂ ಅವನ ಎಲ್ಲ ಬಂಧುಗಳನ್ನೂ ಕರೆತರಲು ಅವರಿಗೆ ಹೇಳಿದನು. ಅಹೀಮೆಲೆಕನ ಬಂಧುಗಳು ನೋಬಿನಲ್ಲಿ ಯಾಜಕರಾಗಿದ್ದರು. ಅವರೆಲ್ಲ ರಾಜನ ಹತ್ತಿರಕ್ಕೆ ಬಂದರು.
11 Então, o rei mandou chamar a Aimeleque, sacerdote, filho de Aitube, e a toda a casa de seu pai, e aos sacerdotes que estavam em Nobe; e todos eles vieram ao rei.
12 ಸೌಲನು ಅಹೀಮೆಲೆಕನಿಗೆ, “ಅಹೀಟೂಬನ ಮಗನೇ, ಈಗ ನನ್ನ ಮಾತನ್ನು ಕೇಳು” ಎಂದು ಹೇಳಿದನು.
12 E disse Saul: Ouve, peço-te, filho de Aitube. E ele disse: Eis-me aqui, senhor meu.
13 ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.
13 Então, lhe disse Saul: Por que conspirastes contra mim, tu e o filho de Jessé? Pois deste-lhe pão e espada e consultaste por ele a Deus, para que se levantasse contra mim a armar- me ciladas, como se vê neste dia?
14 ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.
14 E respondeu Aimeleque ao rei e disse: E quem, entre todos os teus criados, há tão fiel como Davi, o genro do rei, pronto na sua obediência e honrado na tua casa?
15 ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.
15 Comecei, porventura, hoje a consultar por ele a Deus? Longe de mim tal! Não impute o rei coisa nenhuma a seu servo, nem a toda a casa de meu pai, pois o teu servo não soube nada de tudo isso, nem muito nem pouco.
16 ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.
16 Porém o rei disse: Aimeleque, morrerás certamente, tu e toda a casa de teu pai.
17 ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿ ಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು.
17 E disse o rei aos da sua guarda, que estavam com ele: Virai-vos e matai os sacerdotes do Senhor , porque também a sua mão é com Davi e porque souberam que fugiu e não mo fizeram saber. Porém os criados do rei não quiseram estender as suas mãos para arremeter contra os sacerdotes do Senhor .
18 ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.
18 Então, disse o rei a Doegue: Vira-te tu e arremete contra os sacerdotes. Então, se virou Doegue, o edomita, e arremeteu contra os sacerdotes, e matou, naquele dia, oitenta e cinco homens que vestiam éfode de linho.
19 ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.
19 Também a Nobe, cidade desses sacerdotes, passou a fio de espada; desde o homem até à mulher, desde os meninos até aos de peito; e até os bois, jumentos e ovelhas passou a fio de espada.
20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.
20 Porém escapou um dos filhos de Aimeleque, filho de Aitube, cujo nome era Abiatar, o qual fugiu atrás de Davi.
21 ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ಯಾತಾರನು ದಾವೀದನಿಗೆ ತಿಳಿಸಿದನು.
21 E Abiatar anunciou a Davi que Saul tinha matado os sacerdotes do Senhor .
22 ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ.
22 Então, Davi disse a Abiatar: Bem sabia eu, naquele dia, que, estando ali Doegue, o edomita, não deixaria de o denunciar a Saul; eu dei ocasião contra todas as almas da casa de teu pai.
23 ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.
23 Fica comigo, não temas, porque quem procurar a minha morte também procurará a tua, pois estarás salvo comigo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 22, comparar traduções ou montar um estudo — tudo direto pelo WhatsApp.