1 Samuel 27

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.
1 Davi, porém, pensou: “Um dia, Saul me apanhará. O melhor que tenho a fazer é fugir para a terra dos filisteus. Então Saul deixará de me perseguir em todo o território de Israel e, por fim, estarei seguro”.
2 ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.
2 Assim, Davi levou os seiscentos homens e foi até Aquis, filho de Maoque, rei de Gate.
3 ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.
3 Davi, seus soldados e suas famílias se estabeleceram ali com Aquis, em Gate. Davi levou suas duas esposas, Ainoã, de Jezreel, e Abigail, viúva de Nabal, do Carmelo.
4 ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.
4 Quando Saul soube que Davi tinha fugido para Gate, deixou de persegui-lo.
5 ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು.
5 Certo dia, Davi disse a Aquis: “Se parecer bem ao meu senhor, preferimos viver em uma das cidades no campo. Seu servo não precisa morar na cidade real”.
6 ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.
6 Então Aquis lhe deu a cidade de Ziclague, que pertence aos reis de Judá até hoje,
7 ದಾವೀದನು ಫಿಲಿಷ್ಟಿಯರೊಂದಿಗೆ ಒಂದು ವರ್ಷ ನಾಲ್ಕು ತಿಂಗಳು ವಾಸಮಾಡಿದನು.
7 e Davi viveu um ano e quatro meses entre os filisteus.
8 ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.
8 Partindo de Ziclague, Davi e seus homens atacavam os gesuritas, os gersitas e os amalequitas, povos que desde tempos muito antigos viviam perto de Sur, até a terra do Egito.
9 ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.
9 Davi não deixava nenhum sobrevivente, homem ou mulher, nos povoados que atacava. Antes de comparecer à presença do rei Aquis, tomava ovelhas, gado, jumentos, camelos e roupas.
10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ ಹೇಳುತ್ತಿದ್ದನು.
10 “Que lugar você atacou hoje?”, perguntava Aquis. E Davi respondia: “O sul de Judá, a região dos jerameelitas e dos queneus”.
11 ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು.
11 Davi não deixava nenhum sobrevivente, homem ou mulher, para ir a Gate e contar onde ele havia estado de fato. Isso acontecia repetidamente, enquanto ele vivia entre os filisteus.
12 ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.
12 Aquis acreditava em Davi e pensava: “A esta altura, o povo de Israel deve odiá-lo muito. Agora ele ficará aqui e me servirá para sempre!”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 27, comparar traduções ou montar um estudo — tudo direto pelo WhatsApp.