1 Samuel 31
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.
1 Entretanto, os filisteus atacaram Israel, e os israelitas fugiram diante deles, caindo feridos de morte no monte de Gelboé.
2 ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದ್ವಾ ಮತ್ತು ಮಲ್ಕೀಷೂವರನ್ನು ಫಿಲಿಷ್ಟಿಯರು ಕೊಂದರು.
2 Os filisteus investiram contra Saul e seus filhos, matando Jônatas, Abinadab e Melquisua, filhos de Saul.
3 ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.
3 A violência do combate concentrou-se contra Saul. Os arqueiros descobriram-no e ele foi ferido no ventre.
4 ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.
4 Disse ao seu escudeiro: Tira a tua espada e traspassa-me, para que não o venham fazer esses incircuncisos, ultrajando-me! Mas o escudeiro não o quis fazer, porque se apoderou dele um grande terror. Então tomou Saul a sua espada e jogou-se sobre ela.
5 ಸೌಲನು ಸತ್ತುಹೋದದ್ದನ್ನು ಕಂಡ ಆಯುಧವಾಹಕನೂ ತನ್ನ ಖಡ್ಗದಿಂದ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅವನು ಸೌಲನೊಂದಿಗೆ ಅಲ್ಲಿಯೇ ಸತ್ತುಹೋದನು.
5 O escudeiro, vendo que Saul estava morto, arremessou-se também ele sobre a sua espada e morreu com ele.
6 ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.
6 Assim, morreram naquele mesmo dia, Saul e seus três filhos, seu escudeiro e todos os seus homens.
7 ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.
7 Os israelitas que moravam além do vale e além do Jordão, vendo a derrota do exército de Israel e a morte de Saul com seus filhos, abandonaram as suas cidades e fugiram; e os filisteus vieram e estabeleceram-se nelas.
8 ಮಾರನೆಯ ದಿನ, ಸತ್ತದೇಹಗಳಿಂದ ವಸ್ತುಗಳನ್ನು ದೋಚಲು ಫಿಲಿಷ್ಟಿಯರು ಬಂದರು. ಸೌಲನು ಮತ್ತು ಅವನ ಮೂರು ಜನ ಮಕ್ಕಳು ಗಿಲ್ಬೋವ ಶಿಖರದಲ್ಲಿ ಸತ್ತಿರುವುದನ್ನು ಅವರು ನೋಡಿದರು.
8 No dia seguinte vieram os filisteus para despojar os cadáveres e encontraram Saul e seus três filhos caídos no monte Gelboé.
9 ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು.
9 Cortaram-lhe a cabeça, despojaram-no de suas armas, e as enviaram por toda a terra dos filisteus, para que se publicasse essa boa nova nos templos de seus ídolos e entre o povo.
10 ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.
10 Puseram as armas de Saul no templo de Astarte e suspenderam o seu cadáver nos muros de Betsã.
11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬುದನ್ನು ಯಾಬೆಷ್‌ಗಿಲ್ಯಾದಿನಲ್ಲಿ ವಾಸಿಸುತ್ತಿದ್ದ ಜನರೆಲ್ಲ ತಿಳಿದುಕೊಂಡರು.
11 Quando os habitantes de Jabes em Galaad souberam do que os filisteus tinham feito a Saul,
12 ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.
12 puseram-se a caminho os mais valentes dentre eles, e andaram toda a noite. Tiraram das muralhas de Betsã os cadáveres de Saul e de seus filhos, e voltaram a Jabes, onde os queimaram.
13 ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನ ಪಿಚುಲ ಮರದ ಕೆಳಗೆ ಸಮಾಧಿಮಾಡಿದರು. ನಂತರ ಯಾಬೇಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು.
13 Tomaram os ossos e os enterraram debaixo da tamareira, em Jabes. Depois disso jejuaram sete dias.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 31, comparar traduções ou montar um estudo — tudo direto pelo WhatsApp.