1 Tessalonicenses 1
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ.
1 Nós, Paulo, Silas e Timóteo, escrevemos esta carta à igreja em Tessalônica, a vocês que estão em Deus, o Pai, e no Senhor Jesus Cristo. Que Deus lhes dê graça e paz.
2 ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.
2 Sempre damos graças a Deus por todos vocês e os mencionamos constantemente em nossas orações.
3 ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
3 Quando oramos por vocês diante de nosso Deus e Pai, relembramos seu trabalho fiel, seus atos em amor e sua firme esperança em nosso Senhor Jesus Cristo.
4 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.
4 Sabemos, irmãos, que Deus os ama e os escolheu.
5 ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.
5 Pois, quando lhes apresentamos as boas-novas, não o fizemos apenas com palavras, mas também com poder, visto que o Espírito Santo lhes deu plena certeza de que era verdade o que lhes dizíamos. E vocês sabem como nos comportamos entre vocês e em seu favor.
6 ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.
6 Assim, apesar do sofrimento que isso lhes trouxe, vocês receberam a mensagem com a alegria que vem do Espírito Santo e se tornaram imitadores nossos e do Senhor.
7 ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನಂಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ.
7 Com isso, tornaram-se exemplo para todos os irmãos na Grécia, tanto na Macedônia como na Acaia.
8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
8 Agora, partindo de vocês, a palavra do Senhor tem se espalhado por toda parte, até mesmo além da Macedônia e da Acaia, pois sua fé em Deus se tornou conhecida em todo lugar. Não precisamos sequer mencioná-la,
9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.
9 pois as pessoas têm comentado sobre como vocês nos acolheram e como deixaram os ídolos a fim de servir ao Deus vivo e verdadeiro.
10 ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.
10 Também comentam como vocês esperam do céu a vinda de Jesus, o Filho de Deus, a quem ele ressuscitou dos mortos e que nos livrará da ira que está para vir.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Tessalonicenses 1, comparar traduções ou montar um estudo — tudo direto pelo WhatsApp.