2 Coríntios 11
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.
1 Eu gostaria que vocês me suportassem mesmo quando sou um tanto louco. Por favor, me suportem!
2 ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.
2 O mesmo zelo que Deus tem por vocês eu também tenho. Porque vocês são como uma virgem pura que eu prometi dar em casamento somente a um homem, que é Cristo.
3 ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.
3 Pois, assim como Eva foi enganada pelas mentiras da cobra, eu tenho medo de que a mente de vocês seja corrompida e vocês abandonem a devoção sincera e pura a Cristo.
4 ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
4 Porque vocês suportam com alegria qualquer um que chega e anuncia um Jesus diferente daquele que nós anunciamos. E aceitam um espírito e um evangelho completamente diferentes do Espírito de Deus e do evangelho que receberam de nós.
5 ಆ “ಮಹಾ ಅಪೊಸ್ತಲರು” ನನಗಿಂತ ಮಿಗಿಲಾದವರೆಂದು ನಾನು ಭಾವಿಸುವುದಿಲ್ಲ.
5 Eu não acho que tenho menos valor do que esses tais “superapóstolos”!
6 ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.
6 Talvez eu seja um principiante no falar, mas no conhecimento não sou. Sempre e em todas as situações temos dado provas disso a vocês.
7 ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?
7 Quando anunciei a vocês a boa notícia de Deus, fiz isso completamente de graça. Eu me humilhei para engrandecer vocês. Será que houve algum mal nisso?
8 ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.
8 Enquanto estive trabalhando entre vocês, fui pago por outras igrejas. Por assim dizer, eu estava roubando delas para ajudar vocês.
9 ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.
9 E, durante o tempo em que estive com vocês, quando precisava de alguma coisa, não incomodava ninguém; pois os irmãos que vieram da Macedônia me trouxeram tudo o que eu precisava. O que aconteceu no passado e acontecerá no futuro é isto: eu nunca exigirei que vocês me ajudem.
10 ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.
10 Pela verdade de Cristo, a qual está em mim, eu garanto que ninguém, em nenhum lugar da Acaia, tirará de mim este orgulho de anunciar o evangelho sem cobrar nada.
11 ನಾನು ನಿಮಗೆ ಭಾರವಾಗದಿರುವುದು ನಿಮ್ಮ ಮೇಲೆ ನನಗೆ ಪ್ರೀತಿಯಿಲ್ಲದಿರುವ ಕಾರಣದಿಂದಲೋ? ಇಲ್ಲ! ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತಿದೆ.
11 Por que estou dizendo isso? Será que é porque não amo vocês? Deus sabe que os amo!
12 ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.
12 O que estou fazendo agora vou continuar a fazer a fim de evitar que aqueles tais “ apóstolos ” tenham motivo para se gabar e dizer que fazem um trabalho igual ao nosso.
13 ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ.
13 Aqueles homens são apóstolos falsos e não verdadeiros. Eles mentem a respeito dos seus trabalhos e se disfarçam, apresentando-se como verdadeiros apóstolos de Cristo.
14 ಇದು ನಮಗೆ ಆಶ್ಚರ್ಯವಾದದ್ದೇನೂ ಅಲ್ಲ. ಏಕೆಂದರೆ ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುತ್ತಾನೆ.
14 E isso não é de admirar, pois até Satanás pode se disfarçar e ficar parecendo um anjo de luz.
15 ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.
15 Portanto, não é nada demais que os servidores dele se disfarcem, apresentando-se como pessoas que fazem o bem. Mas no fim eles receberão exatamente o que as suas ações merecem.
16 ನಾನು ನಿಮಗೆ ಮತ್ತೆ ಹೇಳುವುದೇನೆಂದರೆ, ನನ್ನನ್ನು ಬುದ್ಧಿಹೀನನೆಂದು ಯಾರೂ ಯೋಚಿಸಕೂಡದು. ಬುದ್ಧಿಹೀನನೆಂದು ನೀವು ಯೋಚಿಸುವುದಾಗಿದ್ದರೆ, ನೀವು ಬದ್ಧಿಹೀನನನ್ನು ಸ್ವೀಕರಿಸಿಕೊಳ್ಳುವಂತೆ ನನ್ನನ್ನು ಸ್ವೀಕರಿಸಿಕೊಳ್ಳಿರಿ. ಆಗ ನಾನು ಸ್ವಲ್ಪ ಹೆಮ್ಮೆಪಡಲು ಸಾಧ್ಯವಾಗುವುದು.
16 Repito: ninguém deve pensar que eu estou louco. Mas, se vocês pensam isso, então me recebam como louco para que assim eu tenha alguma pequena coisa de que me gabar.
17 ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ.
17 De fato, o que estou dizendo agora não é o que o Senhor me mandou dizer. Quanto a eu me gabar, estou realmente falando como louco.
18 ಅನೇಕ ಜನರು ತಮ್ಮ ಪ್ರಾಪಂಚಿಕ ಜೀವನದ ಬಗ್ಗೆ ಹೊಗಳಿಕೊಳ್ಳುತ್ತಿದ್ದಾರೆ. ಆದ್ದರಿಂದ ನಾನು ಸಹ ಹೊಗಳಿಕೊಳ್ಳುತ್ತೇನೆ.
18 Já que existem tantas pessoas que se gabam por motivos apenas humanos, eu também vou me gabar de mim mesmo.
19 ನೀವು ಬುದ್ಧಿವಂತರಾಗಿರುವುದರಿಂದ ಬುದ್ಧಿಹೀನರ ವಿಷಯದಲ್ಲಿ ಸಂತೋಷದಿಂದ ತಾಳ್ಮೆಯಿಂದಿರುತ್ತೀರಿ.
19 Vocês são tão sábios e suportam de boa vontade os loucos.
20 ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.
20 Toleram os que mandam em vocês e exploram vocês; toleram os que os enganam, os que os tratam com desprezo e os que lhes dão bofetadas.
21 ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ!
21 Tenho até vergonha de confessar que nós fomos tímidos demais e não fomos capazes de fazer coisas como essas. Mas, se os outros se atrevem a se gabar de alguma coisa, eu também vou me atrever, embora isso seja uma loucura.
22 ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.
22 Eles são hebreus? Eu também sou. Eles são israelitas? Eu também sou. Eles são descendentes de Abraão? Eu também sou.
23 ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.
23 Eles são servos de Cristo? Mas eu sou um servo melhor do que eles, embora, ao dizer isso, eu esteja falando como se fosse louco. Pois eu tenho trabalhado mais do que eles e tenho estado mais vezes na cadeia. Tenho sido chicoteado muito mais do que eles e muitas vezes estive em perigo de morte.
24 ಚಾವಟಿಯಿಂದ ಮೂವತ್ತೊಂಭತ್ತು ಏಟುಗಳನ್ನು ಹೊಡೆಯಿಸಿಕೊಳ್ಳುವ ಶಿಕ್ಷೆಯನ್ನು ಯೆಹೂದಿಯರು ನನಗೆ ಐದು ಸಲ ವಿಧಿಸಿದರು.
24 Em cinco ocasiões os judeus me deram trinta e nove chicotadas .
25 ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.
25 Três vezes os romanos me bateram com porretes, e uma vez fui apedrejado. Três vezes o navio em que eu estava viajando afundou, e numa dessas vezes passei vinte e quatro horas boiando no mar.
26 ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.
26 Nas muitas viagens que fiz, tenho estado em perigos de inundações e de ladrões; em perigos causados pelos meus patrícios, os judeus, e também pelos não judeus. Tenho estado no meio de perigos nas cidades, nos desertos e em alto-mar; e também em perigos causados por falsos irmãos.
27 ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.
27 Tenho tido trabalhos e canseiras. Muitas vezes tenho ficado sem dormir. Tenho passado fome e sede; têm me faltado casa, comida e roupas.
28 ಹೀಗೆ ನಾನು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಎಲ್ಲಾ ಸಭೆಗಳ ಮೇಲೆ ನನಗಿರುವ ಚಿಂತೆಯೂ ಇವುಗಳಲ್ಲಿ ಒಂದು. ನಾನು ಪ್ರತಿನಿತ್ಯ ಅವುಗಳ ಬಗ್ಗೆ ಚಿಂತಿಸುತ್ತೇನೆ.
28 Além dessas e de outras coisas, ainda pesa diariamente sobre mim a preocupação que tenho por todas as igrejas.
29 ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ.
29 Quando alguém está fraco, eu também me sinto fraco; e, quando alguém cai em pecado, eu fico muito aflito.
30 ಹೊಗಳಿಕೊಳ್ಳಬೇಕಾದರೆ, ನನ್ನನ್ನು ಬಲಹೀನನೆಂದು ತೋರಿಸುವ ಸಂಗತಿಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.
30 Se existe motivo para eu me gabar, então vou me gabar das coisas que mostram a minha fraqueza.
31 ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.
31 O Deus e Pai do Senhor Jesus, o Deus que é bendito para sempre, sabe que não estou mentindo.
32 ನಾನು ದಮಸ್ಕದಲ್ಲಿದ್ದಾಗ ರಾಜನಾದ ಅರೇತನ ಅಧೀನದಲ್ಲಿದ್ದ ರಾಜ್ಯಪಾಲನು ನನ್ನನ್ನು ಬಂಧಿಸಬೇಕೆಂದಿದ್ದನು. ಅವನು ಪಟ್ಟಣದ ಸುತ್ತಲೂ ಕಾವಲುಗಾರರನ್ನು ನಿಲ್ಲಿಸಿದನು.
32 Quando estive na cidade de Damasco, o governador nomeado pelo rei Aretas pôs guardas nos portões da cidade para me prenderem.
33 ಆದರೆ ನನ್ನ ಕೆಲವು ಸ್ನೇಹಿತರು ನನ್ನನ್ನು ಬುಟ್ಟಿಯೊಳಗೆ ಕುಳ್ಳಿರಿಸಿ, ಗೋಡೆಯ ಕಿಟಕಿಯೊಳಗಿಂದ ಕೆಳಗಿಳಿಸಿದರು. ಹೀಗೆ ನಾನು ರಾಜ್ಯಪಾಲನಿಂದ ತಪ್ಪಿಸಿಕೊಂಡೆನು.
33 Porém os meus amigos fizeram com que eu descesse num grande cesto, por uma abertura da muralha, e assim escapei do Governador.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Coríntios 11, comparar traduções ou montar um estudo — tudo direto pelo WhatsApp.