2 Crônicas 11
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.
1 Quando Roboão chegou em Jerusalém, convocou cento e oitenta mil homens de combate, das tribos de Judá e de Benjamim, para guerrearem contra Israel e recuperarem o reino para Roboão.
2 ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು,
2 Entretanto, veio esta palavra do Senhor a Semaías, homem de Deus:
3 “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು:
3 "Diga a Roboão, filho de Salomão, rei de Judá, e a todos os israelitas de Judá e de Benjamim:
4 ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.
4 ‘Assim diz o Senhor: Não saiam à guerra contra os seus irmãos. Voltem para casa, todos vocês, pois fui eu que fiz isso’ ". E eles obedeceram à palavra do Senhor e desistiram de marchar contra Jeroboão.
5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.
5 Roboão morou em Jerusalém e reconstruiu algumas cidades para a defesa de Judá. Foram elas:
6 ಬೆತ್ಲೆಹೇಮ್, ಏತಾಮ್, ತೆಕೋವ,
6 Belém, Etã, Tecoa,
7 ಬೇತ್ಚೂರ್, ಸೋಕೋ, ಅದುಲ್ಲಾಮ್,
7 Bete-Zur, Socó, Adulão,
8 ಗತ್, ಮಾರೇಷ, ಜೀಫ್,
8 Gate, Maressa, Zife,
9 ಅದೋರೈಮ್, ಲಾಕೀಷ್, ಅಜೇಕ.
9 Adoraim, Láquis, Azeca,
10 ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.
10 Zorá, Aijalom e Hebrom. Essas cidades foram fortificadas em Judá e em Benjamim.
11 ರೆಹಬ್ಬಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು.
11 Ele fortaleceu as suas defesas e nelas colocou comandantes, com suprimentos de alimentos, azeite e vinho.
12 ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು.
12 Armazenou escudos grandes e lanças em todas as cidades, tornando-as muito fortes. Assim, Judá e Benjamim continuaram sob o seu domínio.
13 ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.
13 Os sacerdotes e os levitas de todos os distritos de Israel o apoiaram.
14 ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.
14 Os levitas chegaram até a abandonar as suas pastagens e os seus bens, e foram para Judá e para Jerusalém, porque Jeroboão e seus filhos os haviam rejeitado como sacerdotes do Senhor,
15 ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.
15 nomeando seus próprios sacerdotes para os altares idólatras e para os ídolos que haviam feito em forma de bodes e de bezerros.
16 ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.
16 De todas as tribos de Israel aqueles que estavam realmente dispostos a buscar o Senhor, o Deus de Israel, seguiram os levitas até Jerusalém para oferecerem sacrifícios ao Senhor, ao Deus dos seus antepassados.
17 ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.
17 Eles fortaleceram o reino de Judá e durante três anos apoiaram Roboão, filho de Salomão, andando nos caminhos de Davi e de Salomão durante esse tempo.
18 ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು.
18 Roboão casou-se com Maalate, filha de Jeremote e neta de Davi. A mãe de Maalate era Abiail, filha de Eliabe e neta de Jessé.
19 ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್.
19 Ela deu-lhe três filhos: Jeús, Semarias e Zaão.
20 ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು.
20 Depois ele casou-se com Maaca, filha de Absalão, a qual lhe deu os filhos Abias, Atai, Ziza e Selomite.
21 ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮೊಮ್ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.
21 Roboão amava Maaca, filha de Absalão, mais do que a qualquer outra de suas esposas e concubinas. Ao todo ele teve dezoito esposas e sessenta concubinas, vinte e oito filhos e sessenta filhas.
22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.
22 Roboão nomeou Abias, filho de Maaca, o chefe entre os seus irmãos, com o intuito de fazê-lo rei.
23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.
23 Ele agiu com sabedoria, dispersando seus filhos pelos distritos de Judá e de Benjamim, e pelas cidades fortificadas. Garantiu-lhes fartas provisões e lhes conseguiu muitas mulheres.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 11, comparar traduções ou montar um estudo — tudo direto pelo WhatsApp.