2 Crônicas 22
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.
1 O povo de Jerusalém proclamou Acazias, filho mais novo de Jeorão, rei em seu lugar, uma vez que as tropas que vieram com os árabes haviam matado todos os outros filhos dele. Assim começou a reinar Acazias, filho de Jeorão, rei de Judá.
2 ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.
2 Acazias tinha vinte e dois anos de idade quando começou a reinar, e reinou um ano em Jerusalém. O nome de sua mãe era Atalia, neta de Onri.
3 ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.
3 Ele também andou nos caminhos da família de Acabe, pois sua mãe lhe dava maus conselhos.
4 ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.
4 Ele fez o que o Senhor reprova, como a família de Acabe havia feito, pois, depois da morte de seu pai, eles se tornaram seus conselheiros, para sua ruína.
5 ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾವುನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾವುನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾವುನನ್ನು ಗಾಯಗೊಳಿಸಿದರು.
5 Ele também seguiu o conselho deles quando aliou-se a Jorão, filho de Acabe, rei de Israel, e saiu à guerra contra Hazael, rei da Síria, em Ramote-Gileade. Jorão foi ferido
6 ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾವುನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾವುನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾವುನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.
6 e voltou a Jezreel para recuperar-se dos ferimentos sofridos em Ramote, na batalha contra Hazael, rei da Síria. Depois Acazias, rei de Judá, foi a Jezreel visitar Jorão, que se recuperava de seus ferimentos.
7 ಯೋರಾವುನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾವುನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.
7 Por meio dessa visita, Deus provocou a queda de Acazias. Quando ele chegou, saiu com Jorão ao encontro de Jeú, filho de Ninsi, a quem o Senhor havia ungido para destruir a família de Acabe.
8 ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.
8 Quando Jeú estava executando juízo sobre a família de Acabe, encontrou os líderes de Judá e os filhos dos parentes de Acazias, que o serviam, e os matou.
9 ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.
9 Saiu então em busca de Acazias, e seus soldados o capturaram em Samaria, onde estava escondido. Levado a Jeú, Acazias foi morto. Mas não lhe negaram sepultura, pois disseram: "Ele era neto de Josafá, que buscou o Senhor de todo o coração". Assim, a família de Acazias não tinha mais ninguém que pudesse ser rei.
10 ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕದ ಕೂಡಲೇ ಆಕೆ ಯೆಹೂದದಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು.
10 Quando Atalia, mãe de Acazias, soube que seu filho estava morto, mandou matar toda a família real de Judá.
11 ಆದರೆ ಅರಸನಾದ ಯೋರಾವುನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದೆಹೋದುದರಿಂದ ಬದುಕಿಕೊಂಡನು.
11 Mas Jeoseba, filha do rei Jeorão, pegou Joás, um dos filhos do rei Acazias que iam ser assassinados, e o colocou num quarto, junto com a sua ama. Assim Jeoseba, filha do rei Jeorão, mulher do sacerdote Joiada e irmã de Acazias, escondeu Joás de Atalia, de forma que ela não pôde matá-lo.
12 ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.
12 Seis anos ele ficou escondido com elas no templo de Deus, enquanto Atalia governava o país.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 22, comparar traduções ou montar um estudo — tudo direto pelo WhatsApp.