2 Crônicas 23
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಆರು ವರ್ಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್.
1 No sétimo ano Joiada encorajou-se e fez um acordo com os líderes dos batalhões de cem: Azarias, filho de Jeroão, Ismael, filho de Joanã, Azarias, filho de Obede, Maaséias, filho de Adaías, e Elisafate, filho de Zicri.
2 ಅವರು ಯೆಹೂದ ರಾಜ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
2 Eles percorreram todo o Judá e reuniram de todas as cidades, os levitas e os chefes das famílias israelitas. Quando chegaram a Jerusalém,
3 ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು.
3 toda a assembléia fez um acordo com o rei no templo de Deus. Joiada lhes disse: "Reinará o filho do rei, conforme o Senhor prometeu acerca dos descendentes de Davi.
4 ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.
4 Vocês vão fazer o seguinte: Um terço de vocês, sacerdotes e levitas que entrarão de serviço no sábado, deverá ficar vigiando nas portas do templo;
5 ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು;
5 um terço, no palácio real; e um terço, na porta do Alicerce; e todo o povo estará nos pátios do templo do Senhor.
6 ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.
6 Ninguém deverá entrar no templo do Senhor, exceto os sacerdotes e os levitas de serviço; esses podem entrar porque são consagrados, mas o povo deverá observar o que o Senhor lhes determinou.
7 ಲೇವಿಯರು ಅರಸನ ಸುತ್ತಲೂ ನಿಂತಿರಬೇಕು. ಪ್ರತಿಯೊಬ್ಬರು ತಮ್ಮ ಖಡ್ಗವನ್ನು ಹಿಡಿದವರಾಗಿರಬೇಕು. ಯಾರಾದರೂ ಆಲಯದೊಳಕ್ಕೆ ಪ್ರವೇಶಿಸಿದರೆ ಅವನನ್ನು ಸಾಯಿಸಿರಿ. ರಾಜನು ಹೋಗುವ ಸ್ಥಳಗಳಲ್ಲಿ ನೀವು ಅವನೊಂದಿಗೆಯೇ ಇರಬೇಕು.”
7 Os levitas deverão posicionar-se em torno do rei, todos de armas na mão. Matem todo aquele que entrar no templo. Acompanhem o rei aonde quer que ele for".
8 ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.
8 Os levitas e todos os homens de Judá fizeram como o sacerdote Joiada havia ordenado. Cada um levou seus soldados, tanto os que estavam entrando de serviço no sábado como os que estavam saindo, pois o sacerdote Joiada não havia dispensado nenhuma das divisões.
9 ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.
9 Então ele deu aos líderes dos batalhões de cem, as lanças e os escudos grandes e pequenos que haviam pertencido ao rei Davi, e que estavam no templo de Deus.
10 ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು.
10 Posicionou todos os homens, todos de arma na mão, em volta do rei, perto do altar e do templo, desde o lado sul até o lado norte do templo.
11 ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
11 Joiada e seus filhos trouxeram o filho do rei e o coroaram; entregaram-lhe uma cópia da aliança e o proclamaram rei, ungindo-o e gritando: "Viva o rei! "
12 ಜನರು ದೇವಾಲಯದಲ್ಲಿ ಅತ್ತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು.
12 Quando Atalia ouviu o barulho do povo correndo e aclamando o rei, foi ao templo do Senhor, onde estava o povo.
13 ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.
13 Lá ela viu o rei à entrada, de pé junto à coluna. Os oficiais e tocadores de cornetas estavam ao lado do rei, e todo o povo se alegrava ao som das cornetas; os músicos com seus instrumentos musicais dirigiam os louvores. Então Atalia rasgou suas vestes e gritou: "Traição! Traição! "
14 ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.
14 O sacerdote Joiada ordenou aos líderes dos batalhões de cem que estavam no comando das tropas: "Levem-na para fora por entre as fileiras, e matem à espada todo que a seguir". Pois o sacerdote dissera: "Não a matem no templo do Senhor".
15 ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.
15 Então eles a prenderam e levaram à porta dos Cavalos, no terreno do palácio, e lá a mataram.
16 ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.
16 E Joiada fez um acordo pelo qual ele, o povo e o rei seriam o povo do Senhor.
17 ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.
17 Então todo o povo foi ao templo de Baal e o derrubou. Despedaçaram os altares e os ídolos, e mataram Matã, sacerdote de Baal, em frente dos altares.
18 ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.
18 E Joiada confiou a supervisão do templo do Senhor aos sacerdotes levitas, aos quais Davi tinha atribuído tarefas no templo, para apresentarem os holocaustos ao Senhor, conforme está escrito na lei de Moisés, com júbilo e cânticos, segundo as instruções de Davi.
19 ಅಶುದ್ಧರಾದವರು ದೇವಾಲಯದೊಳಗೆ ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನು ನೇಮಿಸಿದನು.
19 Também pôs guardas nas portas do templo do Senhor para que não entrasse ninguém que de alguma forma estivesse impuro.
20 ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.
20 Levou consigo os líderes dos batalhões de cem, os nobres, os governantes do povo e todo o povo e, juntos, conduziram o rei do templo do Senhor ao palácio, passando pela porta superior, e instalaram o rei no trono;
21 ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.
21 e todo o povo se alegrou. A cidade acalmou-se depois que Atalia foi morta à espada.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 23, comparar traduções ou montar um estudo — tudo direto pelo WhatsApp.