2 Crônicas 26

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.
1 Todo o povo de Judá tomou por rei a Ozias, então com a idade de dezesseis anos, e o entronizou em lugar de seu pai Amasias.
2 ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು.
2 Foi ele quem reedificou Elat e fez voltar essa cidade ao domínio de Judá, depois que o rei adormeceu com seus pais.
3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.
3 Tinha Ozias a idade de dezesseis anos quando começou a reinar, e reinou cinqüenta e dois anos em Jerusalém. Sua mãe chamava-se Jequelia e era de Jerusalém.
4 ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು.
4 Fez o bem aos olhos do Senhor, como tinha feito seu pai Amasias.
5 ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.
5 Aplicou-se a honrar a Deus durante a vida de Zacarias, que o instruiu no temor de Deus. Enquanto honrou ao Senhor, Deus o fez prosperar.
6 ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿ ಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
6 Fez uma expedição contra os filisteus. Derrubou a muralha de Get, a de Jabnia e a de Azot; construiu cidades no território de Azot e na terra dos filisteus.
7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.
7 Deus o ajudou contra os filisteus, contra os árabes de Gurbaal, e contra os maonitas.
8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.
8 Os amonitas lhe pagaram tributo, e sua fama se fortificou de tal modo, que se estendeu até os confins do Egito.
9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.
9 Levantou torres fortificadas em Jerusalém, na porta do ângulo, na porta do vale e no ângulo.
10 ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
10 Construiu também torres no deserto, onde cavou numerosos poços, pois possuía ali numerosos rebanhos, tanto na planície como no planalto. Tinha lavradores e vinhateiros nas montanhas e nos pomares, porque se interessava pela agricultura.
11 ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು.
11 Ozias tinha um exército de guerreiros que saíam por turmas ao combate, contados segundo o recenseamento deles, feito pelo escriba Jeiel e o comissário Maasias, sob a direção de Hananias, um dos generais do rei.
12 ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.
12 O número total dos chefes de família, guerreiros valentes, era de dois mil e seiscentos.
13 ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.
13 O exército que comandavam era de trezentos e sete mil e quinhentos homens, que faziam a guerra com valor suficiente para ajudar o rei contra o inimigo.
14 ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು.
14 A todo esse exército Ozias fornecia escudos, lanças, capacetes, couraças, arcos e pedras de funda.
15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.
15 Mandou construir em Jerusalém, pelos cuidados de um engenheiro, máquinas para serem colocadas nas torres e nos ângulos das muralhas, que atiravam flechas e grandes pedras. Sua fama se estendeu ao longe, pois Deus fez maravilhas para ajudá-lo a adquirir um grande poder.
16 ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.
16 Mas, apenas sentiu-se ele poderoso, seu coração encheu-se de orgulho, para sua desgraça. Cometeu uma falta contra o Senhor, seu Deus, entrando no templo do Senhor para queimar incenso no altar dos perfumes.
17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,
17 O sacerdote, Azarias, com oitenta corajosos sacerdotes do Senhor, seguiram-no.
18 “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.
18 Resistiram ao rei Ozias e lhe disseram: Não compete a ti, Ozias, queimar incenso ao Senhor, mas aos sacerdotes da estirpe de Aarão, que foram consagrados para esse fim. Sai do santuário, porque prevaricaste, e isso não será para ti honra diante do Senhor Deus.
19 ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.
19 Então Ozias, tendo na mão o turíbulo, encolerizou-se; mas, durante esse acesso de cólera, apareceu a lepra em sua fronte, ali, no templo do Senhor, na presença dos sacerdotes, diante do altar dos perfumes.
20 ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.
20 O sumo sacerdote Azarias e todos os outros sacerdotes, olhando-o, viram essa lepra que ele tinha na fronte. Precipitadamente fizeram-no sair; aliás, ele próprio se apressou em sair, sentindo-se ferido pelo Senhor.
21 ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾವುನು ಪ್ರಜಾಪಾಲನೆ ಮಾಡಿದನು.
21 O rei Ozias ficou leproso até a morte. Como tal, viveu numa casa isolada. Estava excluído do templo do Senhor, e seu filho Joatão governava o palácio e julgava o povo da terra.
22 ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.
22 O profeta Isaías relatou os outros atos de Ozias, desde os primeiros até os últimos.
23 ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾವುನು ಅರಸನಾದನು.
23 Ozias adormeceu entre seus pais e foi sepultado perto deles, no campo da sepultura dos reis, porque diziam: Ele era leproso. Seu filho Joatão sucedeu-lhe no trono.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 26, comparar traduções ou montar um estudo — tudo direto pelo WhatsApp.