2 Crônicas 30
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕ ಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.
1 Depois disso Ezequias enviou mensageiros por todo o Israel e Judá, e escreveu cartas a Efraim e a Manassés, para que viessem à casa do Senhor em Jerusalém, a fim de celebrarem a páscoa ao Senhor Deus de Israel.
2 ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.
2 Pois o rei tivera conselho com os príncipes e com toda a congregação em Jerusalém, para celebrarem a páscoa no segundo mês.
3 ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.
3 Pois não a puderam celebrar no tempo próprio porque não se tinham santificado sacerdotes em número suficiente, e porque o povo não se tinha ajuntado em Jerusalém.
4 ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.
4 Isto pareceu bem aos olhos do rei e de toda a congregação.
5 ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.
5 E decretaram que se fizesse proclamação por todo o Israel, desde Berseba até Dã para que viessem celebrar a páscoa ao Senhor, Deus de Israel, em Jerusalém; porque muitos não a tinham celebrado como está escrito.
6 ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು:
6 Foram pois, os correios com as cartas, do rei e dos, seus príncipes, por todo o Israel e Judá, segundo a ordem do rei, dizendo: Filhos de Israel, voltai para o Senhor, Deus de Abraão, de Isaque e de Israel, para que ele se volte para o restante de vós que escapastes da mão dos reis da Assíria.
7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.
7 Não sejais como vossos pais e vossos irmãos, que foram infiéis para com o Senhor, Deus de seus pais, de modo que os entregou à desolação como vedes.
8 ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.
8 Não endureçais agora a vossa cerviz, como fizeram vossos pais; mas submetei-vos ao Senhor, e entrai no seu santuário que ele santificou para sempre, e servi ao Senhor vosso Deus, para que o ardor da sua ira se desvie de vós.
9 ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”
9 Pois, se voltardes para o Senhor, vossos irmãos e vossos filhos acharão misericórdia diante dos que os levaram cativos, e tornarão para esta terra; porque o Senhor vosso Deus é clemente e compassivo, e não desviará de vós o seu rosto, se voltardes para ele.
10 ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು.
10 Os correios, pois, foram passando de cidade em cidade, pela terra de Efraím e Manassés, até Zebulom; porém riam-se e zombavam deles.
11 ಆದರೆ ಆಶೇರ್, ಮನಸ್ಸೆ ಮತ್ತು ಜೆಬುಲೂನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಜೆರುಸಲೇಮಿಗೆ ಹೋದರು.
11 Todavia alguns de Aser, e de Manassés, e de Zebulom, se humilharam e vieram a Jerusalém.
12 ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.
12 E a mão de Deus esteve com Judá, dando-lhes um só coração para cumprirem a ordem do rei e dos príncipes conforme a palavra do Senhor.
13 ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.
13 E ajuntou-se em Jerusalém muito povo para celebrar a festa dos pães ázimos no segundo mês, uma congregação mui grande.
14 ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.
14 E, levantando-se, tiraram os altares que havia em Jerusalém; também tiraram todos os altares de incenso, e os lançaram no ribeiro de Cedrom.
15 ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.
15 Então imolaram a páscoa no décimo quarto dia do segundo mês; e os sacerdotes e levitas, envergonhados, santificaram-se e trouxeram holocaustos à casa do Senhor.
16 ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.
16 Tomaram os seus lugares, segundo a sua ordem, conforme a lei de Moisés, homem de Deus; e os sacerdotes espargiram o sangue, que recebiam da mão dos levitas.
17 ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು.
17 Pois havia muitos na congregação que não se tinham santificado; pelo que os levitas tiveram que imolar os cordeiros da páscoa por todo aquele que não estava limpo, para o santificarem ao Senhor.
18 — ausente —
18 Porque uma multidão do povo, muitos de Efraím e Manassés, Issacar e Zebulom, não se tinham purificado, contudo comeram a páscoa, ainda que não segundo o que está escrito; pois Ezequias tinha orado por eles, dizendo: O Senhor, que é bom, perdoe todo aquele
19 — ausente —
19 que dispõe o seu coração para buscar a Deus, o Senhor, o Deus de seus pais, ainda que não esteja purificado segundo a purificação do santuário.
20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸಿದನು.
20 E o Senhor ouviu Ezequias, e sarou o povo.
21 ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.
21 E os filhos de Israel que se acharam em Jerusalém celebraram a festa dos pães ázimos por sete dias com grande alegria; e os levitas e os sacerdotes louvaram ao Senhor de dia em dia com instrumentos fortemente retinintes, cantando ao Senhor.
22 ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.
22 E Ezequias falou benignamente a todos os levitas que tinham bom entendimento no serviço do Senhor. Assim comeram as ofertas da festa por sete dias, sacrificando ofertas pacíficas, e dando graças ao Senhor, Deus de seus pais.
23 ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.
23 E, tendo toda a congregação resolvido celebrar outros sete dias, celebraram por mais sete dias com alegria.
24 ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.
24 Pois Ezequias, rei de Judá, apresentou à congregação para os sacrifícios mil novilhos e sete mil ovelhas; e os príncipes apresentaram à congregação mil novilhos e dez mil ovelhas; e os sacerdotes se santificaram em grande número.
25 ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.
25 E regozijaram-se toda a congregação de Judá, juntamente com os sacerdotes e levitas, e toda a congregação dos que vieram de Israel, como também os estrangeiros que vieram da terra de Israel e os que habitavam em Judá.
26 ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.
26 Assim houve grande alegria em Jerusalém, pois desde os dias de Salomão, filho de Davi, rei de Israel, não tinha havido coisa semelhante em Jerusalém.
27 ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.
27 Então os levitas sacerdotes se levantaram e abençoaram o povo; e a sua voz foi ouvida, porque a sua oração chegou até a santa habitação de Deus, até o céu.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 30, comparar traduções ou montar um estudo — tudo direto pelo WhatsApp.