2 Crônicas 35

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARA

Sair da comparação
ARA Almeida Revista e Atualizada 1993
1 ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.
1 Josias celebrou a Páscoa ao Senhor , em Jerusalém; e mataram o cordeiro da Páscoa no décimo quarto dia do primeiro mês.
2 ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.
2 Estabeleceu os sacerdotes nos seus cargos e os animou a servirem na Casa do Senhor .
3 ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.
3 Disse aos levitas que ensinavam a todo o Israel e estavam consagrados ao Senhor : Ponde a arca sagrada na casa que edificou Salomão, filho de Davi, rei de Israel; já não tereis esta carga aos ombros; servi, pois, ao Senhor , vosso Deus, e ao seu povo de Israel.
4 ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ.
4 Preparai-vos segundo as vossas famílias, segundo os vossos turnos, segundo a prescrição de Davi, rei de Israel, e a de Salomão, seu filho.
5 ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ.
5 Ministrai no santuário segundo os grupos das famílias de vossos irmãos, os filhos do povo; e haja, para cada grupo, uma parte das famílias dos levitas.
6 ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
6 Imolai o cordeiro da Páscoa; e santificai-vos e preparai-o para vossos irmãos, fazendo segundo a palavra do Senhor , dada por intermédio de Moisés.
7 ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.
7 Ofereceu Josias a todo o povo cordeiros e cabritos do rebanho, todos para os sacrifícios da Páscoa, em número de trinta mil, por todos que se achavam ali; e, de bois, três mil; tudo isto era da fazenda do rei.
8 ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.
8 Também fizeram os seus príncipes ofertas voluntárias ao povo, aos sacerdotes e aos levitas; Hilquias, Zacarias e Jeiel, chefes da Casa de Deus, deram aos sacerdotes, para os sacrifícios da Páscoa, dois mil e seiscentos cordeiros e cabritos e trezentos bois.
9 ಕೋನನ್ಯ, ಸೆಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹಷಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಆಡುಗಳನ್ನು ಮತ್ತು ಐನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು.
9 Conanias, Semaías e Natanael, seus irmãos, como também Hasabias, Jeiel e Jozabade, chefes dos levitas, apresentaram aos levitas, para os sacrifícios da Páscoa, cinco mil cordeiros e cabritos e quinhentos bois.
10 ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು.
10 Assim, se preparou o serviço, e puseram-se os sacerdotes nos seus lugares e também os levitas, pelos seus turnos, segundo o mandado do rei.
11 ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.
11 Então, imolaram o cordeiro da Páscoa; e os sacerdotes aspergiam o sangue recebido das mãos dos levitas que esfolavam as reses.
12 ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.
12 Puseram de parte o que era para os holocaustos e o deram ao povo, segundo os grupos das famílias, para que estes o oferecessem ao Senhor , como está escrito no Livro de Moisés; e assim fizeram com os bois.
13 ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.
13 Assaram o cordeiro da Páscoa no fogo, segundo o rito; as ofertas sagradas cozeram em panelas, em caldeirões e em assadeiras; e os levitas as repartiram entre todo o povo.
14 ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.
14 Depois, as prepararam para si e para os sacerdotes; porque os sacerdotes, filhos de Arão, se ocuparam, até à noite, com o sacrifício dos holocaustos e da gordura; por isso é que os levitas prepararam para si e para os sacerdotes, filhos de Arão.
15 ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.
15 Os cantores, filhos de Asafe, estavam nos seus lugares, segundo o mandado de Davi, e de Asafe, e de Hemã, e de Jedutum, vidente do rei, como também os porteiros, a cada porta; não necessitaram de se desviarem do seu ministério; porquanto seus irmãos, os levitas, preparavam o necessário para eles.
16 ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.
16 Assim, se estabeleceu todo o serviço do Senhor , naquele dia, para celebrar a Páscoa e oferecer holocaustos sobre o altar do Senhor , segundo o mandado do rei Josias.
17 ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.
17 Os filhos de Israel que se acharam presentes celebraram a Páscoa naquele tempo e a Festa dos Pães Asmos, por sete dias.
18 ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಕಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.
18 Nunca, pois, se celebrou tal Páscoa em Israel, desde os dias do profeta Samuel; e nenhum dos reis de Israel celebrou tal Páscoa, como a que celebrou Josias com os sacerdotes e levitas, e todo o Judá e Israel, que se acharam ali, e os habitantes de Jerusalém.
19 ಇದು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.
19 No décimo oitavo ano do reinado de Josias, se celebrou esta Páscoa.
20 ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕೆಮೀಷ್ ಪಟ್ಟಣದ ಮೇಲೆ ಯುದ್ಧಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು.
20 Depois de tudo isto, havendo Josias já restaurado o templo, subiu Neco, rei do Egito, para guerrear contra Carquemis, junto ao Eufrates. Josias saiu de encontro a ele.
21 ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ,
21 Então, Neco lhe mandou mensageiros, dizendo: Que tenho eu contigo, rei de Judá? Não vou contra ti hoje, mas contra a casa que me faz guerra; e disse Deus que me apressasse; cuida de não te opores a Deus, que é comigo, para que ele não te destrua.
22 ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.
22 Porém Josias não tornou atrás; antes, se disfarçou para pelejar contra ele e, não dando ouvidos às palavras que Neco lhe falara da parte de Deus, saiu a pelejar no vale de Megido.
23 ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.
23 Os flecheiros atiraram contra o rei Josias; então, o rei disse a seus servos: Tirai-me daqui, porque estou gravemente ferido.
24 ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.
24 Seus servos o tiraram do carro, levaram-no para o segundo carro que tinha e o transportaram a Jerusalém; ele morreu, e o sepultaram nos sepulcros de seus pais. Todo o Judá e Jerusalém prantearam Josias.
25 ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.
25 Jeremias compôs uma lamentação sobre Josias; e todos os cantores e cantoras, nas suas lamentações, se têm referido a Josias, até ao dia de hoje; porque as deram por prática em Israel, e estão escritas no Livro de Lamentações.
26 — ausente —
26 Quanto aos atos de Josias e às suas beneficências, segundo está escrito na Lei do Senhor ,
27 — ausente —
27 e aos mais atos, tanto os primeiros como os últimos, eis que estão escritos no Livro da História dos Reis de Israel e de Judá.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 35, comparar traduções ou montar um estudo — tudo direto pelo WhatsApp.