2 Crônicas 3

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು.
1 Então Salomão começou a construir o templo do Senhor em Jerusalém, no monte Moriá, onde o Senhor havia aparecido a seu pai Davi, na eira de Araúna, o jebuseu. Local providenciado por Davi.
2 ಸೊಲೊಮೋನನು ತನ್ನ ರಾಜ್ಯಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು.
2 Ele começou a construir no segundo dia do segundo mês do quarto ano de seu reinado.
3 ದೇವಾಲಯದ ಅಸ್ತಿವಾರದ ಉದ್ದಳತೆಯು ಹೀಗಿತ್ತು: ಉದ್ದ ಅರವತ್ತು ಮೊಳ, ಅಗಲ ಇಪ್ಪತ್ತು ಮೊಳ. ದೇವಾಲಯದ ಅಳತೆಗಾಗಿ ಸೊಲೊಮೋನನು ಹಳೆಯ ಮೊಳದ ಅಳತೆಯನ್ನು ಉಪಯೋಗಿಸಿದನು.
3 Os alicerces que Salomão lançou para o templo de Deus tinham vinte e sete metros de comprimento e nove metros de largura, pela medida antiga.
4 ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
4 O pórtico da entrada do templo tinha nove metros de largura e nove metros de altura. Ele revestiu de ouro puro o seu interior.
5 ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.
5 Recobriu de pinho o átrio principal, revestiu-o de ouro puro e o decorou com desenhos de tamareiras e correntes.
6 ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.
6 Ornamentou o templo com pedras preciosas. O ouro utilizado era de Parvaim.
7 ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರವನ್ನು ಕೆತ್ತಿಸಿದನು.
7 Também revestiu de ouro as vigas do forro, os batentes, as paredes e as portas do templo, e esculpiu querubins nas paredes.
8 ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.
8 Fez o Lugar Santíssimo, com nove metros de comprimento e nove metros de largura, igual à largura do templo. Revestiu de vinte e uma toneladas de ouro puro o seu interior.
9 ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದಿಂದ ಹೊದಿಸಿದನು.
9 Os pregos de ouro pesavam seiscentos gramas. Também revestiu de ouro as salas superiores.
10 ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
10 No Lugar Santíssimo esculpiu e revestiu de ouro dois querubins,
11 ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು; ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು.
11 os quais, de asas abertas, mediam juntos nove metros. Cada asa, de dois metros e vinte e cinco centímetros, tocava, de um lado, na parede do templo,
12 ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು.
12 e do outro lado, na asa do outro querubim.
13 ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.
13 Assim os querubins, com asas que se estendiam por nove metros, estavam de pé, de frente para o átrio principal.
14 ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು.
14 Ele fez o véu de tecido azul, roxo, vermelho e linho fino com querubins desenhados nele.
15 ಸೊಲೊಮೋನನು ದೇವಾಲಯದ ಎದುರಿನಲ್ಲಿ ಮೂವತ್ತೈದು ಮೊಳ ಎತ್ತರದ ಎರಡು ಕಂಬಗಳನ್ನು ನಿಲ್ಲಿಸಿದನು. ಅದರ ಮೇಲಿನ ಭಾಗ ಐದು ಮೊಳ ಎತ್ತರವಿತ್ತು.
15 Fez na frente do templo duas colunas, que juntas tinham dezesseis metros, cada uma tendo em cima um capitel com dois metros e vinte e cinco centímetros.
16 ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು.
16 E fez correntes entrelaçadas e colocou-as no alto das colunas. Fez também cem romãs, colocando-as nas correntes.
17 ಈ ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.
17 Então levantou as colunas na frente do templo, uma ao sul, outra ao norte; à que ficava ao sul deu o nome de Jaquim, e à que ficava ao norte, Boaz.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 3, comparar traduções ou montar um estudo — tudo direto pelo WhatsApp.