2 Crônicas 7

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.
1 Assim que Salomão acabou de orar, desceu fogo do céu e consumiu o holocausto e os sacrifícios, e a glória do Senhor encheu o templo.
2 ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.
2 Os sacerdotes não conseguiam entrar no templo do Senhor, porque a glória do Senhor o enchia.
3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು
3 Quando todos os israelitas viram o fogo descendo e a glória do Senhor sobre o templo, ajoelharam-se no pavimento, chegando o rosto ao chão, adoraram e deram graças ao Senhor, dizendo: "Ele é bom; o seu amor dura para sempre".
4 ಅನಂತರ ಅರಸನಾದ ಸೊಲೊಮೋನನೂ ಇಸ್ರೇಲಿನ ಎಲ್ಲಾ ಜನರೂ ಯೆಹೋವನ ಮುಂದೆ ಯಜ್ಞವನ್ನು ಸಮರ್ಪಿಸಿದರು.
4 Então o rei e todo o Israel ofereceram sacrifícios ao Senhor.
5 ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.
5 O rei Salomão ofereceu em sacrifício vinte e dois mil bois e cento e vinte mil ovelhas. Assim o rei e todo o povo fizeram a dedicação do templo de Deus.
6 ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
6 Os sacerdotes tomaram seus lugares, bem como os levitas, com os instrumentos musicais do Senhor feitos pelo rei Davi para louvar o Senhor cantando: "O seu amor dura para sempre". No outro lado, de frente para os levitas, os sacerdotes tocavam suas cornetas. Todo o povo estava de pé.
7 ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮವನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕೆಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮರ್ಪಿಸಲು ಆಗದೆಹೋಯಿತು.
7 Salomão consagrou a parte central do pátio, que ficava na frente do templo do Senhor, e ali ofereceu holocaustos e a gordura das ofertas de comunhão, pois o altar de bronze que Salomão tinha construído não comportava os holocaustos, as ofertas de cereal e as porções de gordura.
8 ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.
8 Durante sete dias, Salomão, juntamente com todo o Israel, celebrou a festa; era uma grande multidão, gente vinda desde Lebo-Hamate até o ribeiro do Egito.
9 ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.
9 No oitavo dia realizaram uma assembléia solene. Levaram sete dias para a dedicação do altar, e a festa se prolongou por mais sete dias.
10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.
10 No dia vinte e três do sétimo mês, ele mandou o povo para as suas casas. E todos se foram, jubilosos e de coração alegre pelas coisas boas que o Senhor havia feito por Davi e Salomão e por seu povo Israel.
11 ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು.
11 Quando Salomão acabou de construir o templo do Senhor e o palácio real, executando bem tudo o que tinha em mente realizar no templo do Senhor e em seu próprio palácio,
12 ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು,
12 o Senhor lhe apareceu de noite e disse: "Ouvi sua oração, e escolhi este lugar para mim, como um templo para sacrifícios.
13 ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ
13 "Se eu fechar o céu para que não chova ou mandar que os gafanhotos devorem o país ou sobre o meu povo enviar uma praga,
14 ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.
14 se o meu povo, que se chama pelo meu nome, se humilhar e orar, buscar a minha face e se afastar dos seus maus caminhos, dos céus o ouvirei, perdoarei o seu pecado e curarei a sua terra.
15 ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು.
15 De hoje em diante os meus olhos estarão abertos e os meus ouvidos atentos às orações feitas neste lugar.
16 ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.
16 Escolhi e consagrei este templo para que o meu nome esteja nele para sempre. Meus olhos e meu coração nele sempre estarão.
17 ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿನಿಯಮಗಳಿಗೆ ವಿಧೇಯನಾಗುವದಾದರೆ,
17 "E se você andar segundo a minha vontade como fez seu pai Davi e fizer tudo o que eu lhe ordeno, obedecendo aos meus decretos e às minhas leis,
18 ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, ‘ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು’ ಎಂದು ನಾನು ವಾಗ್ದಾನ ಮಾಡಿದ್ದೇನೆ.
18 firmarei o seu trono, conforme a aliança que fiz com Davi, seu pai, quando lhe disse: ‘Você nunca deixará de ter um descendente para governar Israel’.
19 “ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,
19 "Mas, se vocês se afastarem de mim e abandonarem os decretos e os mandamentos que lhes dei, e prestarem culto a outros deuses e adorá-los,
20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.
20 desarraigarei Israel da minha terra, que lhes dei, e lançarei para longe da minha presença este templo que consagrei ao meu nome. Farei que ele se torne motivo de zombaria entre todos os povos.
21 ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
21 E embora agora este templo seja imponente, todos os que passarem por ele ficarão espantados e perguntarão: ‘Por que o Senhor fez uma coisa dessas a esta terra e a este templo? ’
22 ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.
22 E a resposta será: ‘Porque abandonaram o Senhor, o Deus dos seus antepassados, que os tirou do Egito, e se apegaram a outros deuses, adorando-os e prestando-lhes culto; por isso ele trouxe sobre eles toda esta desgraça’ ".

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 7, comparar traduções ou montar um estudo — tudo direto pelo WhatsApp.