2 Crônicas 8
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಬೇಕಾದವು.
1 Ao fim de vinte anos, nos quais Salomão tinha edificado a casa do Senhor e a sua própria casa
2 ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು.
2 Salomão edificou as casas que Salomão tinha dado, e fez habitar nelas os filhos de Israel.
3 ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು.
3 Depois foi Salomão a Hamate-Zobá, e apoderou-se dela.
4 ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.
4 E edificou Tadmor no deserto, e todas as cidades-armazéns, que edificou em Hamate.
5 ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.
5 Edificou também Bete-Horom, tanto a alta como a baixa, cidades fortes, com muros, portas e ferrolhos;
6 ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.
6 como também Baalate, e todas as cidades-armazéns que Salomão tinha, e todas as cidades para os seus carros e as cidades para os seus cavaleiros, e tudo quanto Salomão desejava edificar em Jerusalém, no Líbano e em toda a terra do seu domínio.
7 — ausente —
7 Quanto a todo o povo que tinha ficado dos heteus, dos amorreus, dos perizeus, dos heveus e dos jebuseus, os quais não eram de Israel;
8 — ausente —
8 a seus filhos, que ficaram depois deles na terra, os quais os filhos de Israel não destruíram, Salomão lhes impôs tributo de trabalho forçado, até o dia de hoje.
9 ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.
9 Mas dos filhos de Israel Salomão não fez escravo algum para a sua obra; porém eram homens de guerra, chefes dos seus capitães, e chefes dos seus carros e dos seus cavaleiros.
10 ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು.
10 Estes eram os chefes dos oficiais que o rei Salomão tinha, duzentos e cinqüenta; que presidiam sobre o seu povo.
11 ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು.
11 E Salomão levou a filha do Faraó da cidade de Davi para a casa que lhe edificara; pois disse: Minha mulher não morará na casa de Davi, rei de Israel, porquanto os lugares nos quais entrou a arca do Senhor são santos.
12 ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.
12 Então Salomão ofereceu holocaustos ao Senhor, sobre o altar do Senhor, que edificara diante do pórtico;
13 ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
13 e isto segundo o dever de cada dia, fazendo ofertas segundo o mandamento de Moisés, nos sábados e nas luas novas, e nas três festas anuais, a saber: na festa dos pães ázimos, na festa das semanas, e na festa dos tabernáculos.
14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
14 Também, conforme a ordem de Davi, seu pai, designou as turmas dos sacerdotes para os seus cargos, como também os levitas para os seus cargos, para louvarem a Deus e ministrarem diante dos sacerdotes, como exigia o dever de cada dia, e ainda os porteiros, pelas suas turmas, a cada porta; pois assim tinha mandado Davi, o homem de Deus.
15 ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.
15 E os sacerdotes e os levitas não se desviaram do que lhes mandou o rei, em negócio nenhum, especialmente no tocante aos tesouros.
16 ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು.
16 Assim se executou toda a obra de Salomão, desde o dia em que se lançaram os fundamentos da casa do Senhor, até se acabar. Deste modo se completou a casa do Senhor.
17 ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.
17 Então Salomão foi a Eziom-Geber, e a Elote, à praia do mar, na terra de Edom.
18 ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.
18 E Hurão, por meio de seus servos, enviou-lhe navios, e servos práticos do mar; e eles foram com os servos de Salomão a Ofir, e de lá tomaram quatrocentos e cinqüenta talentos de ouro, e os trouxeram ao rei Salomão.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 8, comparar traduções ou montar um estudo — tudo direto pelo WhatsApp.