2 Crônicas 9

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB

Sair da comparação
ARIB Almeida Revisada Imprensa Bíblica
1 ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.
1 Tendo a rainha de Sabá ouvido da fama de Salomão, veio a Jerusalém para prová-lo por enigmas; trazia consigo uma grande comitiva, e camelos carregados de especiarias, e ouro em abundância, e pedras preciosas; e vindo ter com Salomão, falou com ele de tudo o que tinha no seu coração.
2 ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ.
2 E Salomão lhe respondeu a todas as perguntas; não houve nada que Salomão não lhe soubesse explicar.
3 ಶೆಬದ ರಾಣಿಯು ಅವನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ ನೋಡಿದಳು.
3 Vendo, pois, a rainha de Sabá a sabedoria de Salomão, e a casa que ele edificara,
4 ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.
4 e as iguarias da sua mesa, e o assentar dos seus oficiais, e as funções e os trajes dos seus servos, e os seus copeiros e os trajes deles, e os holocaustos que ele oferecia na casa do Senhor, ficou estupefata.
5 ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ.
5 Então disse ao rei: Era verdade o que ouvi na minha terra acerca dos teus feitos e da tua sabedoria.
6 ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.
6 Todavia eu não o acreditava, até que vim e os meus olhos o viram; e eis que não me contaram metade da grandeza da tua sabedoria; sobrepujaste a fama que ouvi.
7 ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.
7 Bem-aventurados os teus homens! Bem-aventurados estes teus servos, que estão sempre diante de ti, e ouvem a tua sabedoria!
8 ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.
8 Bendito seja o Senhor teu Deus, que se agradou de ti, colocando-te sobre o seu trono, para ser rei pelo Senhor teu Deus! Porque teu Deus amou a Israel, para o estabelecer perpetuamente, por isso te constituiu rei sobre eles, para executares juízo e justiça.
9 ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.
9 Então ela deu ao rei cento e vinte talentos de ouro, e especiarias em grande abundância, e pedras preciosas; e nunca houve tais especiarias quais a rainha de Sabá deu ao rei Salomão.
10 ಹೂರಾಮನ ಮತ್ತು ಸೊಲೊಮೋನನ ಸೇವಕರು ಓಫೀರಿನಿಂದ ಬಂಗಾರವನ್ನು ತಂದರು; ಅಲ್ಲದೆ ಸುಗಂಧದ ಮರಗಳನ್ನೂ ವಜ್ರವೈಢೂರ್ಯಗಳನ್ನೂ ತಂದರು.
10 Também os servos de Hurão, e os servos de Salomão, que de Ofir trouxeram ouro, trouxeram madeira de algumins, e pedras preciosas.
11 ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ.
11 E o rei fez, da madeira de algumins, degraus para a casa do Senhor e para a casa do rei, como também harpas e alaúdes para os cantores, quais nunca dantes se viram na terra de Judá.
12 ಶೆಬದ ರಾಣಿಯು ಕೇಳಿದ್ದನ್ನೆಲ್ಲಾ ಸೊಲೊಮೋನನು ಕೊಟ್ಟನು. ಆಕೆಯು ಅವನಿಗೆ ತಂದದ್ದಕ್ಕಿಂತ ಹೆಚ್ಚಾಗಿ ಆಕೆಗೆ ಕೊಟ್ಟನು. ಅನಂತರ ಶೆಬದ ರಾಣಿಯೂ ಆಕೆಯ ಪರಿವಾರವೂ ತಮ್ಮ ದೇಶಕ್ಕೆ ತೆರಳಿದರು.
12 E o rei Salomão deu à rainha de Sabá tudo quanto ela desejou, tudo quanto lhe pediu, excedendo mesmo o que ela trouxera ao rei. Assim voltou e foi para a sua terra, ela e os seus servos.
13 ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಒಂಭೈನೂರ ಎಪ್ಪತ್ತೇಳು ಕಿಲೋಗ್ರಾಂ ಬಂಗಾರವನ್ನು ಸಂಗ್ರಹಿಸಿದನು.
13 Ora, o peso do ouro que se trazia cada ano a Salomão era de seiscentos e sessenta e seis talentos,
14 ಇತರ ದೇಶಗಳ ವ್ಯಾಪಾರಸ್ಥರು: ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.
14 afora o que os mercadores e negociantes traziam; também todos os reis da Arábia, e os governadores do país traziam a Salomão ouro e prata.
15 ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಸುಮಾರು ಎಳು ಕಿಲೋಗ್ರಾಂಗಳಷ್ಟು ಚಿನ್ನವು ಹಿಡಿಯಿತು.
15 E o rei Salomão fez duzentos paveses de ouro batido, empregando em cada pavês seiscentos siclos de ouro batido;
16 ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಈ ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.
16 como também trezentos escudos de ouro batido, empregando em cada escudo trezentos siclos de ouro. E o rei os depositou na casa do bosque do Líbano.
17 ರಾಜನಾದ ಸೊಲೊಮೋನನು ದಂತದಿಂದ ಒಂದು ದೊಡ್ಡ ಸಿಂಹಾಸನವನ್ನು ಮಾಡಿಸಿದನು. ಸಿಂಹಾಸನವನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
17 Fez mais o rei um grande trono de marfim, e o revestiu de ouro puro.
18 ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು.
18 O trono tinha seis degraus e um estrado de ouro, que eram ligados ao trono, e de ambos os lados tinha braços junto ao lugar do assento, e dois leões de pé junto aos braços.
19 ಆರು ಮೆಟ್ಟಲುಗಳ ಮೇಲೆ ಹನ್ನೆರಡು ಸಿಂಹಗಳ ಆಕೃತಿಯನ್ನು ಇಟ್ಟಿದ್ದರು. ಪ್ರತಿಯೊಂದು ಮೆಟ್ಟಲಿನ ಎರಡೂ ಕಡೆಗಳಲ್ಲಿ ಒಂದೊಂದು ಸಿಂಹದ ಆಕೃತಿಯಿತ್ತು. ಇಂಥಾ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
19 E havia doze leões em pé de um e outro lado sobre os seis degraus; outro tal não se fizera em reino algum.
20 ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
20 Também todos os vasos de beber do rei Salomão eram de ouro, e todos os utensílios da casa do bosque do Líbano, de ouro puro; a prata reputava-se sem valor nos dias de Salomão.
21 ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.
21 Pois o rei tinha navios que iam a Társis com os servos de Hurão; de três em três anos os navios voltavam de Társis, trazendo ouro, prata, marfim, bugios e pavões.
22 ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು.
22 Assim excedeu o rei Salomão todos os reis da terra, em riqueza e em sabedoria.
23 ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.
23 E todos os reis da terra buscavam a presença de Salomão para ouvirem a sabedoria que Deus lhe tinha posto no coração.
24 ಪ್ರತಿ ವರ್ಷವೂ ಆ ರಾಜರುಗಳು ಸೊಲೊಮೋನನಿಗೆ ಬಹುಮಾನಗಳನ್ನು ತರುತ್ತಿದ್ದರು. ಬೆಳ್ಳಿಬಂಗಾರದ ವಸ್ತುಗಳನ್ನು, ಬಟ್ಟೆಗಳನ್ನು, ಆಯುಧಗಳನ್ನು, ಸುಗಂಧವಸ್ತುಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ಕಾಣಿಕೆಯಾಗಿ ಅವನಿಗೆ ಕೊಡುತ್ತಿದ್ದರು.
24 Cada um trazia o seu presente, vasos de prata, vasos de ouro, vestidos, armaduras, especiarias, cavalos e mulos, uma quota de ano em ano.
25 ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು.
25 Teve também Salomão quatro mil manjedouras para os cavalos de seus carros, doze mil cavaleiros; e os colocou nas cidades dos carros, e junto ao rei em Jerusalém.
26 ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.
26 Ele dominava sobre todos os reis, desde o Rio Eufrates até a terra dos filisteus, e até o termo do Egito.
27 ಸೊಲೊಮೋನನಿಂದಾಗಿ ಜೆರುಸಲೇಮಿನಲ್ಲಿ ಬೆಳ್ಳಿಯು ಹೆಚ್ಚಾಗಿ, ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತ್ರವಲ್ಲದೆ ದೇವದಾರು ಮರಗಳು ಬೆಟ್ಟಪ್ರದೇಶದಲ್ಲಿ ಬೆಳೆಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.
27 Também o rei tornou a prata tão comum em Jerusalém como as pedras, e os cedros tantos em abundância como os sicômoros que há na baixada.
28 ಜನರು ಸೊಲೊಮೋನನಿಗೋಸ್ಕರ ಈಜಿಪ್ಟ್ ಮತ್ತು ಬೇರೆ ದೇಶಗಳಿಂದ ಕುದುರೆಗಳನ್ನು ತಂದು ಕೊಡುತ್ತಿದ್ದರು.
28 E cavalos eram trazidos a Salomão do Egito e de todas as terras.
29 ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.
29 Ora, o restante dos atos de Salomão, desde os primeiros até os últimos, porventura não estão escritos na história de Natã, o profeta, e na profecia de Aías, o silonita, e nas visões de Ido, o vidente, acerca de Jeroboão, filho de Nebate?
30 ಜೆರುಸಲೇಮಿನಲ್ಲಿ ಸೊಲೊಮೋನನು ನಲವತ್ತು ವರ್ಷಗಳ ಕಾಲ ಇಸ್ರೇಲರನ್ನು ಆಳಿದನು.
30 Salomão reinou em Jerusalém quarenta anos sobre todo o Israel.
31 ಆ ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
31 E dormiu com seus pais, e foi sepultado na cidade de Davi, seu pai. E Roboão, seu filho, reinou em seu lugar.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 9, comparar traduções ou montar um estudo — tudo direto pelo WhatsApp.