2 Reis 10

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,
1 Havia em Samaria setenta filhos de Acab. Jeú escreveu uma carta e mandou-a à Samaria aos magistrados da cidade, aos anciãos e aos preceptores dos filhos de Acab.
2 — ausente —
2 Dizia na carta: Logo que receberdes esta carta, vós que tendes convosco os filhos de vosso soberano, como também carros, cavalos, uma cidade fortificada e armas,
3 — ausente —
3 escolhei o melhor e o mais qualificado dos filhos de vosso soberano e ponde-o no trono de seu pai. Em seguida, começai a luta pela casa de vosso soberano.
4 ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.
4 Eles, porém, muito atemorizados, disseram: Dois reis não o puderam enfrentar; como poderíamos nós resistir-lhe?
5 ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”
5 O prefeito do palácio, o comandante da cidade, os anciãos e os preceptores dos filhos de Acab mandaram a Jeú a resposta seguinte: Nós somos teus servos. Faremos tudo o que nos disseres; não elegeremos rei sobre nós. Faze como melhor te parecer.
6 ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.”
6 Escreveu-lhes Jeú uma segunda carta, na qual dizia: Se estais do meu lado, se quereis obedecer às minhas ordens, tomai as cabeças dos filhos de vosso soberano e trazei-mas amanhã, a esta hora, a Jezrael. Os filhos do rei, que eram em número de setenta, encontravam-se na casa dos grandes da cidade, que os educavam.
7 ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
7 Logo que lhes chegou a carta de Jeú, tomaram os setenta príncipes e massacraram-nos. Puseram em seguida as suas cabeças em cestos e mandaram-nas a Jeú, em Jezrael.
8 ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು.
8 Um mensageiro viera anunciar que tinham trazido as cabeças dos filhos do rei. Jeú disse: Metei-as em dois montes, à porta da cidade, até amanhã cedo.
9 ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!
9 Chegando a manhã, saiu e, diante de todo o povo, disse: Vós sois justos. Eu conspirei contra o meu soberano e o matei. Mas, estes aqui, quem os feriu?
10 ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.
10 Ficai, pois, sabendo que não se perde nenhuma das palavras pronunciadas pelo Senhor contra a casa de Acab. O Senhor realizou o que ele havia predito pelo seu servo Elias.
11 ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.
11 Jeú feriu também todos os que restavam da casa de Acab em Jezrael, todos os seus principais oficiais, seus servos e seus sacerdotes, sem deixar sobreviver um sequer dentre eles.
12 ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.
12 Depois encaminhou-se para a Samaria. Chegando a Bet-Equed-Haroim, que está junto do caminho,
13 ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು.
13 encontrou os irmãos de Ocozias, rei de Judá, e perguntou-lhes: Quem sois vós? Nós somos irmãos de Ocozias, responderam eles. Descemos para fazer uma visita aos filhos do rei e aos filhos da rainha.
14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು.
14 Jeú ordenou: Tomai-os vivos! Tomaram-nos vivos e massacraram-nos junto da cisterna de Bet-Equed. De quarenta e dois que eram, Jeú não deixou sobreviver sequer um.
15 ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದ್ವಾನನ್ನು ಸಂಧಿಸಿದನು. ಯೆಹೋನಾದ್ವಾನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದ್ವಾನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ತನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು.
15 Deixando aquele lugar, Jeú encontrou Jonadab, filho de Recab, que vinha ao seu encontro. E saudou-o, dizendo: Teu coração é leal para comigo, como o é o meu para contigo? Sim, respondeu Jonadab. Então, dá-me tua mão. Ele deu-lha e Jeú fê-lo montar no seu carro junto dele.
16 ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು.
16 Disse-lhe: Vem comigo: verás o zelo que tenho pelo Senhor.
17 ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.
17 E levou-o em seu carro. Tendo entrado em Samaria, exterminou todos os que restavam da casa de Acab. E destruiu-a completamente, como o Senhor tinha dito a Elias.
18 ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!
18 Jeú convocou todo o povo, e dirigiu-lhe a palavra nestes termos: Acab serviu um pouco a Baal: Jeú o servirá muito mais.
19 ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು.
19 Convocai junto de mim todos os profetas de Baal, todos os seus fiéis, todos os seus sacerdotes. Não falte um só deles, pois quero oferecer a Baal um grande sacrifício. Todo aquele que faltar, perderá a vida. Mas isso era simplesmente um laço, para destruir todos os adoradores de Baal.
20 ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.
20 Depois dessa publicação, Jeú deu esta ordem: Publicai uma assembléia solene em honra de Baal.
21 ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.
21 Depois mandou mensageiros por todo o Israel para chamá-los e os adoradores de Baal compareceram todos; não faltou nenhum. Reuniram-se no templo de Baal, que ficou cheio de uma extremidade à outra.
22 ಯೇಹು ನಿಲುವಂಗಿಗಳ ಮೇಲ್ವಿಚಾರಕನಿಗೆ, “ಬಾಳನ ಭಕ್ತರಿಗೆಲ್ಲ ನಿಲುವಂಗಿಗಳನ್ನು ತಂದುಕೊಡು” ಎಂದು ಹೇಳಿದನು. ಅವನು ಬಾಳನ ಭಕ್ತರಿಗೆ ನಿಲುವಂಗಿಗಳನ್ನು ತಂದುಕೊಟ್ಟನು.
22 Jeú disse ao guarda do vestiário: Dá vestes a todos os adoradores de Baal. O guarda distribuiu vestes a todos eles.
23 ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದ್ವಾನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.
23 Jeú entrou no templo com Jonadab, filho de Recab, e disse aos adoradores de Baal: Vede bem que não haja convosco nenhum dos que servem ao Senhor, mas somente os adoradores de Baal.
24 ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು.
24 Eles entraram, pois, para oferecer sacrifícios e holocaustos. Ora, Jeú postara oitenta homens do lado de fora, e dissera-lhes: Aquele dentre vós que deixar escapar um só destes homens que entrego nas vossas mãos, responderá com a própria vida pela do outro.
25 ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು.
25 Terminados os holocaustos, ordenou Jeú aos guardas e aos oficiais: Entrai e feri-os! Não deixeis escapar nenhum deles! E assim caíram todos ao fio da espada. Depois disso, os guardas e oficiais lançaram fora {os cadáveres}, entraram no santuário do templo de Baal,
26 ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.
26 tiraram dali o ídolo e o queimaram.
27 ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.
27 Derrubaram a estela de Baal e demoliram o templo, transformando-o em privadas, que ainda hoje existem.
28 ಯೇಹುವು ಇಸ್ರೇಲಿನಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.
28 Foi assim que Jeú exterminou Baal de Israel.
29 ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.
29 Todavia, não se desviou dos pecados de Joroboão, filho de Nabat, que levara Israel ao pecado, pois deixou subsistir os bezerros de ouro de Betel e de Dã.
30 ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.
30 O Senhor disse-lhe: Pois que fizeste o que é agradável aos meus olhos, tratando a casa de Acab como eu o queria, teus filhos ocuparão o trono de Israel durante quatro gerações.
31 ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.
31 Entretanto, Jeú não se aplicou a seguir, de todo o coração, a lei do Senhor, Deus de Israel. Não se desviou dos pecados que Jeroboão levara a cometer Israel.
32 ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.
32 Por aquele tempo, o Senhor começou a diminuir o território de Israel. Hazael derrotou-o em toda a fronteira,
33 ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.
33 desde o Jordão até o oriente. Submeteu toda a terra de Galaad, os gaditas, os rubenitas e os manasseítas, desde Aroer, que estava sobre a torrente do Arnon, isto é, a terra de Galaad e Basã.
34 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೇಹು ಮಾಡಿದ ಇತರ ಉತ್ತಮಕಾರ್ಯಗಳನ್ನೆಲ್ಲ ಬರೆಯಲಾಗಿದೆ.
34 O resto da história de Jeú, tudo o que ele fez, todos os seus feitos, tudo se acha consignado no livro das Crônicas dos reis de Israel.
35 ಯೇಹು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೇಹುವಿನ ನಂತರ ಅವನ ಮಗನಾದ ಯೇಹೋವಾಹಾಜನು ಇಸ್ರೇಲಿನ ನೂತನ ರಾಜನಾದನು.
35 Jeú adormeceu com seus pais e foi sepultado em Samaria. Seu filho Joacaz sucedeu-lhe no trono.
36 ಯೇಹುವು ಸಮಾರ್ಯದಲ್ಲಿ ಇಸ್ರೇಲನ್ನು ಇಪ್ಪತ್ತೆಂಟು ವರ್ಷ ಆಳಿದನು.
36 Jeú reinou vinte e oito anos em Samaria.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Reis 10, comparar traduções ou montar um estudo — tudo direto pelo WhatsApp.