2 Reis 16

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
1 No décimo sétimo ano do reinado de Peca, filho de Remalias, Acaz, filho de Jotão, rei de Judá, começou a reinar.
2 ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.
2 Acaz tinha vinte anos de idade quando começou a reinar e reinou dezesseis anos em Jerusalém. Ao contrário de Davi, seu predecessor, não fez o que o Senhor seu Deus aprova.
3 ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.
3 Andou nos caminhos dos reis de Israel e chegou até a queimar o seu filho em sacrifício, imitando os costumes detestáveis das nações que o Senhor havia expulsado de diante dos israelitas.
4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.
4 Também ofereceu sacrifícios e queimou incenso nos altares idólatras, no alto das colinas e debaixo de toda árvore frondosa.
5 ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.
5 Então Rezim, rei da Síria, e Peca, filho de Remalias, rei de Israel, saíram para lutar contra Acaz e sitiaram Jerusalém, mas não conseguiram vencê-lo.
6 ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ.
6 Naquela ocasião, Rezim recuperou Elate para a Síria, expulsando os homens de Judá. Os edomitas então se mudaram para Elate, onde vivem até hoje.
7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”
7 Acaz enviou mensageiros para dizer a Tiglate-Pileser, rei da Assíria: "Sou teu servo e teu vassalo. Vem salvar-me das mãos do rei da Síria e do rei de Israel, que estão me atacando".
8 ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.
8 Acaz ajuntou a prata e o ouro encontrados no templo do Senhor e nos tesouros do palácio real e enviou-os como presente para o rei da Assíria.
9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.
9 Este atendeu o pedido, atacou Damasco e a conquistou. Deportou seus habitantes para Quir e matou a Rezim.
10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.
10 Então o rei Acaz foi a Damasco encontrar-se com Tiglate-Pileser, rei da Assíria. Ele viu o altar que havia em Damasco e mandou ao sacerdote Urias um modelo do altar, com informações detalhadas para sua construção.
11 ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು.
11 O sacerdote Urias construiu um altar conforme as instruções que o rei Acaz tinha enviado de Damasco e o terminou antes do retorno do rei Acaz.
12 ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.
12 Quando o rei voltou de Damasco e viu o altar, aproximou-se dele e apresentou ofertas sobre ele.
13 ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು.
13 Ofereceu seu holocausto e sua oferta de cereal, derramou sua oferta de bebidas e aspergiu sobre o altar o sangue dos seus sacrifícios de comunhão.
14 ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.
14 Ele tirou da frente do templo, dentre o altar e o templo do Senhor, o altar de bronze que ficava diante do Senhor e o colocou no lado norte do altar.
15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
15 Então o rei Acaz deu estas ordens ao sacerdote Urias: "No altar grande, ofereça o holocausto da manhã e a oferta de cereal da tarde, o holocausto do rei e sua oferta de cereal, e o holocausto, a oferta de cereal e a oferta derramada de todo o povo. Espalhe sobre o altar todo o sangue dos holocaustos e dos sacrifícios. Mas utilizarei o altar de bronze para buscar orientação".
16 ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು.
16 E o sacerdote Urias fez como o rei Acaz tinha ordenado.
17 ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.
17 O rei tirou os painéis laterais e retirou as pias dos estrados móveis. Tirou o tanque de cima dos touros de bronze que o sustentavam e o colocou sobre uma base de pedra.
18 ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.
18 Por causa do rei da Assíria tirou a cobertura para ser usada no sábado, que fora construída no templo, e retirou a entrada real do lado de fora do templo do Senhor.
19 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
19 Os demais acontecimentos do reinado de Acaz, e suas realizações, estão escritos nos registros históricos dos reis de Judá.
20 ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.
20 Acaz descansou com seus antepassados e foi sepultado junto a eles na cidade de Davi. Seu filho Ezequias foi o seu sucessor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Reis 16, comparar traduções ou montar um estudo — tudo direto pelo WhatsApp.