2 Reis 19

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.
1 Ao ouvir o relato, o rei Ezequias rasgou as suas vestes, pôs roupas de luto e entrou no templo do Senhor.
2 ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.
2 Ele enviou o administrador do palácio, Eliaquim, o secretário Sebna e os sacerdotes principais, todos vestidos com pano de saco, ao profeta Isaías, filho de Amoz.
3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.
3 Eles lhe disseram: "Assim diz Ezequias: Hoje é dia de angústia, de repreensão e de humilhação; estamos como a mulher que está para dar à luz filhos, mas não tem forças para fazê-los nascer.
4 ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.
4 Talvez o Senhor seu Deus ouça todas as palavras do comandante de campo, a quem o senhor dele, o rei da Assíria, enviou para zombar do Deus vivo. E que o Senhor seu Deus o repreenda pelas palavras que ouviu. Portanto, suplique a Deus pelo remanescente que ainda sobrevive".
5 ರಾಜನಾದ ಹಿಜ್ಕೀಯನ ಅಧಿಕಾರಿಗಳು ಯೆಶಾಯನ ಬಳಿಗೆ ಹೋದರು.
5 Quando os oficiais do rei Ezequias chegaram a Isaías,
6 ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.
6 este lhes disse: "Digam a seu senhor: ‘Assim diz o Senhor: Não tenha medo das palavras que você ouviu, das blasfêmias que os servos do rei da Assíria lançaram contra mim.
7 ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.
7 Ouça! Eu o farei tomar a decisão de retornar ao seu próprio país, quando ele ouvir certa notícia. E lá o farei morrer à espada’ ".
8 ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.
8 Quando o comandante de campo soube que o rei da Assíria havia partido de Láquis, retirou-se e encontrou o rei lutando contra Libna.
9 ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು.
9 Ora, Senaqueribe fora informado de que Tiraca, rei etíope do Egito, estava vindo lutar contra ele, de modo que mandou novamente mensageiros a Ezequias com este recado:
10 ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ:
10 "Digam a Ezequias, rei de Judá: Não deixe que o Deus no qual você confia o engane, quando diz: ‘Jerusalém não cairá nas mãos do rei da Assíria’.
11 ಅಶ್ಶೂರದ ರಾಜನು ಇತರ ಎಲ್ಲಾ ಜನಾಂಗಗಳಿಗೆ ಮಾಡಿದವುಗಳನ್ನು ನೀನು ಕೇಳಿರುವೆ. ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು! ನೀನು ರಕ್ಷಿಸಲ್ಪಡುವೆಯಾ? ಇಲ್ಲ!
11 Com certeza você ouviu o que os reis da Assíria têm feito a todas as nações, como as destruíram por completo. E você haveria de livrar-se?
12 ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!
12 Acaso os deuses das nações que foram destruídas por meus antepassados as livraram: os deuses de Gozã, Harã, Rezefe e do povo de Éden, que estava em Telassar?
13 ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!)
13 Onde estão o rei de Hamate, o rei de Arpade, o rei da cidade de Sevarfaim, de Hena ou de Iva? "
14 ಹಿಜ್ಕೀಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಕೀಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಆ ಪತ್ರಗಳನ್ನಿರಿಸಿದನು.
14 Ezequias recebeu a carta das mãos dos mensageiros e a leu. Então subiu ao templo do Senhor e estendeu-a perante o Senhor.
15 ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!
15 E Ezequias orou ao Senhor: "Senhor, Deus de Israel, que reina em teu trono, entre os querubins, só tu és Deus sobre todos os reinos da terra. Tu criaste os céus e a terra.
16 ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!
16 Dá ouvidos, Senhor, e vê; ouve as palavras que Senaqueribe enviou para insultar o Deus vivo.
17 ಯೆಹೋವನೇ, ಅಶ್ಶೂರದ ರಾಜರು ಆ ರಾಜ್ಯಗಳನ್ನೆಲ್ಲ ನಾಶಗೊಳಿಸಿದ್ದು ನಿಜ!
17 É verdade, Senhor, que os reis assírios fizeram de todas essas nações e seus territórios um deserto.
18 ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.
18 Atiraram os deuses delas no fogo e os destruíram, pois não eram deuses; eram apenas madeira e pedra moldadas por mãos humanas.
19 ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
19 Agora, Senhor nosso Deus, salva-nos das mãos dele, para que todos os reinos da terra saibam que só tu, Senhor, és Deus".
20 ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.
20 Então Isaías, filho de Amoz, enviou uma mensagem a Ezequias: "Assim diz o Senhor, o Deus de Israel: Ouvi a sua oração acerca de Senaqueribe, o rei da Assíria.
21 “ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ:
21 Esta é a palavra que o Senhor falou contra ele: ‘A virgem, a filha de Sião, o despreza e zomba de você. A filha de Jerusalém meneia a cabeça enquanto você foge.
22 ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ?
22 De quem você zombou e contra quem blasfemou? Contra quem você levantou a voz e contra quem ergueu o seu olhar arrogante? Contra o Santo de Israel!
23 ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ,
23 Sim, você insultou o Senhor por meio dos seus mensageiros. E declarou: "Com carros sem conta subi, aos pontos mais elevados e às inacessíveis alturas do Líbano. Derrubei os seus mais altos cedros, os seus melhores pinheiros. Entrei em suas regiões mais remotas, e nas suas mais densas florestas.
24 ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು.
24 Em terras estrangeiras cavei poços e bebi água. Com as solas de meus pés sequei todos os rios do Egito".
25 ಆದರೆ ನೀನು ಕೇಳಿಲ್ಲವೇ?
25 Você não percebe que há muito tempo eu já havia determinado tudo isso. Desde a antigüidade planejei o que agora faço acontecer, que você deixaria cidades fortificadas em ruínas.
26 ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ
26 Seus habitantes, sem forças, desanimam-se envergonhados. São como pastagens, como brotos tenros e verdes, como ervas no telhado, queimadas antes de crescer.
27 ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ.
27 Eu, porém, sei onde você está, sei quando você sai e quando retorna; e como você se enfurece contra mim.
28 ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ.
28 Sim, contra mim você se enfureceu e o seu atrevimento chegou aos meus ouvidos. Por isso porei o meu anzol em seu nariz e o meu freio em sua boca, e o farei voltar pelo caminho por onde veio.
29 “ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
29 A você, Ezequias, darei este sinal: Neste ano vocês comerão do que crescer por si, e no próximo o que daquilo brotar. Mas no terceiro ano semeiem e colham, plantem vinhas e comam o seu fruto.
30 ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು.
30 Mais uma vez, um remanescente da tribo de Judá sobreviverá, lançará raízes na terra e se encherão de frutos os seus ramos.
31 ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು.
31 De Jerusalém sairão sobreviventes, e um remanescente do monte Sião. O zelo do Senhor dos Exércitos o executará’.
32 “ಯೆಹೋವನು ಅಶ್ಶೂರದ ರಾಜನನ್ನು ಕುರಿತು ಹೀಗೆನ್ನುತ್ತಾನೆ:
32 Portanto, assim diz o Senhor acerca do rei da Assíria: ‘Ele não invadirá esta cidade nem disparará contra ela uma só flecha. Não a enfrentará com escudo nem construirá rampas de cerco contra ela.
33 ಅವನು ತಾನು ಬಂದ ದಾರಿಯಲ್ಲೇ ಹಿಂದಕ್ಕೆ ಹೋಗುತ್ತಾನೆ.
33 Pelo caminho por onde veio voltará; não invadirá esta cidade’, declara o Senhor.
34 ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ.
34 ‘Eu a defenderei e a salvarei, por amor de mim mesmo e do meu servo Davi’ ".
35 ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.
35 Naquela noite o anjo do Senhor saiu e matou cento e oitenta e cinco mil homens no acampamento assírio. Quando o povo se levantou na manhã seguinte, o lugar estava repleto de cadáveres!
36 ಆಗ ಅಶ್ಶೂರದ ರಾಜನಾದ ಸನ್ಹೇರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು.
36 Assim Senaqueribe, rei da Assíria, desmontou o acampamento e foi embora. Voltou para Nínive e lá ficou.
37 ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.
37 Certo dia, enquanto ele estava adorando no templo de seu deus Nisroque, seus filhos Adrameleque e Sarezer mataram-no à espada e fugiram para a terra de Ararate. Seu filho Esar-Hadom foi o seu sucessor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Reis 19, comparar traduções ou montar um estudo — tudo direto pelo WhatsApp.