2 Reis 23

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.
1 Então, o rei ordenou, e todos os anciãos de Judá e de Jerusalém se ajuntaram a ele.
2 ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.
2 E o rei subiu à Casa do Senhor , e com ele todos os homens de Judá, e todos os moradores de Jerusalém, e os sacerdotes, e os profetas, e todo o povo, desde o menor até ao maior; e leu aos ouvidos deles todas as palavras do livro do concerto, que se achou na Casa do Senhor .
3 ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.
3 E o rei se pôs em pé junto à coluna e fez o concerto perante o Senhor , para andarem com o Senhor , e guardarem os seus mandamentos, e os seus testemunhos, e os seus estatutos, com todo o coração e com toda a alma, confirmando as palavras deste concerto, que estavam escritas naquele livro; e todo o povo esteve por este concerto.
4 ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
4 E o rei mandou ao sumo sacerdote Hilquias, e aos sacerdotes da segunda ordem, e aos guardas do umbral da porta que se tirassem do templo do Senhor todos os utensílios que se tinham feito para Baal, e para o bosque, e para todo o exército dos céus; e os queimou fora de Jerusalém, nos campos de Cedrom, e levou as cinzas deles a Betel.
5 ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.
5 Também destituiu os sacerdotes que os reis de Judá estabeleceram para incensarem sobre os altos nas cidades de Judá e ao redor de Jerusalém, como também os que incensavam a Baal, ao sol, e à lua, e aos mais planetas, e a todo o exército dos céus.
6 ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.
6 Também tirou da Casa do Senhor o ídolo do bosque para fora de Jerusalém até o ribeiro de Cedrom, e o queimou junto ao ribeiro de Cedrom, e o desfez em pó, e lançou o seu pó sobre as sepulturas dos filhos do povo.
7 ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು.
7 Também derribou as casas dos prostitutos cultuais que estavam na Casa do Senhor , em que as mulheres teciam casinhas para o ídolo do bosque.
8 — ausente —
8 E a todos os sacerdotes trouxe das cidades de Judá, e profanou os altos em que os sacerdotes incensavam, desde Geba até Berseba, e derribou os altos das portas, que estavam à entrada da porta de Josué, o chefe da cidade, e que estavam à mão esquerda daquele que entrava pela porta da cidade.
9 — ausente —
9 Mas os sacerdotes dos altos não sacrificavam sobre o altar do Senhor em Jerusalém; porém comiam pães asmos no meio de seus irmãos.
10 ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.
10 Também profanou a Tofete, que está no vale dos filhos de Hinom, para que ninguém fizesse passar a seu filho ou sua filha pelo fogo a Moloque.
11 ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.
11 Também tirou os cavalos que os reis de Judá tinham destinado ao sol, à entrada da Casa do Senhor , perto da câmara de Natã-Meleque, o eunuco, que estava no recinto; e os carros do sol queimou a fogo.
12 ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.
12 Também o rei derribou os altares que estavam sobre o terraço do cenáculo de Acaz, os quais fizeram os reis de Judá; como também o rei derribou os altares que fizera Manassés nos dois átrios da Casa do Senhor ; e, esmigalhados, os tirou dali e lançou o pó deles no ribeiro de Cedrom.
13 ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
13 O rei profanou também os altos que estavam defronte de Jerusalém, à mão direita do monte de Masite, os quais edificara Salomão, rei de Israel, a Astarote, a abominação dos sidônios, e a Quemos, a abominação dos moabitas, e a Milcom, a abominação dos filhos de Amom.
14 ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.
14 Semelhantemente quebrou as estátuas, e cortou os bosques, e encheu o seu lugar com ossos de homens.
15 ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.
15 E também o altar que estava em Betel e o alto que fez Jeroboão, filho de Nebate, que tinha feito pecar a Israel, juntamente com aquele altar, também o alto derribou; queimando o alto, em pó o desfez e queimou o ídolo do bosque.
16 ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು.
16 E, virando-se Josias, viu as sepulturas que estavam ali no monte, e enviou, e tomou os ossos das sepulturas, e os queimou sobre aquele altar, e assim o profanou, conforme a palavra do Senhor , que apregoara o homem de Deus, quando apregoou estas palavras.
17 ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು.
17 Então, disse: Que é este monumento que vejo? E os homens da cidade lhe disseram: É a sepultura do homem de Deus que veio de Judá, e apregoou estas coisas que fizeste contra este altar de Betel.
18 ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು.
18 E disse: Deixai-o estar; ninguém mexa nos seus ossos. Assim, deixaram estar os seus ossos com os ossos do profeta que viera de Samaria.
19 ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.
19 De mais disso, também Josias tirou todas as casas dos altos que havia nas cidades de Samaria, e que os reis de Israel tinham feito para provocarem o Senhor à ira; e lhes fez conforme todos os atos que tinha praticado em Betel.
20 ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.
20 E sacrificou todos os sacerdotes dos altos, que havia ali, sobre os altares, e queimou ossos de homens sobre eles; depois, voltou a Jerusalém.
21 ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು.
21 E o rei deu ordem a todo o povo, dizendo: Celebrai a Páscoa ao Senhor , vosso Deus, como está escrito no livro do concerto.
22 ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.
22 Porque nunca se celebrou tal Páscoa como esta desde os dias dos juízes que julgaram a Israel, nem em todos os dias dos reis de Israel, nem tampouco dos reis de Judá.
23 ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು.
23 Porém, no ano décimo oitavo do rei Josias, esta Páscoa se celebrou ao Senhor , em Jerusalém.
24 ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.
24 E também os adivinhos, e os feiticeiros, e os terafins, e os ídolos, e todas as abominações que se viam na terra de Judá e em Jerusalém, os extirpou Josias, para confirmar as palavras da lei, que estavam escritas no livro que o sacerdote Hilquias achara na Casa do Senhor .
25 ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.
25 E antes dele não houve rei semelhante, que se convertesse ao Senhor com todo o seu coração, e com toda a sua alma, e com todas as suas forças, conforme toda a Lei de Moisés; e, depois dele, nunca se levantou outro tal.
26 ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.
26 Todavia, o Senhor se não demoveu do ardor da sua grande ira, ira com que ardia contra Judá, por todas as provocações com que Manassés o tinha provocado.
27 ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
27 E disse o Senhor : Também a Judá hei de tirar de diante da minha face, como tirei a Israel, e rejeitarei esta cidade de Jerusalém que elegi, como também a casa de que disse: Estará ali o meu nome.
28 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.
28 Ora, o mais dos atos de Josias e tudo quanto fez, porventura, não estão escritos no livro das Crônicas dos Reis de Judá?
29 ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.
29 Nos seus dias, subiu Faraó-Neco, rei do Egito, contra o rei da Assíria, ao rio Eufrates; e o rei Josias lhe foi ao encontro; e, vendo-o ele, o matou em Megido.
30 ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು.
30 E seus servos o levaram morto de Megido, e o trouxeram a Jerusalém, e o sepultaram na sua sepultura; e o povo da terra tomou a Joacaz, filho de Josias, e o ungiram, e o fizeram rei em lugar de seu pai.
31 ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
31 Tinha Joacaz vinte e três anos de idade quando começou a reinar e três meses reinou em Jerusalém; e era o nome de sua mãe Hamutal, filha de Jeremias, de Libna.
32 ಯೆಹೋವಾಹಾಜನು ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಹಾಜನು ತನ್ನ ಪೂರ್ವಿಕರೆಲ್ಲರೂ ಮಾಡಿದಂತಹ ಕಾರ್ಯಗಳನ್ನು ಮಾಡಿದನು.
32 E fez o que era mal aos olhos do Senhor , conforme tudo o que fizeram seus pais.
33 ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.
33 Porém Faraó-Neco o mandou prender em Ribla, em terra de Hamate, para que não reinasse em Jerusalém; e à terra impôs a pena de cem talentos de prata e um talento de ouro.
34 ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.
34 Também Faraó-Neco estabeleceu rei a Eliaquim, filho de Josias, em lugar de Josias, seu pai, e lhe mudou o nome em Jeoaquim; porém a Joacaz tomou consigo, e veio ao Egito e morreu ali.
35 ಯೆಹೋಯಾಕೀಮನು ಫರೋಹ ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು.
35 E Jeoaquim deu aquela prata e aquele ouro a Faraó; porém fintou a terra, para dar esse dinheiro conforme o mandado de Faraó; a cada um, segundo a sua avaliação, demandou a prata e o ouro do povo da terra, para o dar a Faraó-Neco.
36 ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.
36 Tinha Jeoaquim vinte e cinco anos de idade quando começou a reinar e reinou onze anos em Jerusalém; e era o nome de sua mãe Zebida, filha de Pedaías, de Ruma.
37 ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು.
37 E fez o que era mal aos olhos do Senhor , conforme tudo quanto fizeram seus pais.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Reis 23, comparar traduções ou montar um estudo — tudo direto pelo WhatsApp.