2 Reis 25
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
1 Então, no nono ano do reinado de Zedequias, no décimo dia do décimo mês, Nabucodonosor, rei da Babilônia, marchou contra Jerusalém com todo o seu exército. Ele acampou em frente da cidade e construiu rampas de ataque ao redor dela.
2 ನೆಬೂಕದ್ನೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ, ಚಿದ್ಕೀಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು.
2 A cidade foi mantida sob cerco até o décimo primeiro ano do reinado de Zedequias.
3 ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.
3 No nono dia do quarto mês, a fome na cidade havia se tornado tão severa que não havia nada para o povo comer.
4 ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.
4 Então o muro da cidade foi rompido, e todos os soldados fugiram de noite pela porta entre os dois muros próximos ao jardim do rei, embora os babilônios estivessem em torno da cidade. Fugiram na direção da Arabá,
5 ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು.
5 mas o exército babilônio perseguiu o rei e o alcançou nas planícies de Jericó. Todos os seus soldados o abandonaram,
6 ಬಾಬಿಲೋನಿನವರು ರಾಜನಾದ ಚಿದ್ಕೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ಕೀಯನನ್ನು ದಂಡಿಸಲು ತೀರ್ಮಾನಿಸಿದನು.
6 e ele foi capturado. Foi levado até o rei da Babilônia, em Ribla, onde pronunciaram a sentença contra ele.
7 ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.
7 Executaram os filhos de Zedequias na sua frente; depois furaram seus olhos, prenderam-no com algemas de bronze e o levaram para a Babilônia.
8 ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.
8 No sétimo dia do quinto mês do décimo nono ano do reinado de Nabucodonosor, rei da Babilônia, Nebuzaradã, comandante da guarda imperial, conselheiro do rei da Babilônia, foi a Jerusalém.
9 ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.
9 Incendiou o templo do Senhor, o palácio real, todas as casas de Jerusalém e todos os edifícios importantes.
10 ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.
10 Todo o exército babilônio, que acompanhava Nebuzaradã derrubou os muros de Jerusalém.
11 ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.
11 E ele levou para o exílio o povo que sobrou na cidade, os que passaram para o lado do rei da Babilônia e o restante da população.
12 ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.
12 Mas alguns dos mais pobres do país o comandante deixou para trás, para trabalharem nas vinhas e nos campos.
13 ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
13 Os babilônios destruíram as colunas de bronze, os suportes e o tanque de bronze que estavam no templo do Senhor, e levaram o bronze para a Babilônia.
14 ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದರು.
14 Também levaram as panelas, as pás, os cortadores de pavio, as vasilhas e todos os utensílios de bronze utilizados no serviço do templo.
15 ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು.
15 O comandante da guarda imperial levou os incensários e as bacias de aspersão, tudo o que era feito de ouro puro ou prata.
16 ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.
16 As duas colunas, o tanque e os suportes, que Salomão fizera para o templo do Senhor, eram mais do que podia ser pesado.
17 ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.
17 Cada coluna tinha oito metros e dez centímetros de altura. O capitel de bronze no alto de cada coluna tinha um metro e trinta e cinco centímetros de altura e era decorado com uma fileira de romãs de bronze ao redor.
18 ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.
18 O comandante da guarda levou como prisioneiros o sumo sacerdote, Seraías, Sofonias, o segundo sacerdote, e os três guardas da porta.
19 ನೆಬೂಜರದಾನನು ಸೇನೆಯ ಸೇನಾಧಿಕಾರಿಯೊಬ್ಬನನ್ನು ಹಿಡಿದುಕೊಂಡು ಹೋದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ರಾಜನ ಐದು ಮಂದಿ ಸಲಹೆಗಾರರನ್ನು ಹಿಡಿದೊಯ್ದನು. ಅವನು ಸೇನೆಯ ಅಧಿಕಾರಿಯ ಕಾರ್ಯದರ್ಶಿಯನ್ನು ಹಿಡಿದೊಯ್ದನು. ಸೇನಾಧಿಕಾರಿಯ ಕಾರ್ಯದರ್ಶಿಯು ಸಾಮಾನ್ಯ ಜನರನ್ನು ಒಟ್ಟುಗೂಡಿಸಿ, ಅವರನ್ನು ಸೈನಿಕರನ್ನಾಗಿ ಆರಿಸುತ್ತಿದ್ದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ಇತರ ಅರವತ್ತು ಮಂದಿಯನ್ನು ಹಿಡಿದೊಯ್ದನು. ಈ ಜನರು ಸಾಮಾನ್ಯ ಜನರಾಗಿದ್ದರು.
19 Dos que ainda estavam na cidade, ele levou o oficial responsável pelos homens de combate e cinco conselheiros reais. Também levou o secretário, principal líder responsável pelo alistamento militar no país e sessenta homens do povo.
20 ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಲದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು.
20 O comandante Nebuzaradã levou a todos ao rei da Babilônia, em Ribla.
21 ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.
21 Lá, em Ribla, na terra de Hamate, o rei mandou executá-los. Assim Judá foi para o exílio, para longe de sua terra.
22 ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.
22 Nabucodonosor, rei da Babilônia, nomeou Gedalias, filho de Aicam e neto de Safã, como governador do povo que havia sido deixado em Judá.
23 ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.
23 Quando Ismael, filho de Netanias, Joanã, filho de Careá, Seraías, filho do netofatita Tanumete, e Jazanias, filho de um maacatita, todos os líderes do exército, souberam que o rei da Babilônia havia nomeado Gedalias como governador, eles e seus soldados foram falar com Gedalias em Mispá.
24 ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.
24 Gedalias fez um juramento a esses líderes e a seus soldados, dizendo: "Não tenham medo dos oficiais babilônios. Estabeleçam-se nesta terra e sirvam o rei da Babilônia, e tudo lhes irá bem".
25 ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.
25 Mas no sétimo mês, Ismael, filho de Netanias e neto de Elisama, que tinha sangue real, foi com dez homens e assassinou Gedalias e os judeus e os babilônios que estavam com ele em Mispá.
26 ಇದಾದ ನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು.
26 Então todo o povo, desde as crianças até os velhos, juntamente com os líderes do exército, fugiram para o Egito, com medo dos babilônios.
27 ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.
27 No trigésimo sétimo ano do exílio de Joaquim, rei de Judá, no ano em que Evil-Merodaque se tornou rei da Babilônia, ele tirou Joaquim da prisão, no dia vinte e sete do décimo segundo mês.
28 ಎವೀಲ್ಮೆರೋದಕನು ಹೋಯಾಖೀನನೊಂದಿಗೆ ದಯೆಯಿಂದ ಮಾತನಾಡಿದನು. ಎವೀಲ್ಮೆರೋದಕನು ಯೆಹೋಯಾಖೀನನ ಸಿಂಹಾಸನವನ್ನು ಬಾಬಿಲೋನಿನಲ್ಲಿ ತನ್ನೊಂದಿಗಿದ್ದ ರಾಜರುಗಳ ಸಿಂಹಾಸನಗಳಿಗಿಂತ ಎತ್ತರದಲ್ಲಿರಿಸಿದನು.
28 Ele lhe tratou com bondade e deu-lhe o lugar mais honrado entre os outros reis que estavam com ele na Babilônia.
29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.
29 Assim, Joaquim deixou suas vestes de prisão e pelo resto de sua vida comeu à mesa do rei.
30 ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.
30 E diariamente, enquanto viveu, Joaquim recebeu uma pensão do rei.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Reis 25, comparar traduções ou montar um estudo — tudo direto pelo WhatsApp.