2 Samuel 13
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ದಾವೀದನಿಗೆ ಅಬ್ಷಾಲೋಮನೆಂಬ ಮಗನಿದ್ದನು. ಅವನಿಗೆ ತಾಮಾರಳೆಂಬ ತಂಗಿಯಿದ್ದಳು. ಆಕೆ ಬಹಳ ಸುಂದರಿಯಾಗಿದ್ದಳು. ದಾವೀದನ ಮತ್ತೊಬ್ಬ ಮಗನಾದ ಅಮ್ನೋನನು,
1 E aconteceu depois disto que, tendo Absalão, filho de Davi, uma irmã formosa, cujo nome era Tamar, Amnom, filho de Davi, amou-a.
2 ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಈ ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ನೋನನು ಬಲಹೀನನಾದನು.
2 E angustiou-se Amnom, até adoecer, por Tamar, sua irmã, porque era virgem; e parecia aos olhos de Amnom dificultoso fazer-lhe coisa alguma.
3 ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದ್ವಾನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದ್ವಾನು ಬಹಳ ಯುಕ್ತಿಯುಳ್ಳ ಮನುಷ್ಯ.
3 Tinha, porém, Amnom um amigo, cujo nome era Jonadabe, filho de Siméia, irmão de Davi; e era Jonadabe homem mui sagaz.
4 ಯೋನಾದ್ವಾನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು.
4 O qual lhe disse: Por que tu de dia em dia tanto emagreces, sendo filho do rei? Não mo farás saber a mim? Então lhe disse Amnom: Amo a Tamar, irmã de Absalão, meu irmão.
5 ಯೋನಾದ್ವಾನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.
5 E Jonadabe lhe disse: Deita-te na tua cama, e finge-te doente; e, quando teu pai te vier visitar, dize-lhe: Peço-te que minha irmã Tamar venha, e me dê de comer pão, e prepare a comida diante dos meus olhos, para que eu a veja e coma da sua mão.
6 ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.
6 Deitou-se, pois, Amnom, e fingiu-se doente; e, vindo o rei visitá-lo, disse Amnom, ao rei: Peço-te que minha irmã Tamar venha, e prepare dois bolos diante dos meus olhos, para que eu coma de sua mão.
7 ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.
7 Mandou então Davi à casa, a Tamar, dizendo: Vai à casa de Amnom, teu irmão, e faze-lhe alguma comida.
8 ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು.
8 E foi Tamar à casa de Amnom, seu irmão (ele porém estava deitado), e tomou massa, e a amassou, e fez bolos diante dos seus olhos, e cozeu os bolos.
9 ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು.
9 E tomou a frigideira, e os tirou diante dele; porém ele recusou comer. E disse Amnom: Fazei retirar a todos da minha presença. E todos se retiraram dele.
10 ಅಮ್ನೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು.
10 Então disse Amnom a Tamar: Traze a comida ao quarto, e comerei da tua mão. E tomou Tamar os bolos que fizera, e levou-os a Amnom, seu irmão, no quarto.
11 ತನ್ನ ಕೈಗಳಿಂದಲೇ ಅಮ್ನೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ನೋನನು ತಾಮಾರಳನ್ನು ಬಿಗಿಯಾಗಿ ಹಿಡಿದುಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು.
11 E chegando-lhos, para que comesse, pegou dela, e disse-lhe: Vem, deita-te comigo, minha irmã.
12 ತಾಮಾರಳು ಅಮ್ನೋನನಿಗೆ, “ಸೋದರನೇ ಬೇಡ! ನನ್ನನ್ನು ಬಲಾತ್ಕರಿಸದಿರು! ಇಸ್ರೇಲಿನಲ್ಲಿ ಇಂತಹ ಕಾರ್ಯ ಎಂದೆಂದಿಗೂ ನಡೆಯಬಾರದು! ಅಪಮಾನಕರವಾದ ಈ ಕಾರ್ಯವನ್ನು ಮಾಡಬೇಡ!
12 Porém ela lhe disse: Não, meu irmão, não me forces, porque não se faz assim em Israel; não faças tal loucura.
13 ನನಗಾದ ಈ ಕಳಂಕವನ್ನು ಎಂದೆಂದಿಗೂ ನಾನು ತೊಡೆದುಹಾಕಲಾಗುವುದಿಲ್ಲ. ಇಸ್ರೇಲಿನ ಜನರಲ್ಲಿ ತಮ್ಮ ಅಪಮಾನಕರವಾದ ಕಾರ್ಯಗಳಿಂದ ನೀಚರೆನಿಸಿಕೊಳ್ಳುವ ಜನರಂತೆ ನೀನೂ ಆಗಿಬಿಡುವೆ. ದಯವಿಟ್ಟು ರಾಜನೊಂದಿಗೆ ಮಾತನಾಡು. ಅವನು ನಿನ್ನ ಜೊತೆಯಲ್ಲಿ ನನ್ನ ಮದುವೆ ಮಾಡಲಿ” ಎಂದಳು.
13 Porque, aonde iria eu com a minha vergonha? E tu serias como um dos loucos de Israel. Agora, pois, peço-te que fales ao rei, porque não me negará a ti.
14 ಆದರೆ ತಾಮಾರಳ ಮಾತುಗಳನ್ನು ಅಮ್ನೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಶಾಲಿಯಾಗಿದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು.
14 Porém ele não quis dar ouvidos à sua voz; antes, sendo mais forte do que ela, a forçou, e se deitou com ela.
15 ಅನಂತರ ಅಮ್ನೋನನು ತಾಮಾರಳನ್ನು ದ್ವೇಷಿಸಿದನು. ಅಮ್ನೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕಿಂತ ಹೆಚ್ಚಾಗಿ ದ್ವೇಷಿಸಿದನು. ಅಮ್ನೋನನು ತಾಮಾರಳಿಗೆ, “ಮೇಲೇಳು, ಹೊರಟುಹೋಗು!” ಎಂದನು.
15 Depois Amnom sentiu grande aversão por ela, pois maior era o ódio que sentiu por ela do que o amor com que a amara. E disse-lhe Amnom: Levanta-te, e vai-te.
16 ತಾಮಾರಳು ಅಮ್ನೋನನಿಗೆ, “ಇಲ್ಲ! ನನ್ನನ್ನು ಹೊರಗೆ ಕಳುಹಿಸುವುದು ನೀನು ಮೊದಲು ಮಾಡಿದ್ದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯವಾಗಿದೆ” ಎಂದು ಹೇಳಿದಳು.
16 Então ela lhe disse: Não há razão de me despedires assim; maior seria este mal do que o outro que já me tens feito. Porém não lhe quis dar ouvidos.
17 ಅಮ್ನೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಈ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದ ನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು.
17 E chamou a seu moço que o servia, e disse: Ponha fora a esta, e fecha a porta após ela.
18 ಅಮ್ನೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದ ನಂತರ ಬಾಗಿಲಿಗೆ ಬೀಗವನ್ನು ಹಾಕಿದನು.
18 E trazia ela uma roupa de muitas cores (porque assim se vestiam as filhas virgens dos reis); e seu servo a pôs para fora, e fechou a porta após ela.
19 ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.
19 Então Tamar tomou cinza sobre a sua cabeça, e a roupa de muitas cores que trazia rasgou; e pôs as mãos sobre a cabeça, e foi andando e clamando.
20 ತಾಮಾರಳ ಸೋದರನಾದ ಅಬ್ಷಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನು ನಿನ್ನನ್ನು ಕೆಡಿಸಿ ಬಿಟ್ಟನಲ್ಲವೇ? ಅಮ್ನೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಷಾಲೋಮನ ಮನೆಯಲ್ಲಿ ವಾಸಿಸಲು ಹೋದಳು.
20 E Absalão, seu irmão, lhe disse: Esteve Amnom, teu irmão, contigo? Ora, pois, minha irmã, cala-te; é teu irmão. Não se angustie o teu coração por isto. Assim ficou Tamar, e esteve solitária em casa de Absalão seu irmão.
21 ರಾಜನಾದ ದಾವೀದನಿಗೆ ಈ ವರ್ತಮಾನವು ತಿಳಿದು ಬಹಳ ಕೋಪಗೊಂಡನು.
21 E, ouvindo o rei Davi todas estas coisas, muito se lhe acendeu a ira.
22 ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.
22 Porém Absalão não falou com Amnom, nem mal nem bem; porque Absalão odiava a Amnom, por ter forçado a Tamar sua irmã.
23 ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.
23 E aconteceu que, passados dois anos inteiros, Absalão tinha tosquiadores em Baal-Hazor, que está junto a Efraim; e convidou Absalão a todos os filhos do rei.
24 ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.
24 E foi Absalão ao rei, e disse: Eis que teu servo tem tosquiadores; peço que o rei e os seus servos venham com o teu servo.
25 ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು.
25 O rei, porém, disse a Absalão: Não, filho meu, não vamos todos juntos, para não te sermos pesados. E instou com ele; porém não quis ir, mas o abençoou.
26 ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು.
26 Então disse Absalão: Quando não, deixa ir conosco Amnom, meu irmão. Porém o rei disse: Para que iria contigo?
27 ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.
27 E, instando Absalão com ele, deixou ir com ele a Amnom, e a todos os filhos do rei.
28 ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
28 E Absalão deu ordem aos seus servos, dizendo: Tomai sentido; quando o coração de Amnom estiver alegre do vinho, e eu vos disser: Feri a Amnom, então o matareis; não temais: porque porventura não sou eu quem vo-lo ordenei? Esforçai-vos, e sede valentes.
29 ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.
29 E os servos de Absalão fizeram a Amnom como Absalão lho havia ordenado. Então todos os filhos do rei se levantaram, e montaram cada um no seu mulo, e fugiram.
30 ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.
30 E aconteceu que, estando eles ainda no caminho, chegou a nova a Davi, dizendo-se: Absalão feriu a todos os filhos do rei, e nenhum deles ficou.
31 ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.
31 Então o rei se levantou, e rasgou as suas vestes, e se lançou por terra; da mesma maneira todos os seus servos estavam com vestes rotas.
32 ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದ್ವಾನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಯೋಜನೆವಾಡುತ್ತಿದ್ದನು.
32 Mas Jonadabe, filho de Siméia, irmão de Davi, respondeu, e disse: Não diga o meu senhor que mataram a todos os moços filhos do rei, porque só morreu Amnom; porque assim tinha resolvido fazer Absalão, desde o dia em que forçou a Tamar sua irmã.
33 ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.
33 Não se lhe ponha, pois, agora no coração do rei meu senhor tal coisa, dizendo: Morreram todos os filhos do rei; porque só morreu Amnom.
34 ಅಬ್ಷಾಲೋಮನು ಓಡಿಹೋದನು.
34 E Absalão fugiu; e o moço que estava de guarda, levantou os seus olhos, e olhou; e eis que muito povo vinha pelo caminho por detrás dele, pelo lado do monte.
35 ಯೋನಾದ್ವಾನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ. ಅಲ್ಲಿ ನೋಡು, ರಾಜನ ಗಂಡುಮಕ್ಕಳೆಲ್ಲರೂ ಬರುತ್ತಿದ್ದಾರೆ” ಎಂದನು.
35 Então disse Jonadabe ao rei: Eis aqui vêm os filhos do rei; conforme à palavra de teu servo, assim sucedeu.
36 ಯೋನಾದ್ವಾನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.
36 E aconteceu que, como acabou de falar, os filhos do rei vieram, e levantaram a sua voz, e choraram; e também o rei e todos os seus servos choraram amargamente.
37 ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು.
37 Assim Absalão fugiu, e foi a Talmai, filho de Amiur, rei de Gesur. E Davi pranteava por seu filho todos aqueles dias.
38 ಅಬ್ಷಾಲೋಮನು ಗೆಷೂರಿಗೆ ಓಡಿಹೋದ ನಂತರ, ಅಲ್ಲಿ ಅವನು ಮೂರು ವರ್ಷಗಳ ಕಾಲ ನೆಲೆಸಿದನು.
38 Assim Absalão fugiu, e foi para Gesur; esteve ali três anos.
39 ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.
39 Então tinha o rei Davi saudades de Absalão; porque já se tinha consolado acerca da morte de Amnom.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Samuel 13, comparar traduções ou montar um estudo — tudo direto pelo WhatsApp.