2 Samuel 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.
1 Durante o reinado de Davi, houve uma fome que durou três anos. Davi consultou o Senhor, que lhe disse: "A fome veio por causa de Saul e de sua família sanguinária, por terem matado os gibeonitas".
2 (ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.)
2 O rei então mandou chamar os gibeonitas e falou com eles. ( Os gibeonitas não eram de origem israelita, mas remanescentes dos amorreus. Os israelitas tinham feito com eles um acordo sob juramento; mas Saul, em seu zelo por Israel e Judá, havia tentado exterminá-los. )
3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.
3 Davi perguntou aos gibeonitas: "Que posso fazer por vocês? Como posso reparar o que foi feito, para que abençoem a herança do Senhor? "
4 ಗಿಬ್ಯೋನ್ಯರು ದಾವೀದನಿಗೆ, “ಸೌಲನ ಬೆಳ್ಳಿಬಂಗಾರವಾಗಲಿ ಅವನ ಮನೆಯಾಗಲಿ ನಮಗೆ ಬೇಕಾಗಿಲ್ಲ ಮತ್ತು ಇಸ್ರೇಲಿನ ಯಾವ ವ್ಯಕ್ತಿಯನ್ನೂ ಕೊಲ್ಲಲು ನಮಗೆ ಹಕ್ಕಿಲ್ಲ” ಎಂದು ಹೇಳಿದರು.
4 Os gibeonitas responderam: "Não exigimos de Saul ou de sua família prata ou ouro, nem queremos matar ninguém em Israel". Davi perguntou: "O que querem que eu faça por vocês? ",
5 ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು.
5 e eles responderam: "Quanto ao homem que quase nos exterminou e que pretendia destruir-nos, para que não tivéssemos lugar em Israel,
6 ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು.
6 que sete descendentes dele sejam executados perante o Senhor, em Gibeá de Saul, no monte do Senhor". "Eu os entregarei a vocês", disse o rei.
7 ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.
7 O rei poupou Mefibosete, filho de Jônatas e neto de Saul, por causa do juramento feito perante o Senhor entre Davi e Jônatas, filho de Saul.
8 ಆದರೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದಿಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ್ದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು.
8 Mas o rei mandou buscar Armoni e Mefibosete, dois filhos de Rispa, filha de Aiá, que ela teve com Saul, e os cinco filhos de Merabe, filha de Saul, que ela teve com Adriel, filho de Barzilai, de Meolá.
9 ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)
9 Ele os entregou aos gibeonitas, que os executaram no monte, perante o Senhor. Os sete foram mortos ao mesmo tempo, nos primeiros dias da colheita de cevada.
10 ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.
10 Então Rispa, filha de Aiá, pegou um pano de saco e o estendeu para si sobre uma rocha. Desde o início da colheita até cair chuva do céu sobre os corpos, ela não deixou que as aves de rapina os tocassem de dia, nem os animais selvagens à noite.
11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.
11 Quando Davi foi informado do que Rispa, filha de Aiá, concubina de Saul, havia feito,
12 ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
12 ele mandou recolher os ossos de Saul e de Jônatas, tomando-os dos cidadãos de Jabes-Gileade. ( Eles haviam roubado os ossos da praça de Bete-Seã, onde os filisteus os tinham pendurado, no dia em que mataram Saul no monte Gilboa. )
13 ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು.
13 Davi trouxe de lá os ossos de Saul e de seu filho Jônatas, que foram recolhidos dentre os ossos dos que haviam sido executados.
14 ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.
14 Enterraram os ossos de Saul e de Jônatas no túmulo de Quis, pai de Saul, em Zela, na terra de Benjamim, e fizeram tudo o que o rei ordenou. Depois disso, Deus respondeu as orações em favor da terra de Israel.
15 ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.
15 Houve, ainda, outra batalha entre os filisteus e Israel; Davi e seus soldados foram lutar contra os filisteus. Davi se cansou muito,
16 ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.
16 e Isbi-Benobe, descendente de Rafa, prometeu matar Davi. ( A ponta de bronze da lança de Isbi-Benobe pesava três quilos e seiscentos gramas, e ele ainda estava armado com uma espada nova. )
17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು.
17 Mas Abisai, filho de Zeruia, foi em socorro de Davi e matou o filisteu. Então os soldados de Davi lhe juraram, dizendo: "Nunca mais sairás conosco à guerra, para que não apagues a lâmpada de Israel".
18 ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
18 Houve depois outra batalha com os filisteus, em Gobe. Naquela ocasião Sibecai, de Husate, matou Safe, um dos descendentes de Rafa.
19 ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೆತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು.
19 Noutra batalha contra os filisteus em Gobe, Elanã, filho de Jaaré-Oregim, de Belém, matou Golias, de Gate, que possuía uma lança cuja haste parecia uma lançadeira de tecelão.
20 ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.
20 Noutra batalha, em Gate, havia um homem de grande estatura e que tinha seis dedos em cada mão e seis dedos em cada pé, vinte e quatro dedos ao todo. Ele também era descendente de Rafa,
21 ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)
21 e desafiou Israel, mas Jônatas, filho de Siméia, irmão de Davi, o matou.
22 ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.
22 Esses quatro eram descendentes de Rafa, em Gate, e foram mortos por Davi e seus soldados.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 21, comparar traduções ou montar um estudo — tudo direto pelo WhatsApp.