2 Samuel 2

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು.
1 Depois disso Davi perguntou a Deus, o Senhor : — Devo ir e governar alguma das cidades de Judá? — Sim! — o — Qual delas? — perguntou ele. — Hebrom! — foi a resposta.
2 ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
2 Então Davi foi para Hebrom, levando consigo as suas duas esposas. Uma era Ainoã, da cidade de Jezreel, e a outra era Abigail, viúva de Nabal, da cidade de Carmelo.
3 ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.
3 Davi também levou os seus soldados com as suas famílias, e eles ficaram morando nas cidades vizinhas de Hebrom.
4 ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.
4 Aí os homens de Judá foram a Hebrom e ungiram Davi como rei de Judá. Quando Davi soube que os moradores da cidade de Jabes, da região de Gileade, tinham sepultado Saul,
5 ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.
5 mandou que alguns homens fossem lá com a seguinte mensagem: — Que o
6 ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.
6 Que o Senhor seja bom e fiel para vocês! Por causa do que fizeram, eu também os tratarei bem.
7 ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.
7 Sejam fortes e valentes! Saul, o rei de vocês, morreu, e o povo de Judá me ungiu como rei deles.
8 ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.
8 O comandante do exército de Saul, Abner, filho de Ner, havia fugido com Isbosete, filho de Saul, para Maanaim, no outro lado do rio Jordão.
9 ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.
9 Lá, Abner fez Isbosete rei das terras de Gileade, Aser, Jezreel, Efraim e Benjamim; na verdade, ele o fez rei de todo o povo de Israel.
10 ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.
10 Isbosete tinha quarenta anos de idade quando começou a reinar em Israel e reinou dois anos. Mas a tribo de Judá ficou fiel a Davi,
11 ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.
11 e ele a governou em Hebrom sete anos e meio.
12 ನೇರನ ಮಗನಾದ ಅಬ್ನೇರನೂ ಮತ್ತು ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.
12 Abner e os oficiais de Isbosete foram de Maanaim para a cidade de Gibeão.
13 ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.
13 Joabe, cuja mãe era Zeruia, e os oficiais de Davi foram encontrá-los perto da represa de Gibeão. Lá todos eles se sentaram, um grupo de um lado da represa e o outro do outro lado.
14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು.
14 Então Abner disse a Joabe: — Deixe que alguns dos nossos moços enfrentem alguns dos seus, em uma luta armada. — Está bem! — respondeu Joabe.
15 ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.
15 Aí doze soldados, representando Isbosete e a tribo de Benjamim, lutaram contra doze soldados de Davi.
16 ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.
16 Cada um pegou o seu adversário pela cabeça e enfiou a espada no lado dele. E assim todos eles caíram mortos juntos. É por isso que aquele lugar perto da cidade de Gibeão é chamado de “Campo das Espadas”.
17 ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.
17 Em seguida houve ali uma violenta batalha, e Abner e os israelitas foram derrotados pelos soldados de Davi.
18 ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.
18 Joabe, Abisai e Asael, os três filhos de Zeruia, estavam lá. Asael, que era tão ligeiro como uma gazela selvagem,
19 ಅಸಾಹೇಲನು ಯಾವ ಕಡೆಗೂ ತಿರುಗದೆ ನೇರವಾಗಿ ಅಬ್ನೇರನ ಕಡೆಗೆ ಹೋದನು.
19 começou a perseguir Abner, correndo atrás dele.
20 ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು.
20 Abner olhou para trás e perguntou: — Asael, é você? — Sim, sou eu! — respondeu ele.
21 ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.
21 — Pare de me perseguir! — disse Abner. — Corra atrás de um dos soldados e pegue para você as coisas dele. Porém Asael continuou a persegui-lo.
22 ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.
22 Mais uma vez Abner disse: — Pare de me perseguir! Você está me forçando a matá-lo! Como é que eu poderia, depois, olhar o seu irmão Joabe nos olhos?
23 ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು.
23 Porém Asael não parou de persegui-lo. Então Abner deu um golpe para trás com a sua lança. Ela entrou na barriga de Asael e saiu pelas costas. Ele caiu morto no chão, e todos os que chegavam paravam no lugar onde ele estava caído.
24 ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು “ಅಮ್ಮಾ” ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ “ಅಮ್ಮಾ” ಬೆಟ್ಟ.)
24 Mas Joabe e Abisai continuaram a perseguir Abner e, quando o sol estava se pondo, chegaram ao monte de Amá, a leste da cidade de Giá, na estrada que vai para o deserto de Gibeão.
25 ಬೆನ್ಯಾಮೀನ್ ಕುಲದವರೆಲ್ಲರು ಅಬ್ನೇರನ ಹತ್ತಿರಕ್ಕೆ ಬಂದರು. ಅವರೆಲ್ಲ ಬೆಟ್ಟದ ಮೇಲೆ ಒಟ್ಟಾಗಿ ನಿಂತರು.
25 Os soldados da tribo de Benjamim se reuniram novamente em volta de Abner e ficaram no alto de um morro.
26 ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.
26 Então Abner gritou para Joabe: — Será que vamos ter de continuar lutando para sempre? Você não vê que, no fim, não vai sobrar nada, a não ser amargura? Nós somos seus irmãos! Até quando você vai esperar para mandar que os seus soldados parem de nos perseguir?
27 ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು.
27 Joabe respondeu: — Juro pelo Deus vivo que, se você não tivesse falado, os meus soldados continuariam a perseguir vocês até amanhã cedo.
28 ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ.
28 Então Joabe tocou a corneta. Todos os seus soldados pararam de perseguir os israelitas, e a luta acabou.
29 ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.
29 Durante toda aquela noite, Abner e os seus soldados marcharam pelo vale do Jordão. Atravessaram o rio Jordão e, depois de marcharem toda a manhã do dia seguinte, chegaram à cidade de Maanaim.
30 ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ.
30 Quando Joabe parou a perseguição, reuniu todos os seus soldados e viu que estavam faltando dezenove, além de Asael.
31 ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು.
31 Porém os soldados de Davi haviam matado trezentos e sessenta soldados de Abner, todos eles da tribo de Benjamim.
32 ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು.
32 Aí Joabe e os seus soldados pegaram o corpo de Asael e o sepultaram no túmulo da sua família, em Belém. Então marcharam durante a noite inteira e, ao amanhecer, chegaram a Hebrom.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 2, comparar traduções ou montar um estudo — tudo direto pelo WhatsApp.