2 Samuel 6
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.
1 Mais uma vez Davi reuniu os melhores soldados de Israel, num total de trinta mil homens.
2 ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.
2 Levou-os à cidade de Baalá, em Judá, para pegarem a arca da aliança , que tem o nome do Senhor Todo-Poderoso, que se assenta no seu trono, entre os querubins .
3 ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದ್ವಾನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದ್ವಾನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.
3 Colocaram a arca num carro de bois, novo, e a tiraram da casa de Abinadabe, que ficava num monte. Uzá e Aiô, filhos de Abinadabe, guiavam o carro
4 ಬೆಟ್ಟದ ಮೇಲಿನ ಅಬೀನಾದ್ವಾನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು.
4 que carregava a arca. Aiô caminhava na frente.
5 ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.
5 Davi e todos os israelitas dançavam e cantavam com todas as suas forças em louvor a Deus, o Senhor . Eles tocavam harpas , liras , tambores, castanholas e pratos.
6 ದಾವೀದನ ಜನರು ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರ ಪೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರ ಪೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು.
6 Quando chegaram ao campo de descascar cereais que pertencia a Nacom, os bois tropeçaram. Então Uzá estendeu a mão e segurou a arca da aliança.
7 ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.
7 O Senhor Deus ficou irado com Uzá, por sua falta de respeito, e o matou. E Uzá morreu ali, ao lado da arca.
8 ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.
8 Davi ficou furioso porque o Senhor , na sua ira, havia castigado Uzá; assim até hoje aquele lugar é chamado de Peres-Uzá .
9 ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರ ಪೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಯೋಚಿಸಿಕೊಂಡು
9 Então Davi ficou com medo de Deus, o Senhor , e disse: — E agora como é que poderei levar comigo a arca da aliança?
10 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.
10 Assim Davi resolveu não levar a arca para a sua cidade de Jerusalém; em vez disso, ele mudou de direção e a levou para a casa de Obede-Edom, que era da cidade de Gate.
11 ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.
11 A arca da aliança ficou ali três meses, e o Senhor abençoou Obede-Edom e a sua família.
12 ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.
12 O rei Davi soube que, por causa da arca, o Senhor havia abençoado a família de Obede-Edom e tudo o que ele tinha. Então tirou a arca da casa de Obede-Edom e, com uma grande festa, a levou para a Cidade de Davi .
13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.
13 Depois que os homens que carregavam a arca deram seis passos, Davi ofereceu a Deus em sacrifício um touro e um bezerro gordo.
14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.
14 Davi, vestindo um manto sacerdotal de linho, dançou com todo o entusiasmo em louvor a Deus, o Senhor .
15 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.
15 E assim ele e todos os israelitas levaram a arca da aliança para Jerusalém, com gritos de alegria e sons de trombetas.
16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.
16 Quando a arca estava entrando na cidade, Mical, filha de Saul, olhou pela janela, viu o rei Davi pulando e dançando em louvor ao Senhor . Então sentiu por ele um profundo desprezo.
17 ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
17 Levaram a arca e a colocaram no seu lugar, na barraca que Davi tinha preparado para ela. Então ele ofereceu a Deus, o Senhor , sacrifícios que foram completamente queimados e ofertas de paz.
18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.
18 Quando acabou de oferecer os sacrifícios e as ofertas, Davi abençoou o povo em nome do Senhor Todo-Poderoso.
19 ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ಮನೆಗಳಿಗೆ ಹೋದರು.
19 Depois deu a cada homem e a cada mulher de Israel um pão, um pedaço de carne assada e passas. Em seguida todos foram para casa.
20 ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.
20 Davi voltou para casa a fim de estar com a sua família, e Mical, filha de Saul, saiu para encontrá-lo. Ela disse: — Que bela figura fez hoje o rei de Israel! Parecia um sem-vergonha, mostrando o corpo para as empregadas dos seus funcionários!
21 ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.
21 Davi respondeu: — Eu estava dançando em louvor ao
22 ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.
22 e me humilharei ainda mais diante dele. Você pode pensar que eu não sou nada, mas aquelas moças de quem você falou vão me dar muito valor!
23 ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.
23 E Mical, filha de Saul, nunca teve filhos.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Samuel 6, comparar traduções ou montar um estudo — tudo direto pelo WhatsApp.