2 Samuel 8

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ

Sair da comparação
1 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.
1 E, depois disso, sucedeu que Davi feriu os filisteus, e os subjugou; e Davi tomou Metegue-Amá da mão dos filisteus.
2 ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.
2 E ele feriu Moabe, e os mediu com uma linha, lançando-os ao chão; e com duas linhas para os matar, e com uma linha inteira para manter vivo. E, assim, os moabitas se tornaram servos de Davi, e traziam presentes.
3 ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.
3 Davi feriu também Hadadezer, filho de Reobe, rei de Zobá, quando ele foi recuperar a sua fronteira junto ao rio Eufrates.
4 ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.
4 E Davi tomou dele mil carruagens, e setecentos cavaleiros, e vinte mil homens a pé; e Davi jarretou todos os cavalos de carruagens, mas desses reservou cem carruagens.
5 ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.
5 E quando os sírios de Damasco vieram para socorrer Hadadezer, rei de Zobá, Davi matou vinte e dois mil homens dos sírios.
6 ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.
6 Então, Davi pôs guarnições na Síria de Damasco; e os sírios se tornaram servos de Davi, e trouxeram presentes. E o SENHOR preservava Davi onde quer que ele fosse.
7 ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು.
7 E Davi tomou os escudos de ouro que estavam sobre os servos de Hadadezer, e os trouxe para Jerusalém.
8 ಹದದೆಜೆರನಿಗೆ ಸೇರಿದ ನಗರಗಳಾದ ಬೆಟಹ ಮತ್ತು ಬೇರೋತೈಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು.
8 E de Betá, e de Berotai, cidades de Hadadezer, o rei Davi tomou uma quantidade mui grande de bronze.
9 ಹದದೆಜೆರನ ಸೈನ್ಯವನ್ನೆಲ್ಲ ದಾವೀದನು ಸೋಲಿಸಿದನೆಂಬ ವರ್ತಮಾನವು ಹಮಾತಿನ ರಾಜನಾದ ತೋವಿಗೆ ತಿಳಿಯಿತು.
9 Quando Toí, rei de Hamate, ouviu que Davi havia ferido todo o exército de Hadadezer,
10 ಆಗ ತೋವಿಯು ತನ್ನ ಮಗನಾದ ಯೋರಾವುನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾವುನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾವುನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
10 Toí então enviou Jorão, o seu filho, até o rei Davi para saudá-lo e bendizê-lo, porque ele havia lutado contra Hadadezer e ferido a ele; pois Hadadezer teve guerras com Toí. E Jorão trouxe consigo vasos de prata, e vasos de ouro, e vasos de bronze;
11 ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.
11 os quais o rei Davi também dedicou ao SENHOR, com a prata e o ouro que ele havia dedicado de todas as nações que ele havia subjugado;
12 ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.
12 da Síria, e de Moabe, e dos filhos de Amom, e dos filisteus, e de Amaleque, e do despojo de Hadadezer, o filho de Reobe, rei de Zobá.
13 ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.
13 E Davi fez para si um nome quando retornou do combate aos sírios no vale do sal, sendo dezoito mil homens.
14 ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.
14 E ele pôs guarnições em Edom; ao longo de todo Edom ele pôs guarnições, e todos os de Edom se tornaram servos de Davi. E o SENHOR preservava Davi onde quer que ele fosse.
15 ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.
15 E Davi reinou sobre todo o Israel; e Davi executou juízo e justiça para todo o seu povo.
16 ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.
16 E Joabe, o filho de Zeruia, estava sobre o exército; e Josafá, o filho de Ailude, era o escrivão;
17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.
17 e Zadoque, o filho de Aitube, e Aimeleque, o filho de Abiatar, eram os sacerdotes; e Seraías era o escriba;
18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಅಧಿಕಾರಿಗಳಾಗಿದ್ದರು.
18 e Benaia, o filho de Joiada, estava sobre os quereteus, e sobre os peleteus; e os filhos de Davi eram soberanos maiorais.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 8, comparar traduções ou montar um estudo — tudo direto pelo WhatsApp.