2 Samuel 9
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.
1 Davi disse: Terá ficado alguém da casa de Saul, a quem eu possa beneficiar em memória de Jônatas?
2 ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು.
2 Ora, havia na família de Saul um servo chamado Siba. Levaram-no à presença de Davi, que lhe disse: És tu mesmo Siba? Para servir-te, respondeu ele.
3 ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು.
3 Tornou o rei: Haverá ainda alguém da família de Saul a quem eu possa fazer misericórdia da parte de Deus? Há ainda um filho de Jônatas, respondeu Siba, paralítico dos dois pés.
4 ರಾಜನಾದ ದಾವೀದನು ಚೀಬನಿಗೆ, “ಅವನು ಎಲ್ಲಿದ್ದಾನೆ?” ಎಂದು ಕೇಳಿದನು.
4 E o rei perguntou: Onde está ele? Siba respondeu: Está na casa de Maquir, filho de Amiel, de Lodabar.
5 ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು.
5 E o rei mandou buscá-lo na casa de Maquir, filho de Amiel de Lodabar.
6 ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು.
6 Quando Mifiboset, o filho de Jônatas, filho de Saul, chegou diante de Davi, prostrou-se com o rosto por terra. Davi disse-lhe: Mifiboset! Para servir-te, respondeu ele.
7 ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.
7 Davi disse-lhe: Não temas. Quero fazer-te bem em memória de teu pai Jônatas, e te restituirei todos os bens de Saul, teu avô. Comerás à minha mesa.
8 ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.
8 Mifiboset prostrou-se, dizendo: Quem é o teu servo, para que dês atenção a um cão morto como eu?
9 ಆಗ ರಾಜನಾದ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಒಡೆಯನಾದ ಸೌಲನ ಕುಟುಂಬಕ್ಕೆ ಸೇರಿದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.
9 O rei chamou Siba, o servo de Saul, e disse-lhe: Tudo o que pertenceu a Saul e à sua casa, eu darei ao filho de teu senhor.
10 ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು.
10 Lavrarás a terra para ele, tu, teus filhos e tua gente, e levarás o produto de teu trabalho para servir de alimento à família de teu senhor. Quanto a Mifiboset, o filho de teu senhor, ele comerá sempre à minha mesa. Ora, Siba tinha quinze filhos e vinte escravos.
11 ಚೀಬನು ರಾಜನಾದ ದಾವೀದನಿಗೆ, “ನಾನು ನಿಮ್ಮ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು.
11 Siba disse ao rei: Teu servo fará o que o rei, meu senhor, lhe ordenou. Mifiboset comia, pois, à mesa do rei, como um de seus filhos.
12 ಮೆಫೀಬೋಶೆತನಿಗೆ ಮೀಕನೆಂಬ ಚಿಕ್ಕ ಮಗನಿದ್ದನು. ಚೀಬನ ಕುಟುಂಬದ ಜನರೆಲ್ಲರೂ ಮೆಫೀಬೋಶೆತನ ಸೇವಕರಾದರು.
12 Tinha ele um filho menor chamado Mica. Todos os que pertenciam à casa de Siba estavam a serviço de Mifiboset.
13 ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
13 Este habitava em Jerusalém, pois comia todos os dias à mesa do rei, e era paralítico dos dois pés.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Samuel 9, comparar traduções ou montar um estudo — tudo direto pelo WhatsApp.