Ageu 2

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಈ ಸಂದೇಶವು ದೊರಕಿತು:
1 Então, em 17 de outubro desse mesmo ano, o S enhor transmitiu outra mensagem por meio do profeta Ageu:
2 “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.
2 “Diga ao governador de Judá, Zorobabel, filho de Sealtiel, e ao sumo sacerdote Josué, filho de Jeozadaque, e ao remanescente do povo:
3 ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
3 ‘Algum de vocês se lembra deste templo em sua antiga glória? Como ele lhes parece agora, em comparação com o anterior? Deve parecer insignificante!
4 ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.
4 Mas assim diz o S enhor : Seja forte, Zorobabel! Seja forte, sumo sacerdote Josué, filho de Jeozadaque! Sejam fortes, todos vocês que restam na terra! Mãos à obra, pois eu estou com vocês, diz o S enhor dos Exércitos.
5 ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’
5 Meu Espírito habita em seu meio, como prometi quando vocês saíram do Egito. Portanto, não tenham medo’.
6 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,
6 “Pois assim diz o S enhor dos Exércitos: Em pouco tempo sacudirei novamente os céus e a terra, os mares e a terra seca.
7 ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
7 Sacudirei todas as nações, e os tesouros das nações virão para este templo. Encherei este lugar de glória, diz o S enhor dos Exércitos.
8 ‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.
8 A prata e o ouro me pertencem, diz o S enhor dos Exércitos.
9 ‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
9 A glória deste novo templo será maior que a glória do antigo, diz o S enhor dos Exércitos, e neste lugar estabelecerei a paz. Eu, o S enhor dos Exércitos, falei!”.
10 ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.
10 Em 18 de dezembro do segundo ano do reinado de Dario, o S enhor enviou esta mensagem ao profeta Ageu:
11 “ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.
11 “Assim diz o S enhor dos Exércitos. Pergunte aos sacerdotes sobre a lei:
12 ‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’”
12 ‘Se alguém levar em sua roupa a carne consagrada de um sacrifício, e se, por acaso, a roupa tocar num pão, num ensopado, em vinho, em azeite ou em qualquer outro tipo de alimento, esse alimento também se tornará consagrado?’”. “Não”, responderam os sacerdotes.
13 ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?”
13 Em seguida, Ageu perguntou: “Se alguém se tornar cerimonialmente impuro ao tocar num cadáver e depois tocar num desses alimentos, o alimento ficará contaminado?”. “Sim”, responderam os sacerdotes.
14 ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.
14 Então Ageu disse: “É o que acontece com este povo e com esta nação, diz o S enhor . Tudo que fazem e oferecem é contaminado por seu pecado.
15 “‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.
15 Vejam o que estava acontecendo com vocês antes de começarem a lançar os alicerces do templo do S enhor .
16 ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
16 Quando esperavam uma colheita de vinte medidas, colhiam apenas dez. Quando esperavam tirar cinquenta medidas da prensa de uvas, tiravam apenas vinte.
17 ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”
17 Enviei ferrugem, mofo e granizo para destruir tudo que vocês trabalharam para produzir. E, no entanto, vocês não voltaram para mim, diz o S enhor .
18 ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.
18 “Pensem neste 18 de dezembro, o dia em que foram lançados os alicerces do templo do S enhor . Sim, pensem bem.
19 ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”
19 Eu lhes faço uma promessa agora, enquanto a semente ainda está no celeiro e suas videiras, figueiras, romãzeiras e oliveiras ainda não deram frutos. Mas, de hoje em diante, eu os abençoarei”.
20 ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:
20 Naquele mesmo dia, 18 de dezembro, o S enhor enviou mais uma mensagem a Ageu:
21 “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.
21 “Diga ao governador de Judá, Zorobabel, que estou prestes a sacudir os céus e a terra.
22 ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”
22 Derrubarei tronos e destruirei o poder de reinos estrangeiros. Derrubarei os carros de guerra e seus condutores; os cavalos cairão, e seus cavaleiros matarão uns aos outros.
23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.”
23 “Naquele dia, diz o S enhor dos Exércitos, honrarei você, meu servo Zorobabel, filho de Sealtiel. Farei que você seja como um anel de selar em meu dedo, diz o S enhor , pois eu o escolhi. Eu, o S enhor dos Exércitos, falei!”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ageu 2, comparar traduções ou montar um estudo — tudo direto pelo WhatsApp.