Apocalipse 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.
1 Então vi um novo céu e uma nova terra. O primeiro céu e a primeira terra desapareceram, e o mar sumiu.
2 ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.
2 E vi a Cidade Santa, a nova Jerusalém, que descia do céu. Ela vinha de Deus, enfeitada e preparada, vestida como uma noiva que vai se encontrar com o noivo.
3 ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
3 Ouvi uma voz forte que vinha do trono, a qual disse: — Agora a morada de Deus está entre os seres humanos! Deus vai morar com eles, e eles serão os povos dele. O próprio Deus estará com eles e será o Deus deles.
4 ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
4 Ele enxugará dos olhos deles todas as lágrimas. Não haverá mais morte, nem tristeza, nem choro, nem dor. As coisas velhas já passaram.
5 ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
5 Aquele que estava sentado no trono disse: — Agora faço novas todas as coisas! E também me disse: — Escreva isto, pois estas palavras são verdadeiras e merecem confiança.
6 ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.
6 E continuou: — Tudo está feito! Eu sou o
7 ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.
7 Aqueles que conseguirem a vitória receberão de mim este presente: eu serei o Deus deles, e eles serão meus filhos.
8 ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
8 Mas os covardes, os traidores, os que cometem pecados nojentos, os assassinos, os imorais, os que praticam a feitiçaria, os que adoram ídolos e todos os mentirosos, o lugar dessas pessoas é o lago onde queima o fogo e o enxofre, que é a segunda morte.
9 ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.
9 Um dos sete anjos que tinham as sete taças cheias das últimas sete pragas veio e me disse: — Venha, e eu lhe mostrarei a Noiva, a Esposa do Cordeiro.
10 ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.
10 Então o Espírito de Deus me dominou, e o anjo me levou para uma montanha grande e muito alta. Ele me mostrou Jerusalém, a Cidade Santa, que descia do céu e vinha de Deus,
11 ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.
11 brilhando com a glória de Deus. A cidade brilhava como uma pedra preciosa, como uma pedra de jaspe , clara como cristal.
12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.
12 Ela era cercada por uma muralha muito alta e grande, com doze portões, guardados por doze anjos. Nos portões estavam escritos os nomes das doze tribos do povo de Israel.
13 ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
13 Havia três portões de cada lado: três ao norte, três ao sul, três a leste e três a oeste.
14 ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.
14 A muralha da cidade estava construída sobre doze rochas, nas quais estavam escritos os nomes dos doze apóstolos do Cordeiro.
15 ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.
15 O anjo que falou comigo levava consigo uma vara de ouro para medir a cidade, os seus portões e a muralha.
16 ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.
16 A cidade era quadrada, pois o seu comprimento era igual à sua largura. O anjo mediu a cidade com a vara de ouro e viu que media dois mil e duzentos quilômetros. O seu comprimento, largura e altura eram iguais.
17 ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು. ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು.
17 O anjo mediu também a muralha e viu que tinha sessenta e quatro metros de largura, conforme as medidas comuns que o anjo estava usando.
18 ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.
18 A muralha era de jaspe, e a própria cidade era de ouro puro, claro como vidro.
19 ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,
19 As rochas do alicerce da muralha estavam enfeitadas de todo tipo de pedras preciosas. A primeira rocha estava enfeitada de jaspe; a segunda, de safira ; a terceira, de ágata ; a quarta, de esmeralda;
20 ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.
20 a quinta, de sardônica ; a sexta, de sárdio ; a sétima, de crisólito ; a oitava, de berilo ; a nona, de topázio ; a décima, de crisópraso ; a décima primeira, de jacinto ; e a décima segunda, de ametista .
21 ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.
21 Os doze portões são doze pérolas. E cada um desses portões era feito de uma só pérola. A rua principal era de ouro puro, claro como vidro.
22 ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.
22 Não vi nenhum templo na cidade, pois o seu templo é o Senhor Deus, o Todo-Poderoso, e o Cordeiro.
23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.
23 A cidade não precisa de sol nem de lua para a iluminarem, pois a glória de Deus brilha sobre ela, e o Cordeiro é o seu candelabro .
24 ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.
24 Os povos do mundo andarão na luz dela, e os reis da terra vão lhe trazer as suas riquezas.
25 ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.
25 Os portões da cidade estarão sempre abertos o dia inteiro. Não se fecharão porque ali não haverá noite.
26 ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ.
26 As nações vão trazer os seus tesouros e as suas riquezas para a cidade.
27 ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.
27 Porém nela não entrará nada que seja impuro nem ninguém que faça coisas vergonhosas ou que conte mentiras. Entrarão na cidade somente as pessoas que têm o seu nome escrito no Livro da Vida , o qual pertence ao Cordeiro.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Apocalipse 21, comparar traduções ou montar um estudo — tudo direto pelo WhatsApp.