Atos 10

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.
1 E havia em Cesareia um varão por nome Cornélio, centurião da coorte chamada Italiana,
2 ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.
2 piedoso e temente a Deus, com toda a sua casa, o qual fazia muitas esmolas ao povo e, de contínuo, orava a Deus.
3 ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.
3 Este, quase à hora nona do dia, viu claramente numa visão um anjo de Deus, que se dirigia para ele e dizia: Cornélio!
4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು.
4 Este, fixando os olhos nele e muito atemorizado, disse: Que é, Senhor? E o anjo lhe disse: As tuas orações e as tuas esmolas têm subido para memória diante de Deus.
5 ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ‘ಪೇತ್ರ’ ಎಂತಲೂ ಕರೆಯುತ್ತಾರೆ.
5 Agora, pois, envia homens a Jope e manda chamar a Simão, que tem por sobrenome Pedro.
6 ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು.
6 Este está com um certo Simão, curtidor, que tem a sua casa junto do mar. Ele te dirá o que deves fazer.
7 ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.
7 E, retirando-se o anjo que lhe falava, chamou dois dos seus criados e a um piedoso soldado dos que estavam ao seu serviço.
8 ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.
8 E, havendo-lhes contado tudo, os enviou a Jope.
9 ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.
9 E, no dia seguinte, indo eles seu caminho e estando já perto da cidade, subiu Pedro ao terraço para orar, quase à hora sexta.
10 ಪೇತ್ರನಿಗೆ ಹಸಿವೆಯಾಗಿ ಊಟಮಾಡಬೇಕೆನಿಸಿತು. ಅಲ್ಲಿ ಅವನಿಗಾಗಿ ಅಡಿಗೆ ಮಾಡುತ್ತಿದ್ದರು. ಇತ್ತ, ಪೇತ್ರನಿಗೊಂದು ದರ್ಶನವಾಯಿತು.
10 E, tendo fome, quis comer; e, enquanto lhe preparavam, sobreveio-lhe um arrebatamento de sentidos,
11 ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.
11 e viu o céu aberto e que descia um vaso, como se fosse um grande lençol atado pelas quatro pontas, vindo para a terra,
12 ಅದರಲ್ಲಿ ಎಲ್ಲಾ ಬಗೆಯ ಪ್ರಾಣಿಗಳಿದ್ದವು. ಅಂದರೆ ನಡೆದಾಡುವ ಪ್ರಾಣಿಗಳು, ಹರಿದಾಡುವ ಕ್ರಿಮಿಕೀಟಗಳು ಮತ್ತು ಹಾರಾಡುವ ಪಕ್ಷಿಗಳು ಇದ್ದವು.
12 no qual havia de todos os animais quadrúpedes, répteis da terra e aves do céu.
13 ಆಗ ವಾಣಿಯೊಂದು, “ಪೇತ್ರನೇ, ಎದ್ದೇಳು! ಕೊಯ್ದು ತಿನ್ನು” ಎಂದು ಹೇಳಿತು.
13 E foi-lhe dirigida uma voz: Levanta-te, Pedro! Mata e come.
14 ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.
14 Mas Pedro disse: De modo nenhum, Senhor, porque nunca comi coisa alguma comum e imunda.
15 ಆದರೆ ಆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ‘ಅಪವಿತ್ರ’ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು.
15 E segunda vez lhe disse a voz: Não faças tu comum ao que Deus purificou.
16 ಹೀಗೆ ಮೂರು ಸಾರಿ ಆಯಿತು. ಬಳಿಕ ಅವುಗಳನ್ನೆಲ್ಲ ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.
16 E aconteceu isto por três vezes; e o vaso tornou a recolher-se no céu.
17 ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು.
17 E, estando Pedro duvidando entre si acerca do que seria aquela visão que tinha visto, eis que os varões que foram enviados por Cornélio pararam à porta, perguntando pela casa de Simão.
18 “ಸೀಮೋನ್ ಪೇತ್ರನು ಇಲ್ಲಿ ವಾಸವಾಗಿರುವನೇ?” ಎಂದು ಕೇಳಿದರು.
18 E, chamando, perguntaram se Simão, que tinha por sobrenome Pedro, morava ali.
19 ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.
19 E, pensando Pedro naquela visão, disse-lhe o Espírito: Eis que três varões te buscam.
20 ನೀನೆದ್ದು ಕೆಳಗಿಳಿದು ಅವರೊಂದಿಗೆ ಹೋಗು. ಯಾವ ಪ್ರಶ್ನೆಗಳನ್ನೂ ಕೇಳಬೇಡ. ನಾನೇ ಅವರನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ” ಎಂದು ಹೇಳಿದನು.
20 Levanta-te, pois, e desce, e vai com eles, não duvidando; porque eu os enviei.
21 ಆದ್ದರಿಂದ ಪೇತ್ರನು ಕೆಳಗಿಳಿದು ಆ ಜನರ ಬಳಿಗೆ ಹೋಗಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ, ನೀವು ಇಲ್ಲಿಗೇಕೆ ಬಂದಿರಿ?” ಎಂದು ಕೇಳಿದನು.
21 E, descendo Pedro para junto dos varões que lhe foram enviados por Cornélio, disse: Sou eu a quem procurais; qual é a causa por que estais aqui?
22 ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.
22 E eles disseram: Cornélio, o centurião, varão justo e temente a Deus e que tem bom testemunho de toda a nação dos judeus, foi avisado por um santo anjo para que te chamasse a sua casa e ouvisse as tuas palavras.
23 ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು.
23 Então, chamando-os para dentro, os recebeu em casa. No dia seguinte, foi Pedro com eles, e foram com ele alguns irmãos de Jope.
24 ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.
24 E, no dia imediato, chegaram a Cesareia. E Cornélio os estava esperando, tendo já convidado os seus parentes e amigos mais íntimos.
25 ಪೇತ್ರನು ಮನೆಯನ್ನು ಪ್ರವೇಶಿಸುತ್ತಿರಲು ಕೊರ್ನೇಲಿಯನು ಅವನನ್ನು ಎದುರುಗೊಂಡನು. ಕೊರ್ನೇಲಿಯನು ಪೇತ್ರನ ಪಾದಕ್ಕೆ ಅಡ್ಡಬಿದ್ದು ನಮಸ್ಕಾರ ಮಾಡಿದನು.
25 E aconteceu que, entrando Pedro, saiu Cornélio a recebê-lo e, prostrando-se a seus pés, o adorou.
26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.
26 Mas Pedro o levantou, dizendo: Levanta-te, que eu também sou homem.
27 ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು.
27 E, falando com ele, entrou e achou muitos que ali se haviam ajuntado.
28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.
28 E disse-lhes: Vós bem sabeis que não é lícito a um varão judeu ajuntar-se ou chegar-se a estrangeiros; mas Deus mostrou-me que a nenhum homem chame comum ou imundo.
29 ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು.
29 Pelo que, sendo chamado, vim sem contradizer. Pergunto, pois: por que razão mandastes chamar-me?
30 ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.
30 E disse Cornélio: Há quatro dias estava eu em jejum até esta hora, orando em minha casa à hora nona.
31 ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
31 E eis que diante de mim se apresentou um varão com vestes resplandecentes e disse: Cornélio, a tua oração foi ouvida, e as tuas esmolas estão em memória diante de Deus.
32 ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.
32 Envia, pois, a Jope e manda chamar Simão, o que tem por sobrenome Pedro; este está em casa de Simão, curtidor, junto do mar, e ele, vindo, te falará.
33 ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.
33 E logo mandei chamar-te, e bem fizeste em vir. Agora, pois, estamos todos presentes diante de Deus, para ouvir tudo quanto por Deus te é mandado.
34 ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.
34 E, abrindo Pedro a boca, disse: Reconheço, por verdade, que Deus não faz acepção de pessoas;
35 ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.
35 mas que lhe é agradável aquele que, em qualquer nação, o teme e faz o que é justo.
36 ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
36 A palavra que ele enviou aos filhos de Israel, anunciando a paz por Jesus Cristo (este é o Senhor de todos),
37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.
37 esta palavra, vós bem sabeis, veio por toda a Judeia, começando pela Galileia, depois do batismo que João pregou;
38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.
38 como Deus ungiu a Jesus de Nazaré com o Espírito Santo e com virtude; o qual andou fazendo o bem e curando a todos os oprimidos do diabo, porque Deus era com ele.
39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
39 E nós somos testemunhas de todas as coisas que fez, tanto na terra da Judeia como em Jerusalém; ao qual mataram, pendurando-o num madeiro.
40 ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು.
40 A este ressuscitou Deus ao terceiro dia e fez que se manifestasse,
41 ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.
41 não a todo o povo, mas às testemunhas que Deus antes ordenara; a nós que comemos e bebemos juntamente com ele, depois que ressuscitou dos mortos.
42 “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.
42 E nos mandou pregar ao povo e testificar que ele é o que por Deus foi constituído juiz dos vivos e dos mortos.
43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
43 A este dão testemunho todos os profetas, de que todos os que nele creem receberão o perdão dos pecados pelo seu nome.
44 ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.
44 E, dizendo Pedro ainda estas palavras, caiu o Espírito Santo sobre todos os que ouviam a palavra.
45 ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.
45 E os fiéis que eram da circuncisão, todos quantos tinham vindo com Pedro, maravilharam-se de que o dom do Espírito Santo se derramasse também sobre os gentios.
46 ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,
46 Porque os ouviam falar em línguas e magnificar a Deus.
47 “ನೀರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳದಂತೆ ನಾವು ಈ ಜನರಿಗೆ ಅಡ್ಡಿಮಾಡಲು ಸಾಧ್ಯವಿಲ್ಲ. ನಾವು ಹೊಂದಿಕೊಂಡಂತೆ ಇವರೂ ಪವಿತ್ರಾತ್ಮನನ್ನು ಹೊಂದಿಕೊಂಡರು!” ಎಂದು ಹೇಳಿ,
47 Respondeu, então, Pedro: Pode alguém, porventura, recusar a água, para que não sejam batizados estes que também receberam, como nós, o Espírito Santo?
48 ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು.
48 E mandou que fossem batizados em nome do Senhor. Então, rogaram-lhe que ficasse com eles por alguns dias.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 10, comparar traduções ou montar um estudo — tudo direto pelo WhatsApp.