Atos 13

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
1 Na igreja que estava em Antioquia havia alguns profetas e doutores, a saber: Barnabé, e Simeão, chamado Níger, e Lúcio, cireneu, e Manaém, que fora criado com Herodes, o tetrarca, e Saulo.
2 ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
2 E, servindo eles ao Senhor e jejuando, disse o Espírito Santo: Apartai-me a Barnabé e a Saulo para a obra a que os tenho chamado.
3 ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.
3 Então, jejuando, e orando, e pondo sobre eles as mãos, os despediram.
4 ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.
4 E assim estes, enviados pelo Espírito Santo, desceram a Selêucia e dali navegaram para Chipre.
5 ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
5 E, chegados a Salamina, anunciavam a palavra de Deus nas sinagogas dos judeus; e tinham também a João como cooperador.
6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.
6 E, havendo atravessado a ilha até Pafos, acharam um certo judeu, mágico, falso profeta, chamado Barjesus,
7 ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.
7 o qual estava com o procônsul Sérgio Paulo, varão prudente. Este, chamando a si Barnabé e Saulo, procurava muito ouvir a palavra de Deus.
8 ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.
8 Mas resistia-lhes Elimas, o encantador (porque assim se interpreta o seu nome), procurando apartar da fé o procônsul.
9 ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ,
9 Todavia, Saulo, que também se chama Paulo, cheio do Espírito Santo e fixando os olhos nele, disse:
10 ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!
10 Ó filho do diabo, cheio de todo o engano e de toda a malícia, inimigo de toda a justiça, não cessarás de perturbar os retos caminhos do Senhor?
11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು.
11 Eis aí, pois, agora, contra ti a mão do Senhor, e ficarás cego, sem ver o sol por algum tempo. No mesmo instante, a escuridão e as trevas caíram sobre ele, e, andando à roda, buscava a quem o guiasse pela mão.
12 ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.
12 Então, o procônsul, vendo o que havia acontecido, creu, maravilhado da doutrina do Senhor.
13 ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.
13 E, partindo de Pafos, Paulo e os que estavam com ele chegaram a Perge, da Panfília. Mas João, apartando-se deles, voltou para Jerusalém.
14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು.
14 E eles, saindo de Perge, chegaram a Antioquia da Pisídia e, entrando na sinagoga, num dia de sábado, assentaram-se.
15 ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
15 E, depois da lição da Lei e dos Profetas, lhes mandaram dizer os principais da sinagoga: Varões irmãos, se tendes alguma palavra de consolação para o povo, falai.
16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!
16 E, levantando-se Paulo e pedindo silêncio com a mão, disse: Varões israelitas e os que temeis a Deus, ouvi:
17 ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.
17 O Deus deste povo de Israel escolheu a nossos pais e exaltou o povo, sendo eles estrangeiros na terra do Egito; e com braço poderoso o tirou dela;
18 ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.
18 e suportou os seus costumes no deserto por espaço de quase quarenta anos.
19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.
19 E, destruindo a sete nações na terra de Canaã, deu-lhes por sorte a terra deles.
20 ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು.
20 E, depois disto, por quase quatrocentos e cinquenta anos, lhes deu juízes, até ao profeta Samuel.
21 ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.
21 E, depois, pediram um rei, e Deus lhes deu, por quarenta anos, a Saul, filho de Quis, varão da tribo de Benjamim.
22 ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
22 E, quando este foi retirado, lhes levantou como rei a Davi, ao qual também deu testemunho e disse: Achei a Davi, filho de Jessé, varão conforme o meu coração, que executará toda a minha vontade.
23 “ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.
23 Da descendência deste, conforme a promessa, levantou Deus a Jesus para Salvador de Israel,
24 ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.
24 tendo primeiramente João, antes da vinda dele, pregado a todo o povo de Israel o batismo do arrependimento.
25 ‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
25 Mas João, quando completava a carreira, disse: Quem pensais vós que eu sou? Eu não sou o Cristo ; mas eis que após mim vem aquele a quem não sou digno de desatar as sandálias dos pés.
26 “ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.
26 Varões irmãos, filhos da geração de Abraão, e os que dentre vós temem a Deus, a vós vos é enviada a palavra desta salvação.
27 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
27 Por não terem conhecido a este, os que habitavam em Jerusalém e os seus príncipes, condenaram-no, cumprindo assim as vozes dos profetas que se leem todos os sábados.
28 ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
28 E, embora não achassem alguma causa de morte, pediram a Pilatos que ele fosse morto.
29 “ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
29 E, havendo eles cumprido todas as coisas que dele estavam escritas, tirando- o do madeiro, o puseram na sepultura.
30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!
30 Mas Deus o ressuscitou dos mortos.
31 ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.
31 E ele, por muitos dias, foi visto pelos que subiram com ele da Galileia a Jerusalém, e são suas testemunhas para com o povo.
32 “ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.
32 E nós vos anunciamos que a promessa que foi feita aos pais, Deus a cumpriu a nós, seus filhos, ressuscitando a Jesus,
33 ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ:
33 como também está escrito no Salmo segundo: Meu filho és tu; hoje te gerei.
34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ:
34 E que o ressuscitaria dos mortos, para nunca mais tornar à corrupção, disse- o assim: As santas e fiéis bênçãos de Davi vos darei.
35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ:
35 Pelo que também em outro Salmo diz: Não permitirás que o teu Santo veja corrupção.
36 “ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!
36 Porque, na verdade, tendo Davi, no seu tempo, servido conforme a vontade de Deus, dormiu, e foi posto junto de seus pais, e viu a corrupção.
37 ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ.
37 Mas aquele a quem Deus ressuscitou nenhuma corrupção viu.
38 — ausente —
38 Seja-vos, pois, notório, varões irmãos, que por este se vos anuncia a remissão dos pecados.
39 — ausente —
39 E de tudo o que, pela lei de Moisés, não pudestes ser justificados, por ele é justificado todo aquele que crê.
40 ಆದ್ದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:
40 Vede, pois, que não venha sobre vós o que está dito nos profetas:
41 ‘ಅಪಹಾಸ್ಯ ಮಾಡುವವರೇ,
41 Vede, ó desprezadores, e espantai-vos e desaparecei; porque opero uma obra em vossos dias, obra tal que não crereis se alguém vo-la contar.
42 ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.
42 E, saídos os judeus da sinagoga, os gentios rogaram que no sábado seguinte lhes fossem ditas as mesmas coisas.
43 ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
43 E, despedida a sinagoga, muitos dos judeus e dos prosélitos religiosos seguiram Paulo e Barnabé, os quais, falando-lhes, os exortavam a que permanecessem na graça de Deus.
44 ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.
44 E, no sábado seguinte, ajuntou-se quase toda a cidade a ouvir a palavra de Deus.
45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
45 Então, os judeus, vendo a multidão, encheram-se de inveja e, blasfemando, contradiziam o que Paulo dizia.
46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!
46 Mas Paulo e Barnabé, usando de ousadia, disseram: Era mister que a vós se vos pregasse primeiro a palavra de Deus; mas, visto que a rejeitais, e vos não julgais dignos da vida eterna, eis que nos voltamos para os gentios.
47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ:
47 Porque o Senhor assim no-lo mandou: Eu te pus para luz dos gentios, para que sejas de salvação até aos confins da terra.
48 ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
48 E os gentios, ouvindo isto, alegraram-se e glorificavam a palavra do Senhor, e creram todos quantos estavam ordenados para a vida eterna.
49 ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು.
49 E a palavra do Senhor se divulgava por toda aquela província.
50 ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.
50 Mas os judeus incitaram algumas mulheres religiosas e honestas, e os principais da cidade, e levantaram perseguição contra Paulo e Barnabé, e os lançaram fora dos seus limites.
51 ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.
51 Sacudindo, porém, contra eles o pó dos pés, partiram para Icônio.
52 ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.
52 E os discípulos estavam cheios de alegria e do Espírito Santo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 13, comparar traduções ou montar um estudo — tudo direto pelo WhatsApp.