Atos 14
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.
1 Em Icônio, Paulo e Barnabé também foram à sinagoga judaica e falaram de tal modo que muitos creram, tanto judeus como gentios.
2 ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.
2 Alguns dos judeus que não creram, porém, incitaram os gentios e envenenaram a mente deles contra Paulo e Barnabé.
3 ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.
3 Ainda assim, os apóstolos passaram bastante tempo ali, falando corajosamente da graça do Senhor, que confirmava a mensagem deles concedendo-lhes poder para realizar sinais e maravilhas.
4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.
4 Com isso, o povo da cidade ficou dividido: alguns tomaram partido dos judeus, e outros, dos apóstolos.
5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.
5 Então um grupo de gentios, judeus e seus líderes resolveu atacá-los e apedrejá-los.
6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.
6 Quando os apóstolos souberam disso, fugiram para a região da Licaônia, para as cidades de Listra e Derbe e seus arredores.
7 ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು.
7 E ali anunciaram as boas-novas.
8 ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.
8 Enquanto estavam em Listra, Paulo e Barnabé encontraram um homem com os pés aleijados. Sofria desse problema desde o nascimento e, portanto, nunca tinha andado. Estava sentado
9 ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,
9 e ouvia Paulo pregar. Paulo olhou diretamente para ele e, vendo que ele tinha fé para ser curado,
10 ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.
10 disse em alta voz: “Levante-se!”. O homem se levantou de um salto e começou a andar.
11 ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
11 A multidão, vendo o que Paulo havia feito, gritou no dialeto local: “Os deuses vieram até nós em forma de homens!”.
12 ಜನರು ಬಾರ್ನಬನನ್ನು “ಜೆಯುಸ್” ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” ದೇವರೆಂದೂ ಕರೆದರು.
12 Concluíram que Barnabé era o deus grego Zeus, e Paulo, o deus Hermes, pois era ele quem proclamava a mensagem.
13 ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು.
13 O sacerdote do templo de Zeus, que ficava na entrada da cidade, trouxe touros e coroas de flores até as portas da cidade, pois ele e a multidão queriam oferecer sacrifícios aos apóstolos.
14 ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:
14 Quando Barnabé e Paulo ouviram o que estava acontecendo, rasgaram as roupas e correram para o meio do povo, gritando:
15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
15 “Amigos, por que vocês estão fazendo isso? Somos homens como vocês! Viemos lhes anunciar as boas-novas, para que abandonem estas coisas sem valor e se voltem para o Deus vivo, que fez os céus e a terra, o mar e tudo que neles há.
16 “ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.
16 No passado, ele permitiu que as nações seguissem seus próprios caminhos,
17 ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”
17 mas nunca as deixou sem evidências de sua existência e de sua bondade. Ele lhes concede chuvas e boas colheitas, e também alimento e um coração alegre”.
18 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು.
18 Apesar dessas palavras, Paulo e Barnabé tiveram dificuldade para impedir que o povo lhes oferecesse sacrifícios.
19 ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.
19 Então alguns judeus chegaram de Antioquia e Icônio e instigaram a multidão. Apedrejaram Paulo e o arrastaram para fora da cidade, pensando que ele estivesse morto.
20 ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು.
20 No entanto, quando os discípulos o rodearam, ele se levantou e entrou novamente na cidade. No dia seguinte, partiu com Barnabé para Derbe.
21 ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,
21 Depois de terem anunciado as boas-novas em Derbe e feito muitos discípulos, Paulo e Barnabé voltaram a Listra, Icônio e Antioquia da Pisídia,
22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.
22 onde fortaleceram os discípulos. Eles os encorajaram a permanecer na fé, lembrando-os de que é necessário passar por muitos sofrimentos até entrar no reino de Deus.
23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.
23 Paulo e Barnabé também escolheram presbíteros em cada igreja e, com orações e jejuns, os entregaram aos cuidados do Senhor, em quem haviam crido.
24 ಪೌಲ ಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು.
24 Então viajaram de volta pela Pisídia até a Panfília.
25 ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು.
25 Pregaram a palavra em Perge e desceram para Atália.
26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.
26 Por fim, voltaram de navio para Antioquia, onde sua viagem tinha começado e onde haviam sido entregues à graça de Deus para realizar o trabalho que agora completavam.
27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.
27 Quando chegaram a Antioquia, reuniram a igreja e relataram tudo que Deus tinha feito por meio deles e como tinha aberto a porta da fé também para os gentios.
28 ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.
28 E permaneceram ali com os discípulos por muito tempo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 14, comparar traduções ou montar um estudo — tudo direto pelo WhatsApp.