Atos 15
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.
1 Alguns homens desceram da Judéia para Antioquia e passaram a ensinar aos irmãos: "Se vocês não forem circuncidados conforme o costume ensinado por Moisés, não poderão ser salvos".
2 ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
2 Isso levou Paulo e Barnabé a uma grande contenda e discussão com eles. Assim, Paulo e Barnabé foram designados, juntamente com outros, para irem a Jerusalém tratar dessa questão com os apóstolos e com os presbíteros.
3 ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.
3 A igreja os enviou e, ao passarem pela Fenícia e por Samaria, contaram como os gentios tinham se convertido; essas notícias alegravam muito a todos os irmãos.
4 ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.
4 Chegando a Jerusalém, foram bem recebidos pela igreja, pelos apóstolos e pelos presbíteros, a quem relataram tudo o que Deus tinha feito por meio deles.
5 ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.
5 Então se levantaram alguns do partido religioso dos fariseus que haviam crido e disseram: "É necessário circuncidá-los e exigir deles que obedeçam à lei de Moisés".
6 ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.
6 Os apóstolos e os presbíteros se reuniram para considerar essa questão.
7 ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.
7 Depois de muita discussão, Pedro levantou-se e dirigiu-se a eles: "Irmãos, vocês sabem que há muito tempo Deus me escolheu dentre vocês para que os gentios ouvissem de meus lábios a mensagem do evangelho e cressem.
8 ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.
8 Deus, que conhece os corações, demonstrou que os aceitou, dando-lhes o Espírito Santo, como antes nos tinha concedido.
9 ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.
9 Ele não fez distinção alguma entre nós e eles, visto que purificou os seus corações pela fé.
10 ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!
10 Então, por que agora vocês estão querendo tentar a Deus, impondo sobre os discípulos um jugo que nem nós nem nossos antepassados conseguimos suportar?
11 ಆದ್ದರಿಂದ ನಾವಾಗಲಿ ಇವರಾಗಲಿ ರಕ್ಷಣೆ ಹೊಂದುವುದು ಪ್ರಭುವಾದ ಯೇಸುವಿನ ಕೃಪೆಯಿಂದಲೇ ಎಂದು ನಾವು ನಂಬುತ್ತೇವೆ!” ಎಂದನು.
11 De modo nenhum! Cremos que somos salvos pela graça de nosso Senhor Jesus, assim como eles também".
12 ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.
12 Toda a assembléia ficou em silêncio, enquanto ouvia Barnabé e Paulo falando de todos os sinais e maravilhas que, por meio deles, Deus fizera entre os gentios.
13 ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ.
13 Quando terminaram de falar, Tiago tomou a palavra e disse: "Irmãos, ouçam-me.
14 ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.
14 Simão nos expôs como Deus, no princípio, voltou-se para os gentios a fim de reunir dentre as nações um povo para o seu nome.
15 ಪ್ರವಾದಿಗಳ ಮಾತುಗಳು ಸಹ ಇದಕ್ಕೆ ಸಾಮರಸ್ಯವಾಗಿವೆ:
15 Concordam com isso as palavras dos profetas, conforme está escrito:
16 ‘ಇದಾದನಂತರ ನಾನು ಹಿಂತಿರುಗುವೆನು.
16 ‘Depois disso voltarei e reconstruirei a tenda caída de Davi. Reedificarei as suas ruínas, e a restaurarei,
17 ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು.
17 para que o restante dos homens busque o Senhor, e todos os gentios sobre os quais tem sido invocado o meu nome, diz o Senhor, que faz estas coisas’
18 ‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’
18 conhecidas desde os tempos antigos.
19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.
19 "Portanto, julgo que não devemos pôr dificuldades aos gentios que estão se convertendo a Deus.
20 ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ:
20 Pelo contrário, devemos escrever a eles, dizendo-lhes que se abstenham de comida contaminada pelos ídolos, da imoralidade sexual, da carne de animais estrangulados e do sangue.
21 ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
21 Pois, desde os tempos antigos, Moisés é pregado em todas as cidades, sendo lido nas sinagogas todos os sábados".
22 ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.
22 Então os apóstolos e os presbíteros, com toda a igreja, decidiram escolher alguns dentre eles e enviá-los a Antioquia com Paulo e Barnabé. Escolheram Judas, chamado Barsabás, e Silas, dois líderes entre os irmãos.
23 ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು:
23 Com eles enviaram a seguinte carta: Os irmãos apóstolos e presbíteros, aos cristãos gentios que estão em Antioquia, na Síria e na Cilícia: Saudações.
24 ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
24 Soubemos que alguns saíram de nosso meio, sem nossa autorização, e os perturbaram, transtornando suas mentes com o que disseram.
25 ಆದ್ದರಿಂದ ನಾವೆಲ್ಲರೂ ಕೆಲವರನ್ನು ಸರ್ವಾನುಮತದಿಂದ ಆರಿಸಿ ನಿಮ್ಮ ಬಳಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಿಯ ಸಹೋದರರಾದ ಬಾರ್ನಬ ಮತ್ತು ಪೌಲರೊಂದಿಗೆ ಅವರು ಬರುತ್ತಿದ್ದಾರೆ.
25 Assim, concordamos todos em escolher alguns homens e enviá-los a vocês com nossos amados irmãos Paulo e Barnabé,
26 ಬಾರ್ನಬನು ಮತ್ತು ಪೌಲನು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಸೇವೆಗಾಗಿ ತಮ್ಮ ಜೀವಿತಗಳನ್ನೇ ಕೊಟ್ಟಿದ್ದಾರೆ.
26 homens que têm arriscado a vida pelo nome de nosso Senhor Jesus Cristo.
27 ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.
27 Portanto, estamos enviando Judas e Silas para confirmarem verbalmente o que estamos escrevendo.
28 ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:
28 Pareceu bem ao Espírito Santo e a nós não impor a vocês nada além das seguintes exigências necessárias:
29 ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ.
29 Abster-se de comida sacrificada aos ídolos, do sangue, da carne de animais estrangulados e da imoralidade sexual. Vocês farão bem em evitar essas coisas. Que tudo lhes vá bem.
30 ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.
30 Uma vez despedidos, os homens desceram para Antioquia, onde reuniram a igreja e entregaram a carta.
31 ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು.
31 Os irmãos a leram e se alegraram com a sua animadora mensagem.
32 ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.
32 Judas e Silas, que eram profetas, encorajaram e fortaleceram os irmãos com muitas palavras.
33 ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು.
33 Tendo passado algum tempo ali, foram despedidos pelos irmãos com a bênção da paz para voltarem aos que os tinham enviado.
34 — ausente —
34 Mas Silas decidiu ficar ali.
35 ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.
35 Mas Paulo e Barnabé permaneceram em Antioquia, onde, com muitos outros ensinavam e pregavam a palavra do Senhor.
36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.
36 Algum tempo depois, Paulo disse a Barnabé: "Voltemos para visitar os irmãos em todas as cidades onde pregamos a palavra do Senhor, para ver como estão indo".
37 ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಬಾರ್ನಬನ ಇಷ್ಟವಾಗಿತ್ತು.
37 Barnabé queria levar João, também chamado Marcos.
38 ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.
38 Mas Paulo não achava prudente levá-lo, pois ele, abandonando-os na Panfília, não permanecera com eles no trabalho.
39 ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.
39 Tiveram um desentendimento tão sério que se separaram. Barnabé, levando consigo Marcos, navegou para Chipre,
40 ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.
40 mas Paulo escolheu Silas e partiu, encomendado pelos irmãos à graça do Senhor.
41 ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.
41 Passou, então, pela Síria e pela Cilícia, fortalecendo as igrejas.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 15, comparar traduções ou montar um estudo — tudo direto pelo WhatsApp.