Atos 23

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.
1 Paulo, fitando os olhos nos membros do conselho, disse: Irmãos, eu tenho procedido diante de Deus com toda a boa consciência ate o dia de hoje...
2 ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.
2 Mas Ananias, sumo sacerdote, mandou aos que estavam ao seu lado que lhe batessem na boca.
3 ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
3 Então Paulo lhe disse: Deus te ferirá também a ti, hipócrita! Tu estás aí assentado para julgar-me segundo a lei, e contra a lei mandas que eu seja ferido?
4 ಪೌಲನ ಸಮೀಪದಲ್ಲಿ ನಿಂತಿದ್ದ ಜನರು ಅವನಿಗೆ, “ದೇವರ ಪ್ರಧಾನಯಾಜಕನಿಗೆ ನೀನು ಈ ರೀತಿ ಮಾತಾಡಕೂಡದು! ನೀನು ಅವನಿಗೆ ಅವಮಾನ ಮಾಡುತ್ತಿರುವೆ!” ಎಂದು ಹೇಳಿದರು.
4 Os assistentes disseram: Tu injurias o sumo sacerdote de Deus.
5 ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
5 Respondeu Paulo: Não sabia, irmãos, que é o sumo sacerdote. Pois está escrito: Não falarás mal do príncipe do teu povo {Ex 22,28}.
6 ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.
6 Paulo sabia que uma parte do Sinédrio era de saduceus e a outra de fariseus e disse em alta voz.: Irmãos, eu sou fariseu, filho de fariseus. Por causa da minha esperança na ressurreição dos mortos é que sou julgado.
7 ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.
7 Ao dizer ele estas palavras, houve uma discussão entre os fariseus e os saduceus, e dividiu-se a assembléia.
8 (ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)
8 {Pois os saduceus afirmam não haver ressurreição, nem anjos, nem espíritos, mas os fariseus admitem uma e outra coisa.}
9 ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.
9 Originou-se, então, grande vozearia. Levantaram-se alguns escribas dos fariseus e contestaram ruidosamente: Não achamos mal algum neste homem. {Quem sabe} se não lhe falou algum espírito ou um anjo...
10 ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.
10 A discussão fazia-se sempre mais violenta. O tribuno temeu que Paulo fosse despedaçado por eles e mandou aos soldados que descessem, o tirassem do meio deles e o levassem para a cidadela.
11 ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.
11 Na noite seguinte, apareceu-lhe o Senhor e lhe disse: Coragem! Deste testemunho de mim em Jerusalém, assim importa também que o dês em Roma.
12 ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.
12 Quando amanheceu, coligaram-se alguns judeus e juraram com imprecações não comer nem beber nada, enquanto não matassem Paulo.
13 ಹೀಗೆ ಸುಮಾರು ನಲವತ್ತಕ್ಕಿಂತಲೂ ಹೆಚ್ಚು ಮಂದಿ ಹರಕೆ ಮಾಡಿಕೊಂಡಿದ್ದರು.
13 Eram mais de quarenta as pessoas que fizeram essa conjuração.
14 ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
14 Foram apresentar-se aos sumos sacerdotes e aos cidadãos, dizendo: Juramos solenemente nada comer enquanto não matarmos Paulo.
15 ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
15 Vós, pois, ide com o conselho requerer do tribuno que o conduza à vossa presença, como se houvésseis de investigar com mais precisão a sua causa; e nós estamos prontos para matá-lo durante o trajeto.
16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.
16 Mas um filho da irmã de Paulo, inteirado da cilada, dirigiu-se à cidadela e o comunicou a Paulo.
17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.
17 Este chamou a si um dos centuriões e disse-lhe: Leva este moço ao tribuno, porque tem alguma coisa a lhe transmitir.
18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
18 Ele o introduziu à presença do tribuno e lhe disse: O preso Paulo rogou-me que trouxesse este moço à tua presença, porque tem alguma coisa a dizer-te.
19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
19 O tribuno, tomando-o pela mão, retirou-se com ele à parte e perguntou: Que tens a dizer-me?
20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.
20 Respondeu-lhe ele: Os judeus têm combinado rogar-te amanhã que apresentes Paulo ao Grande Conselho, como se houvessem de inquirir dele alguma coisa com mais precisão.
21 ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
21 Mas tu não creias, porque mais de quarenta homens dentre eles lhe armam traição. Juraram solenemente nada comer, nem beber, enquanto não o matarem. Eles já estão preparados e só esperam a tua permissão.
22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
22 Então o tribuno despediu o moço, ordenando-lhe que a ninguém dissesse que o havia avisado.
23 ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.
23 Depois disso, chamou ele dois centuriões e disse-lhes: Preparai duzentos soldados, setenta cavaleiros e duzentos lanceiros para irem a Cesaréia à terceira hora da noite.
24 ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.
24 Aprontai também cavalgaduras para Paulo, que tendes de levar com toda a segurança ao governador Félix.
25 ಸೇನಾಧಿಪತಿಯು ಒಂದು ಪತ್ರವನ್ನೂ ಬರೆದನು. ಅದರಲ್ಲಿ ಹೀಗೆ ತಿಳಿಸಲಾಗಿತ್ತು:
25 E ele escreveu uma carta nestes termos:
26 ಕ್ಲಾಡಿಯ ಲೂಸಿಯನಿಂದ ಮಹಾರಾಜಶ್ರೀಗಳಾದ ರಾಜ್ಯಪಾಲ ಫೇಲಿಕ್ಸನಿಗೆ,
26 Cláudio Lísias ao excelentíssimo governador Félix, saúde!
27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.
27 Esse homem foi preso pelos judeus e estava a ponto de ser morto por eles, quando eu, sobrevindo com a tropa, o livrei, ao saber que era romano.
28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.
28 Então, querendo saber a causa por que o acusavam, levei-o ao Grande Conselho.
29 ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
29 Soube que era acusado sobre questões da lei deles, sem haver nele delito algum que merecesse morte ou prisão.
30 ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
30 Mas, como tivesse chegado a mim a notícia das traições que maquinavam contra ele, envio-o com urgência a ti, intimando também aos acusadores que recorram a ti. Adeus.
31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು.
31 Os soldados, conforme lhes fora ordenado, tomaram Paulo e o levaram de noite a Antipátride.
32 ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.
32 No dia seguinte, voltaram para a guarnição, deixando que os soldados da cavalaria o escoltassem.
33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
33 À sua chegada a Cesaréia, entregaram ao governador a carta e apresentaram-lhe também Paulo.
34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.
34 Ele, depois de lê-la e perguntar de que província ele era, sabendo que era da Cilícia, disse:
35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
35 Ouvir-te-ei quando chegarem teus acusadores. Mandou, então, que Paulo fosse guardado no pretório de Herodes.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 23, comparar traduções ou montar um estudo — tudo direto pelo WhatsApp.