Atos 25
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು.
1 Três dias depois de sua chegada à província, Festo subiu de Cesaréia a Jerusalém.
2 ಮಹಾಯಾಜಕರು ಮತ್ತು ಪ್ರಮುಖ ಯೆಹೂದ್ಯ ನಾಯಕರು ಫೆಸ್ತನ ಎದುರಿನಲ್ಲಿ ಪೌಲನಿಗೆ ವಿರೋಧವಾಗಿ ದೋಷಾರೋಪಣೆಗಳನ್ನು ಹೇಳಿದರು.
2 Aí os sumos sacerdotes e os judeus mais notáveis foram ter com ele, acusando Paulo, e rogaram-lhe,
3 ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.
3 com insistência, como um favor, que o mandasse de volta para Jerusalém. É que queriam armar-lhe uma emboscada para o assassinarem no caminho.
4 ಆದರೆ ಫೆಸ್ತನು, “ಇಲ್ಲ! ಪೌಲನನ್ನು ಸೆಜರೇಯದಲ್ಲೇ ಇರಿಸಲಾಗುವುದು. ನಾನೇ ಅಲ್ಲಿಗೆ ಬೇಗ ಹೋಗಲಿದ್ದೇನೆ.
4 Festo, porém, respondeu que Paulo se achava detido em Cesaréia e que ele mesmo partiria para lá dentro de poucos dias. E acrescentou:
5 ನಿಮ್ಮ ನಾಯಕರಲ್ಲಿ ಕೆಲವರು ನನ್ನೊಂದಿಗೆ ಬರಲಿ. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ ಅವನ ಮೇಲೆ ಸೆಜರೇಯದಲ್ಲೇ ಅವರು ದೋಷಾರೋಪಣೆ ಮಾಡಲಿ” ಎಂದು ಉತ್ತರಕೊಟ್ಟನು.
5 Portanto, os que dentre vós são de prestígio desçam comigo; e se houver algum crime nesse homem, acusem-no.
6 ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.
6 Demorou-se entre eles cerca de oito ou dez dias e desceu a Cesaréia. No dia seguinte, sentou-se no tribunal e citou Paulo.
7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.
7 Assim que este compareceu, rodearam-no os judeus que tinham descido de Jerusalém e acusaram-no de muitos e graves delitos que não podiam provar.
8 ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.
8 Paulo alegava em sua defesa: Em nada tenho pecado contra a lei dos judeus, nem contra o templo, nem contra César!
9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.
9 Mas Festo, querendo agradar aos judeus, disse a Paulo: Queres subir a Jerusalém e ser julgado ali diante de mim?
10 — ausente —
10 Paulo, porém, disse: Estou perante o tribunal de César. É lá que devo ser julgado. Não fiz mal algum aos judeus, como bem sabes.
11 — ausente —
11 Se lhes tenho feito algum mal ou coisa digna de morte, não recuso morrer. Mas, se nada há daquilo de que estes me acusam, ninguém tem o direito de entregar-me a eles. Apelo para César!
12 ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.
12 Então Festo conferenciou com os seus assessores e respondeu: Para César apelaste, a César irás.
13 ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.
13 Alguns dias depois, o rei Agripa e Berenice desceram a Cesaréia para saudar Festo.
14 ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.
14 Como se demorassem ali muitos dias, Festo expôs ao rei o caso de Paulo: Félix deixou preso aqui um certo homem.
15 ನಾನು ಜೆರುಸಲೇಮಿಗೆ ಹೋಗಿದ್ದಾಗ ಮಹಾಯಾಜಕರು ಮತ್ತು ಯೆಹೂದ್ಯ ಹಿರಿಯ ನಾಯಕರು ಅವನಿಗೆ ವಿರೋಧವಾಗಿ ದೋಷಾರೋಪಣೆ ಮಾಡಿದರು. ನಾನು ಅವನಿಗೆ ಮರಣದಂಡನೆ ವಿಧಿಸಬೇಕೆಂಬುದು ಈ ಯೆಹೂದ್ಯರ ಅಪೇಕ್ಷೆಯಾಗಿತ್ತು.
15 Quando estive em Jerusalém, os sumos sacerdotes e os anciãos dos judeus vieram queixar-se dele comigo pedindo a sua condenação.
16 ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.
16 Respondi-lhes que não era costume dos romanos condenar homem algum, antes de ter confrontado o acusado com os seus acusadores e antes de se lhes dar a liberdade de defender-se dos crimes que lhes são imputados.
17 “ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.
17 Compareceram aqui. E eu, sem demora, logo no dia seguinte, dei audiência e ordenei que conduzissem esse homem.
18 ಯೆಹೂದ್ಯರು ನಿಂತುಕೊಂಡು ಅವನ ಮೇಲೆ ದೋಷಾರೋಪಣೆಗಳನ್ನು ಹೊರಿಸಿದರು. ಆದರೆ ನಾನು ಯೋಚಿಸಿದ ಪ್ರಕಾರ ಯೆಹೂದ್ಯರು ಅವನ ಮೇಲೆ ಯಾವ ಕೆಟ್ಟ ಅಪರಾಧವನ್ನಾಗಲಿ ಹೊರಿಸಲಿಲ್ಲ.
18 Apresentaram-se os seus acusadores, mas não o acusaram de nenhum dos crimes de que eu suspeitava.
19 ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.
19 Eram só desavenças entre eles a respeito da sua religião, e uma discussão a respeito de um tal Jesus, já morto, e que Paulo afirma estar vivo.
20 ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.
20 Vi-me perplexo quanto ao modo de inquirir essas questões e perguntei-lhe se queria ir a Jerusalém e ser ali julgado.
21 ಅದಕ್ಕೆ ಅವನು, ‘ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು’ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”
21 Mas, como Paulo apelou para o julgamento do imperador, mandei que fique detido até que o remeta a César.
22 ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು.
22 Agripa disse então a Festo: Eu também desejava ouvir esse homem. Ao que ele respondeu: Amanhã o ouvirás.
23 ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.
23 No dia seguinte, Agripa e Berenice apresentaram-se com grande pompa. E, entrando com os tribunos e as pessoas de mais relevo da cidade na sala de audiência, foi também Paulo introduzido por ordem de Festo.
24 ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.
24 Festo tomou a palavra: Ó rei, e todos vós que estais aqui presentes, vedes este homem contra quem os judeus em massa e com grandes gritos vieram reclamar a morte, tanto aqui como em Jerusalém.
25 ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.
25 Mas tenho averiguado que ele não fez coisa alguma digna de morte. Entretanto, havendo ele apelado para o imperador, determinei remeter-lho.
26 ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.
26 Mas dele não tenho nada de positivo que possa escrever ao imperador, e por isso mandei-o comparecer diante de vós, mormente diante de tua majestade, para que essa audiência apure alguma coisa que eu possa escrever.
27 ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”
27 Pois não me parece razoável remeter um preso, sem mencionar ao mesmo tempo as acusações formuladas contra ele.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 25, comparar traduções ou montar um estudo — tudo direto pelo WhatsApp.