Atos 27

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.
1 Ficou resolvido que devíamos embarcar para a Itália. Então entregaram Paulo e os outros presos a Júlio, um oficial romano que era do batalhão chamado “Batalhão do Imperador”.
2 ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.
2 Nós embarcamos num navio da cidade de Adramítio, que estava pronto para navegar para os portos da província da Ásia. E assim começamos a viagem. Aristarco, um macedônio da cidade de Tessalônica, estava conosco.
3 ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.
3 No dia seguinte chegamos ao porto de Sidom. Júlio tratava Paulo com bondade e lhe deu licença para ir ver os seus amigos e receber deles o que precisava.
4 ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.
4 Depois de sairmos de Sidom, navegamos ao norte da ilha de Chipre a fim de evitar os ventos que estavam soprando contra nós.
5 ಸಿಲಿಸಿಯಾಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ನಾವು ದಾಟಿದೆವು. ಬಳಿಕ ನಾವು ಲುಸಿಯ ಪ್ರಾಂತ್ಯದಲ್ಲಿರುವ “ಮುರ” ಎಂಬ ಊರಿಗೆ ಬಂದೆವು.
5 Atravessamos o mar em frente ao litoral da região da Cilícia e província da Panfília e chegamos a Mirra, uma cidade da província da Lícia.
6 ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು “ಮುರ”ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು.
6 Ali o oficial romano encontrou um navio da cidade de Alexandria, que ia para a Itália, e nos fez embarcar nele.
7 ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.
7 Navegamos bem devagar vários dias e com grande dificuldade chegamos em frente da cidade de Cnido. Como o vento não nos deixava continuar naquela direção, passamos pelo cabo Salmona da ilha de Creta e seguimos pelo lado sul daquela ilha, o qual é protegido dos ventos.
8 ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.
8 Assim fomos navegando bem perto do litoral e, ainda com dificuldade, chegamos a um lugar chamado “Bons Portos”, perto da cidade de Laseia.
9 ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.
9 Ficamos ali muito tempo, e tornou-se perigoso continuar a viagem porque o inverno estava chegando . Então Paulo avisou:
10 ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.
10 — Homens, estou vendo que daqui para diante a nossa viagem será perigosa. Haverá grandes prejuízos não somente com o navio e com a sua carga, mas também haverá perda de vidas.
11 ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
11 Mas o oficial romano tinha mais confiança no capitão e no dono do navio do que em Paulo.
12 ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.
12 O porto não era bom para passar o inverno. Por isso a maioria achava que devíamos sair dali e tentar chegar a Fênix. Essa cidade é um porto de Creta que tem um lado para o sudoeste e o outro para o noroeste. E eles achavam que poderíamos passar o inverno ali.
13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.
13 Começou a soprar do sul um vento fraco, e por isso eles pensaram que podiam fazer o que tinham planejado. Levantamos âncora e fomos navegando o mais perto possível do litoral de Creta.
14 ಆದರೆ “ಈಶಾನ್ಯ ಮಾರುತ” ಎಂಬ ಬಿರುಗಾಳಿಯು ದ್ವೀಪದಲ್ಲಿ ಬೀಸತೊಡಗಿ
14 Mas, de repente, um vento muito forte, chamado “Nordeste”, veio da ilha
15 ಹಡಗನ್ನು ಬಡಿದುಕೊಂಡು ಹೋಯಿತು. ಹಡಗು ಅದಕ್ಕೆ ಎದುರಾಗಿ ಚಲಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗಾಳಿಯು ಬೀಸುವ ಕಡೆಗೆ ಹೋಗತೊಡಗಿದೆವು.
15 e arrastou o navio de tal maneira, que não pudemos fazer com que ele seguisse na direção certa. Por isso desistimos e deixamos que o vento nos levasse.
16 ನಾವು “ಕಾವ್ದ” ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.
16 Para escaparmos do vento, passamos ao sul de uma pequena ilha chamada Cauda. Ali, com muita dificuldade, conseguimos recolher o bote do navio.
17 ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ “ಸರ್ತಿಸ್” ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.
17 Os marinheiros levantaram o bote para dentro do navio e amarraram o casco do navio com cordas grossas. Estavam com medo de que o navio fosse arrastado para os bancos de areia que ficam perto do litoral da Líbia. Então desceram as velas e deixaram que o navio fosse levado pelo vento.
18 ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.
18 E a terrível tempestade continuou. No dia seguinte começaram a jogar a carga no mar.
19 ಒಂದು ದಿನವಾದ ನಂತರ ಹಡಗಿನ ಉಪಕರಣಗಳನ್ನು ತಮ್ಮ ಕೈಯಾರೆ ಎಸೆದು ಬಿಟ್ಟರು.
19 E, no outro dia, os marinheiros, com as próprias mãos, jogaram no mar uma parte do equipamento do navio.
20 ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.
20 Durante muitos dias não pudemos ver o sol nem as estrelas, e o vento continuava soprando forte. Finalmente perdemos toda a esperança de nos salvarmos.
21 ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
21 Fazia muito tempo que eles não comiam nada. Então Paulo ficou de pé no meio deles e disse: — Homens, vocês deviam ter dado atenção ao que eu disse e ter ficado em Creta; e assim não teríamos tido toda esta perda e este prejuízo.
22 ಈಗಲಾದರೋ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.
22 Mas agora peço que tenham coragem. Ninguém vai morrer; vamos perder somente o navio.
23 ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.
23 Digo isso porque, na noite passada, um anjo do Deus a quem pertenço e sirvo apareceu a mim
24 ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.
24 e disse: “Paulo, não tenha medo! Você precisa ir até a presença do Imperador. E Deus, na sua bondade, já lhe deu a vida de todos os que estão viajando com você.”
25 ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.
25 Por isso, homens, tenham coragem! Eu confio em Deus e estou certo de que ele vai fazer o que me disse.
26 ಆದರೆ ನಾವು ಒಂದು ದ್ವೀಪದ ದಡವನ್ನು ತಲುಪಬೇಕಾಗಿದೆ” ಎಂದು ಹೇಳಿದನು.
26 Porém vamos ser arrastados para alguma ilha.
27 ಹದಿನಾಲ್ಕನೆಯ ರಾತ್ರಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡುತ್ತಾ ಪ್ರಯಾಣವನ್ನು ಮುಂದುವರಿಸಿದೆವು. ನಾವು ಭೂಮಿಗೆ ಸಮೀಪವಾಗಿದ್ದೇವೆಂದು ನಾವಿಕರು ಆಲೋಚಿಸಿಕೊಂಡರು.
27 Duas semanas depois, à noite, continuávamos sendo levados pela tempestade no mar Mediterrâneo. Mais ou menos à meia-noite, os marinheiros começaram a sentir que estávamos chegando perto de terra.
28 ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
28 Então jogaram no mar uma corda com um peso na ponta e viram que a água ali tinha trinta e seis metros de fundura. Mais adiante tornaram a medir, e deu vinte e sete metros.
29 ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.
29 Eles ficaram com muito medo de que o navio fosse bater contra as rochas. Por isso jogaram quatro âncoras da parte de trás do navio e oraram para que amanhecesse logo.
30 ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.
30 Aí os marinheiros tentaram escapar do navio. Baixaram o bote no mar, fingindo que iam jogar âncoras da parte da frente do navio.
31 ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.
31 Então Paulo disse ao oficial romano e aos soldados: — Se os marinheiros não ficarem no navio, vocês não poderão se salvar.
32 ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು.
32 Aí os soldados cortaram as cordas que prendiam o bote e o largaram no mar.
33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.
33 De madrugada Paulo pediu a todos que comessem alguma coisa e disse: — Já faz catorze dias que vocês estão esperando e durante este tempo não comeram nada.
34 ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
34 Agora comam alguma coisa, por favor. Vocês precisam se alimentar para poder continuar vivendo. Pois ninguém vai perder nem mesmo um fio de cabelo.
35 ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.
35 Em seguida Paulo pegou pão e deu graças a Deus diante de todos. Depois partiu o pão e começou a comer.
36 — ausente —
36 Então eles ficaram com mais coragem e também comeram.
37 — ausente —
37 No navio éramos ao todo duzentas e setenta e seis pessoas.
38 ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು.
38 Depois que todos comeram, jogaram o trigo no mar para que o navio ficasse mais leve.
39 ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
39 Quando amanheceu, os marinheiros não reconheceram a terra, mas viram uma baía onde havia uma praia. Então resolveram fazer o possível para encalhar o navio lá.
40 ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.
40 Eles cortaram as cordas das âncoras, e as largaram no mar, e desamarraram os lemes. Em seguida suspenderam a vela do lado dianteiro, para que pudessem seguir na direção da praia.
41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
41 Mas o navio bateu num banco de areia e ficou encalhado. A parte da frente ficou presa, e a de trás começou a ser arrebentada pela força das ondas.
42 ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.
42 Os soldados combinaram matar todos os prisioneiros, para que nenhum pudesse chegar até a praia e fugir.
43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.
43 Mas o oficial romano queria salvar Paulo e não deixou que fizessem isso. Pelo contrário, mandou que todos os que soubessem nadar fossem os primeiros a se jogar na água e a nadar até a praia.
44 ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.
44 E mandou também que os outros se salvassem, segurando-se em tábuas ou em pedaços do navio. E foi assim que todos nós chegamos a terra sãos e salvos.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 27, comparar traduções ou montar um estudo — tudo direto pelo WhatsApp.