Atos 7

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು.
1 E disse o sumo sacerdote: Porventura, é isto assim?
2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.
2 E ele disse: Varões irmãos e pais, ouvi. O Deus da glória apareceu a Abraão, nosso pai, estando na Mesopotâmia, antes de habitar em Harã,
3 ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’ ಎಂದು ಹೇಳಿದನು.
3 e disse-lhe: Sai da tua terra e dentre a tua parentela e dirige-te à terra que eu te mostrar.
4 “ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.
4 Então, saiu da terra dos caldeus e habitou em Harã. E dali, depois que seu pai faleceu, Deus o trouxe para esta terra em que habitais agora.
5 ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
5 E não lhe deu nela herança, nem ainda o espaço de um pé; mas prometeu que lhe daria a posse dela e, depois dele, à sua descendência, não tendo ele filho.
6 “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
6 E falou Deus assim: Que a sua descendência seria peregrina em terra alheia, e a sujeitariam à escravidão e a maltratariam por quatrocentos anos.
7 ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’ ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’ ಎಂದು ಹೇಳಿದನು.
7 E eu julgarei a nação que os tiver escravizado, disse Deus. E, depois disto, sairão e me servirão neste lugar.
8 “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
8 E deu-lhe o pacto da circuncisão; e, assim, gerou a Isaque e o circuncidou ao oitavo dia; e Isaque, a Jacó; e Jacó, aos doze patriarcas.
9 “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.
9 E os patriarcas, movidos de inveja, venderam a José para o Egito; mas Deus era com ele.
10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
10 E livrou-o de todas as suas tribulações e lhe deu graça e sabedoria ante Faraó, rei do Egito, que o constituiu governador sobre o Egito e toda a sua casa.
11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.
11 Sobreveio, então, a todo o país do Egito e de Canaã fome e grande tribulação; e nossos pais não achavam alimentos.
12 “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.)
12 Mas, tendo ouvido Jacó que no Egito havia trigo, enviou ali nossos pais, a primeira vez.
13 ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.
13 E, na segunda vez, foi José conhecido por seus irmãos, e a sua linhagem foi manifesta a Faraó.
14 ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.
14 E José mandou chamar a Jacó, seu pai, e a toda sua parentela, que era de setenta e cinco almas.
15 ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.
15 E Jacó desceu ao Egito e morreu, ele e nossos pais;
16 ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
16 e foram transportados para Siquém e depositados na sepultura que Abraão comprara por certa soma de dinheiro aos filhos de Hamor, pai de Siquém.
17 “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)
17 Aproximando-se, porém, o tempo da promessa que Deus tinha feito a Abraão, o povo cresceu e se multiplicou no Egito;
18 ಬಳಿಕ, ಬೇರೊಬ್ಬ ರಾಜನು ಈಜಿಪ್ಟನ್ನು ಆಳಲಾರಂಭಿಸಿದನು. ಅವನಿಗೆ ಯೋಸೇಫನ ಬಗ್ಗೆ ಏನೂ ತಿಳಿದಿರಲಿಲ್ಲ.
18 até que se levantou outro rei, que não conhecia a José.
19 ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.
19 Esse, usando de astúcia contra a nossa linhagem, maltratou nossos pais, ao ponto de os fazer enjeitar as suas crianças, para que não se multiplicassem.
20 “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.
20 Nesse tempo, nasceu Moisés, e era mui formoso, e foi criado três meses em casa de seu pai.
21 ಅವರು ಮೋಶೆಯನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ತೆಗೆದುಕೊಂಡಳು. ಆಕೆಯು ಅವನನ್ನು ತನ್ನ ಸ್ವಂತ ಮಗನಂತೆ ಬೆಳೆಸಿದಳು.
21 E, sendo enjeitado, tomou-o a filha de Faraó e o criou como seu filho.
22 ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.
22 E Moisés foi instruído em toda a ciência dos egípcios e era poderoso em suas palavras e obras.
23 “ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.
23 E, quando completou a idade de quarenta anos, veio-lhe ao coração ir visitar seus irmãos, os filhos de Israel.
24 ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.
24 E, vendo maltratado um deles, o defendeu e vingou o ofendido, matando o egípcio.
25 ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
25 E ele cuidava que seus irmãos entenderiam que Deus lhes havia de dar a liberdade pela sua mão; mas eles não entenderam.
26 “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.
26 E, no dia seguinte, pelejando eles, foi por eles visto e quis levá-los à paz, dizendo: Varões, sois irmãos; por que vos agravais um ao outro?
27 ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!
27 E o que ofendia o seu próximo o repeliu, dizendo: Quem te constituiu príncipe e juiz sobre nós?
28 ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’ ಎಂದು ಹೇಳಿದನು.
28 Queres tu matar-me, como ontem mataste o egípcio?
29 ಇದನ್ನು ಕೇಳಿದ್ದೇ ಮೋಶೆಯು ಈಜಿಪ್ಟನ್ನು ಬಿಟ್ಟು ಮಿದ್ಯಾನ್ಯರ ನಾಡಿಗೆ ಹೋಗಿ ವಿದೇಶಿಯವನಂತೆ ವಾಸಿಸತೊಡಗಿದನು. ಅಲ್ಲಿ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.
29 E a esta palavra fugiu Moisés e esteve como estrangeiro na terra de Midiã, onde gerou dois filhos.
30 “ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.
30 E, completados quarenta anos, apareceu-lhe o anjo do Senhor, no deserto do monte Sinai, numa chama de fogo de um sarçal.
31 ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು.
31 Então, Moisés, quando viu isto, se maravilhou da visão; e, aproximando-se para observar, foi-lhe dirigida a voz do Senhor,
32 ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
32 dizendo: Eu sou o Deus de teus pais, o Deus de Abraão, e o Deus de Isaque, e o Deus de Jacó. E Moisés, todo trêmulo, não ousava olhar.
33 “ಪ್ರಭುವು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು, ಈಗ ನೀನು ನಿಂತುಕೊಂಡಿರುವ ಸ್ಥಳ ಪರಿಶುದ್ಧವಾದದ್ದು.
33 E disse-lhe o Senhor: Tira as sandálias dos pés, porque o lugar em que estás é terra santa.
34 ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿದನು.
34 Tenho visto atentamente a aflição do meu povo que está no Egito, e ouvi os seus gemidos, e desci a livrá-los. Agora, pois, vem, e enviar-te-ei ao Egito.
35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
35 A este Moisés, ao qual haviam negado, dizendo: Quem te constituiu príncipe e juiz? A este enviou Deus como príncipe e libertador, pela mão do anjo que lhe aparecera no sarçal.
36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
36 Foi este que os conduziu para fora, fazendo prodígios e sinais na terra do Egito, no mar Vermelho e no deserto, por quarenta anos.
37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.
37 Este é aquele Moisés que disse aos filhos de Israel: O Senhor, vosso Deus, vos levantará dentre vossos irmãos um profeta como eu; a ele ouvireis.
38 ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
38 Este é o que esteve entre a congregação no deserto, com o anjo que lhe falava no monte Sinai, e com nossos pais, o qual recebeu as palavras de vida para no-las dar.
39 “ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.
39 Ao qual nossos pais não quiseram obedecer, antes o rejeitaram e, em seu coração, se tornaram ao Egito,
40 ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ಎಂದರು.
40 dizendo a Arão: Faze-nos deuses que vão adiante de nós; porque a esse Moisés, que nos tirou da terra do Egito, não sabemos o que lhe aconteceu.
41 ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!
41 E, naqueles dias, fizeram o bezerro, e ofereceram sacrifícios ao ídolo, e se alegraram nas obras das suas mãos.
42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ,
42 Mas Deus se afastou e os abandonou a que servissem ao exército do céu, como está escrito no livro dos profetas: Porventura, me oferecestes vítimas e sacrifícios no deserto por quarenta anos, ó casa de Israel?
43 ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು
43 Antes, tomastes o tabernáculo de Moloque e a estrela do vosso deus Renfã, figuras que vós fizestes para as adorar. Transportar-vos-ei, pois, para além de Babilônia.
44 “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
44 Estava entre nossos pais no deserto o tabernáculo do Testemunho (como ordenara aquele que disse a Moisés que o fizesse segundo o modelo que tinha visto),
45 ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
45 o qual nossos pais, recebendo-o também, o levaram com Josué, quando entraram na posse das nações que Deus lançou para fora da presença de nossos pais, até aos dias de Davi,
46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.
46 que achou graça diante de Deus e pediu que pudesse achar tabernáculo para o Deus de Jacó.
47 ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ.
47 E Salomão lhe edificou casa;
48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:
48 mas o Altíssimo não habita em templos feitos por mãos de homens, como diz o profeta:
49 ‘ಪ್ರಭುವು ಹೀಗೆನ್ನುತ್ತಾನೆ,
49 O céu é o meu trono, e a terra, o estrado dos meus pés. Que casa me edificareis, diz o Senhor, ou qual é o lugar do meu repouso?
50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’” ಯೆಶಾಯ 66:1-2
50 Porventura, não fez a minha mão todas estas coisas?
51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
51 Homens de dura cerviz e incircuncisos de coração e ouvido, vós sempre resistis ao Espírito Santo; assim, vós sois como vossos pais.
52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
52 A qual dos profetas não perseguiram vossos pais? Até mataram os que anteriormente anunciaram a vinda do Justo, do qual vós agora fostes traidores e homicidas;
53 ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!”
53 vós que recebestes a lei por ordenação dos anjos e não a guardastes.
54 ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.
54 E, ouvindo eles isto, enfureciam-se em seu coração e rangiam os dentes contra ele.
55 ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,
55 Mas ele, estando cheio do Espírito Santo e fixando os olhos no céu, viu a glória de Deus e Jesus, que estava à direita de Deus,
56 “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.
56 e disse: Eis que vejo os céus abertos e o Filho do Homem, que está em pé à mão direita de Deus.
57 ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,
57 Mas eles gritaram com grande voz, taparam os ouvidos e arremeteram unânimes contra ele.
58 ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,
58 E, expulsando-o da cidade, o apedrejavam. E as testemunhas depuseram as suas vestes aos pés de um jovem chamado Saulo.
59 ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.
59 E apedrejaram a Estêvão, que em invocação dizia: Senhor Jesus, recebe o meu espírito.
60 ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.
60 E, pondo-se de joelhos, clamou com grande voz: Senhor, não lhes imputes este pecado. E, tendo dito isto, adormeceu.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 7, comparar traduções ou montar um estudo — tudo direto pelo WhatsApp.