Atos 9
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB
1 ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,
1 Saulo, porém, respirando ainda ameaças e mortes contra os discípulos do Senhor, dirigiu-se ao sumo sacerdote,
2 ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
2 e pediu-lhe cartas para Damasco, para as sinagogas, a fim de que, caso encontrasse alguns do Caminho, quer homens quer mulheres, os conduzisse presos a Jerusalém.
3 ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.
3 Mas, seguindo ele viagem e aproximando-se de Damasco, subitamente o cercou um resplendor de luz do céu;
4 ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.
4 e, caindo por terra, ouviu uma voz que lhe dizia: Saulo, Saulo, por que me persegues?
5 ಸೌಲನು, “ಪ್ರಭುವೇ, ನೀನು ಯಾರು?” ಎಂದನು.
5 Ele perguntou: Quem és tu, Senhor? Respondeu o Senhor: Eu sou Jesus, a quem tu persegues;
6 ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.
6 mas levanta-te e entra na cidade, e lá te será dito o que te cumpre fazer.
7 ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.
7 Os homens que viajavam com ele quedaram-se emudecidos, ouvindo, na verdade, a voz, mas não vendo ninguém.
8 ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.
8 Saulo levantou-se da terra e, abrindo os olhos, não via coisa alguma; e, guiando-o pela mão, conduziram-no a Damasco.
9 ಮೂರು ದಿನಗಳವರೆಗೆ ಸೌಲನಿಗೆ ಏನೂ ಕಾಣಲಿಲ್ಲ. ಅವನು ಊಟವನ್ನೂ ಮಾಡಲಿಲ್ಲ ನೀರನ್ನೂ ಕುಡಿಯಲಿಲ್ಲ.
9 E esteve três dias sem ver, e não comeu nem bebeu.
10 ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು.
10 Ora, havia em Damasco certo discípulo chamado Ananias; e disse-lhe o Senhor em visão: Ananias! Respondeu ele: Eis-me aqui, Senhor.
11 ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
11 Ordenou-lhe o Senhor: Levanta-te, vai à rua chamada Direita e procura em casa de Judas um homem de Tarso chamado Saulo; pois eis que ele está orando;
12 ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.
12 e viu um homem chamado Ananias entrar e impor-lhe as mãos, para que recuperasse a vista.
13 ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.
13 Respondeu Ananias: Senhor, a muitos ouvi acerca desse homem, quantos males tem feito aos teus santos em Jerusalém;
14 ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.
14 e aqui tem poder dos principais sacerdotes para prender a todos os que invocam o teu nome.
15 ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.
15 Disse-lhe, porém, o Senhor: Vai, porque este é para mim um vaso escolhido, para levar o meu nome perante os gentios, e os reis, e os filhos de Israel;
16 ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.
16 pois eu lhe mostrarei quanto lhe cumpre padecer pelo meu nome.
17 ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
17 Partiu Ananias e entrou na casa e, impondo-lhe as mãos, disse: Irmão Saulo, o Senhor Jesus, que te apareceu no caminho por onde vinhas, enviou-me para que tornes a ver e sejas cheio do Espírito Santo.
18 ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
18 Logo lhe caíram dos olhos como que umas escamas, e recuperou a vista: então, levantando-se, foi batizado.
19 ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು.
19 E, tendo tomado alimento, ficou fortalecido. Depois demorou-se alguns dias com os discípulos que estavam em Damasco;
20 ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.
20 e logo nas sinagogas pregava a Jesus, que este era o filho de Deus.
21 ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.
21 Todos os seus ouvintes pasmavam e diziam: Não é este o que em Jerusalém perseguia os que invocavam esse nome, e para isso veio aqui, para os levar presos aos principais sacerdotes?
22 ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
22 Saulo, porém, se fortalecia cada vez mais e confundia os judeus que habitavam em Damasco, provando que Jesus era o Cristo.
23 ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.
23 Decorridos muitos dias, os judeus deliberaram entre si matá-lo.
24 ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.
24 Mas as suas ciladas vieram ao conhecimento de Saulo. E como eles guardavam as portas de dia e de noite para tirar-lhe a vida,
25 ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.
25 os discípulos, tomando-o de noite, desceram-no pelo muro, dentro de um cesto.
26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
26 Tendo Saulo chegado a Jerusalém, procurava juntar-se aos discípulos; mas todos o temiam, não crendo que fosse discípulo.
27 ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.
27 Então Barnabé, tomando-o consigo, o levou aos apóstolos, e lhes contou como no caminho ele vira o Senhor e que este lhe falara, e como em Damasco pregara ousadamente em nome de Jesus.
28 ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.
28 Assim andava com eles em Jerusalém, entrando e saindo,
29 ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.
29 e pregando ousadamente em nome do Senhor. Falava e disputava também com os helenistas; mas procuravam matá-lo.
30 ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.
30 Os irmãos, porém, quando o souberam, acompanharam-no até Cesaréia e o enviaram a Tarso.
31 ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.
31 Assim, pois, a igreja em toda a Judéia, Galiléia e Samária, tinha paz, sendo edificada, e andando no temor do Senhor; e, pelo auxílio do Espírito Santo, se multiplicava.
32 ಜೆರುಸಲೇಮಿನ ಸುತ್ತಮುತ್ತಲ್ಲಿದ್ದ ಊರುಗಳಲ್ಲೆಲ್ಲಾ ಪೇತ್ರನು ಪ್ರಯಾಣ ಮಾಡುತ್ತಿರುವಾಗ ಲುದ್ದ ಎಂಬ ಊರಲ್ಲಿ ವಾಸವಾಗಿರುವ ವಿಶ್ವಾಸಿಗಳನ್ನು ಭೇಟಿಯಾಗಲು ಅಲ್ಲಿಗೆ ಹೋದನು.
32 E aconteceu que, passando Pedro por toda parte, veio também aos santos que habitavam em Lida.
33 ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.
33 Achou ali certo homem, chamado Enéias, que havia oito anos jazia numa cama, porque era paralítico.
34 ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.
34 Disse-lhe Pedro: Enéias, Jesus Cristo te cura; levanta e faze a tua cama. E logo se levantou.
35 ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.
35 E viram-no todos os que habitavam em Lida e Sarona, os quais se converteram ao Senhor.
36 ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.
36 Havia em Jope uma discípula por nome Tabita, que traduzido quer dizer Dorcas, a qual estava cheia de boas obras e esmolas que fazia.
37 ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು.
37 Ora, aconteceu naqueles dias que ela, adoecendo, morreu; e, tendo-a lavado, a colocaram no cenáculo.
38 ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.
38 Como Lida era perto de Jope, ouvindo os discípulos que Pedro estava ali, enviaram-lhe dois homens, rogando-lhe: Não te demores em vir ter conosco.
39 ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.
39 Pedro levantou-se e foi com eles; quando chegou, levaram-no ao cenáculo; e todas as viúvas o cercaram, chorando e mostrando-lhe as túnicas e vestidos que Dorcas fizera enquanto estava com elas.
40 ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
40 Mas Pedro, tendo feito sair a todos, pôs-se de joelhos e orou; e voltando-se para o corpo, disse: Tabita, levanta-te. Ela abriu os olhos e, vendo a Pedro, sentou-se.
41 ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.
41 Ele, dando-lhe a mão, levantou-a e, chamando os santos e as viúvas, apresentou-lha viva.
42 ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.
42 Tornou-se isto notório por toda a Jope, e muitos creram no Senhor.
43 ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.
43 Pedro ficou muitos dias em Jope, em casa de um curtidor chamado Simão.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 9, comparar traduções ou montar um estudo — tudo direto pelo WhatsApp.