Daniel 1

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಈ ಘಟನೆ ನಡೆಯಿತು.
1 No terceiro ano do reinado de Jeoaquim, rei de Judá, Nabucodonosor, rei da Babilônia, veio a Jerusalém e a sitiou.
2 ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.
2 E o Senhor entregou Jeoaquim, rei de Judá, nas suas mãos, e também alguns dos utensílios do templo de Deus. Ele levou os utensílios para o templo do seu deus na terra de Sinear e os colocou na casa do tesouro do seu deus.
3 ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ಪೆನಜನಿಗೆ ಆದೇಶಕೊಟ್ಟನು. ಅಶ್ಪೆನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ಪೆನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು.
3 Então o rei ordenou que Aspenaz, o chefe dos oficiais da sua corte, trouxesse alguns dos israelitas da família real e da nobreza;
4 ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.
4 jovens sem defeito físico, de boa aparência, cultos, inteligentes, que dominassem os vários campos do conhecimento e fossem capacitados para servir no palácio do rei. Ele devia ensinar-lhes a língua e a literatura dos babilônios.
5 ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.
5 O rei designou-lhes uma porção diária de comida e de vinho da própria mesa do rei. Eles receberiam um treinamento durante três anos, e depois disso passariam a servir o rei.
6 ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.
6 Entre esses estavam alguns que vieram de Judá: Daniel, Hananias, Misael e Azarias.
7 ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.
7 O chefe dos oficiais deu-lhes novos nomes: a Daniel deu o nome de Beltessazar; a Hananias, Sadraque; a Misael, Mesaque; e a Azarias, Abede-Nego.
8 ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.
8 Daniel, contudo, decidiu não se tornar impuro com a comida e com o vinho do rei, e pediu ao chefe dos oficiais permissão para se abster deles.
9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.
9 E Deus fez com que o homem fosse bondoso para com Daniel e tivesse simpatia por ele.
10 ಆದರೆ ಅಶ್ಪೆನಜನು ದಾನಿಯೇಲನಿಗೆ, “ನಾನು ನನ್ನ ಒಡೆಯನಾದ ಅರಸನಿಗೆ ಹೆದರುತ್ತೇನೆ. ಈ ಆಹಾರ ಮತ್ತು ಪಾನೀಯಗಳನ್ನು ನಿನಗೆ ಕೊಡಬೇಕೆಂದು ಅರಸನು ಅಪ್ಪಣೆ ಮಾಡಿದ್ದಾನೆ. ನೀನು ಈ ಆಹಾರವನ್ನು ತೆಗೆದುಕೊಳ್ಳದಿದ್ದರೆ ಅಶಕ್ತನಾಗಿಯೂ ಅಸ್ವಸ್ಥನಾಗಿಯೂ ಕಾಣಿಸುವೆ. ನೀನು ನಿನ್ನ ವಯಸ್ಸಿನ ಬೇರೆ ತರುಣರಿಗಿಂತ ಸೊರಗಿದವನಾಗಿ ಕಾಣುವೆ. ಅರಸನು ಇದನ್ನು ಗಮನಿಸಿ ನನ್ನ ಮೇಲೆ ಕೋಪಗೊಂಡು ನನ್ನ ತಲೆಯನ್ನೇ ಕತ್ತರಿಸಬಹುದು. ಅದಕ್ಕೆ ನೀನೇ ಹೊಣೆಯಾಗುವೆ” ಎಂದನು.
10 Apesar disso, ele disse a Daniel: "Tenho medo do rei, o meu senhor, que determinou a comida e a bebida de vocês. E se ele os achar menos saudáveis que os outros jovens da mesma idade? O rei poderia pedir a minha cabeça por causa de vocês".
11 ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು.
11 Daniel disse então ao homem que o chefe dos oficiais tinha encarregado de cuidar de Daniel, Hananias, Misael e Azarias:
12 ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.
12 "Peço-lhe que faça uma experiência com os seus servos durante dez dias: Não nos dê nada além de vegetais para comer e água para beber.
13 ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು.
13 Depois compare a nossa aparência com a dos jovens que comem a comida do rei, e trate os seus servos de acordo com o que você concluir".
14 ಕಾವಲುಗಾರನು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳನ್ನು ಹತ್ತು ದಿನಗಳವರೆಗೆ ಪರೀಕ್ಷಿಸಲು ಒಪ್ಪಿಕೊಂಡನು.
14 Ele concordou e fez a experiência com eles durante dez dias.
15 ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.
15 Passados os dez dias eles pareciam mais saudáveis e mais fortes do que todos os jovens que comiam a comida da mesa do rei.
16 ಆದ್ದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.
16 Assim o encarregado tirou a comida especial e o vinho que haviam sido designados e em lugar disso lhes dava vegetais.
17 ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.
17 A esses quatro jovens Deus deu sabedoria e inteligência para conhecerem todos os aspectos da cultura e da ciência. E Daniel, além disso, sabia interpretar todo tipo de visões e sonhos.
18 ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಆ ಅವಧಿ ಮುಗಿದ ಮೇಲೆ ಅಶ್ಪೆನಜನು ಆ ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು.
18 Ao final do tempo estabelecido pelo rei para que os jovens fossem trazidos à sua presença, o chefe dos oficiais os apresentou a Nabucodonosor.
19 ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದ್ದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.
19 O rei conversou com eles, e não encontrou ninguém comparável a Daniel, Hananias, Misael e Azarias; de modo que eles passaram a servir o rei.
20 ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.
20 O rei lhes fez perguntas sobre todos os assuntos nos quais se exigia sabedoria e conhecimento, e descobriu que eram dez vezes mais sábios do que todos os magos e encantadores de todo o seu reino.
21 ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆ ವರ್ಷದ ತನಕ ಅರಸನ ಸೇವಕನಾಗಿ ಮುಂದುವರಿದನು.
21 E Daniel permaneceu ali até o primeiro ano do rei Ciro.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Daniel 1, comparar traduções ou montar um estudo — tudo direto pelo WhatsApp.